ಕಲ್ಮನೆ ಗ್ರಾಮದಲ್ಲಿ ಕಲ್ಯಾಣ ಚಾಲುಕ್ಯರ ಎರಡು ಶಾಸನ ಪತ್ತೆ…!!!

Listen to this article

ಕಲ್ಮನೆ ಗ್ರಾಮದಲ್ಲಿ ಕಲ್ಯಾಣ ಚಾಲುಕ್ಯರ ಎರಡು ಶಾಸನ ಪತ್ತೆ
ಶಿವಮೊಗ್ಗ  ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ನಿರ್ದೇಶಕರಾದ(ಪುರಾತತ್ತ್ವ)(ಪ್ರ) ಡಾ.ಆರ್.ಶೇಜೇಶ್ವರ ಮತ್ತು ಮಂಜಪ್ಪ ಚುರ್ಚಿಗುಂಡಿ ಇವರು ಕ್ಷೇತ್ರ ಕಾರ್ಯ ಕೈಗೊಂಡಾಗ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಕಲ್ಮನೆ ಗ್ರಾಮದ ಬನ್ನಿಕಾಳಮ್ಮನ ಗುಡಿಯ ಹತ್ತಿರ ಕಲ್ಯಾಣ ಚಾಲುಕ್ಯರ ಎರಡು ಶಾಸನಗಳು ಪತ್ತೆಯಾಗಿವೆ.
ಈ ಎರಡು ಶಾಸನಗಳು ಕಲ್ಲಿನ ಶಾಸನಗಳಾಗಿದ್ದು ಕಲ್ಯಾಣ ಚಾಲುಕ್ಯ ಅರಸ ಆರನೆಯ ವಿಕ್ರಮಾದಿತ್ಯನ ಕ್ರಿ.ಶ.1084 ಹಾಗೂ 1096 ರ ಕಾಲಕ್ಕೆ ಸೇರಿದವುಗಳಾಗಿವೆ.
ಒಂದನೇ ಶಾಸನವು ಕ್ರಿ.ಶ 1084 ಕ್ಕೆ ಸೇರಿದ್ದಾಗಿದೆ. ಕಲ್ಮನೆಯ ಮಲ್ಲಿಕಾರ್ಜುನ ದೇವರಿಗೆ ದಾನ ಬಿಟ್ಟ ವಿಷಯವಿದ್ದು ಶಾಸನದ ಮೇಲ್ಬಾಗದಲ್ಲಿ ಸೂರ್ಯ ಚಂದ್ರ. ಲಿಂಗ ಪೂಜೆ ಮಾಡುತ್ತಿರುವ ಯತಿ, ನೀರಿನ ಕೊಡ, ಹಸು ಮತ್ತು ಕರುವಿನ ಉಬ್ಬು ಶಿಲ್ಪ ಇದೆ. ಸಂಕಗೊಣ್ಣನ ಹೆಂಡತಿ ಬೆಳೆಂಬೆ ಭೂಮಿ ದಾನ ನೀಡಿದ ವಿಷಯ ಇದೆ.
ಎರಡನೇ ಶಾಸನವು 18 ಸಾಲುಗಳಿಂದ ಕೂಡಿದೆ. ಕಲ್ಯಾಣ ಚಾಲುಕ್ಯ ಅರಸ ಆರನೆಯ ವಿಕ್ರಮಾದಿತ್ಯನ ಕ್ರಿ.ಶ 1096 ಕ್ಕೆ ಸೇರಿದ ಶಾಸನವಾಗಿದ್ದು ಇದರ ಮೇಲ್ಬಾಗದಲ್ಲೂ ಶಿವಲಿಂಗ ಮತ್ತು ಹಸು ಚಿತ್ರ ಇದೆ. ಇದು ಬಹಳ ಸವೆದಿದೆ. ಇಲ್ಲಿನ ಬೆಟ್ಟೇಶ್ವರ ದೇವರ ನಂದಾ ದೀಪಕ್ಕೆ 5 ಗದ್ಯಾಣ ದಾನ ಬಿಡಲಾಗಿದೆ. ಈ ಶಾಸನದಲ್ಲಿ ಕಲ್ಮನೆ ಗ್ರಾಮದ ಹೆಸರು ಕಲ್ಸಲವಾನಿ ಎಂದು ಉಲ್ಲೇಖವಾಗಿದೆ. ಶಾಸನವನ್ನು ಡಾ.ಜಗದೀಶ ಓದಿ ಅರ್ಥೈಸಿದ್ದು ಗ್ರಾಮಸ್ಥರಾದ ಡೈರಿ ಪರಶುರಾಮ, ಲೋಹಿತಾಚಾರ್, ಮಾಯಾಚಾರ್, ಶಿವಮೂರ್ತಪ್ಪ ಇವರುಗಳಿಗೆ ಧನ್ಯವಾದಗಳನ್ನು ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲ್ಲೂಕಿನ ಕಮಲಾಪುರ-ಹಂಪಿ ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯ ನಿರ್ದೇಶಕರು(ಪುರಾತತ್ವ)(ಪ್ರ) ಡಾ.ಶೇಜೇಶ್ವರ ತಿಳಿಸಿದ್ದಾರೆ…

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend