ಇಂದು ರೀಚ್ ಸಂಸ್ಥೆ REACH (Rural Environment Awareness Community Help) ಸಂಡೂರು ತಾಲ್ಲೂಕು ಘಟಕದಿಂದ ಸುಶೀಲನಗರ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಬಾಲ್ಯ ವಿವಾಹ ಮುಕ್ತ ಭಾರತ, ಸುರಕ್ಷಿತ ಬಾಲ್ಯ, ಸುರಕ್ಷಿತ ಭಾರತ. ಬಾಲ್ಯ ವಿವಾಹ ನಿಷೇಧ ಕಾಯ್ದೆ ಹಾಗೂ ಬಾಲ್ಯ ವಿವಾಹ ಮುಕ್ತ ಜಿಲ್ಲೆ, ರಾಜ್ಯವನ್ನು ಬಾಲ್ಯ ವಿವಾಹ ಮುಕ್ತವನ್ನಾಗಿಸಲು ಸರ್ಕಾರಿ ಶಾಲಾ ಮಕ್ಕಳಿಗೆ ಜಾಗೃತಿ ಮೂಡಿಸಲು ಇಂದು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಬಾಲ್ಯ ವಿವಾಹ ಮುಕ್ತ ಭಾರತ ಎಂಬ ಸಂದೇಶವನ್ನು ಸಾರಲು ಭಾರತದ ಪ್ರತಿಯೊಬ್ಬ ಪ್ರಜೆಯೂ ಮಕ್ಕಳ ಹಕ್ಕುಗಳ ಸಂರಕ್ಷಣೆಗೆ, ಹೆಣ್ಣು ಮಕ್ಕಳನ್ನು ಬಾಲ್ಯ ವಿವಾಹದಿಂದ ರಕ್ಷಿಸಲು ಪ್ರತಿಜ್ಞೆ ವಿಧಿಯನ್ನು ಕೈಗೊಳ್ಳುವ ಮೂಲಕ ಗ್ರಾಮ, ಸಂಡೂರು ತಾಲ್ಲೂಕು ಹಾಗೂ ಬಳ್ಳಾರಿ ಜಿಲ್ಲೆಯನ್ನು ಬಾಲ್ಯ ವಿವಾಹ ಮುಕ್ತವನ್ನಾಗಿಸಲು ಪ್ರತಿಯೊಬ್ಬರೂ ಪಣ ತೊಡಬೇಕಿದೆ. ನಂತರದಲ್ಲಿ SSLC ಮಕ್ಕಳಿಗೆ ಬಾಲ್ಯ ವಿವಾಹ ನಿಷೇಧ ಕಾಯ್ದೆ ಹಾಗೂ ಬಾಲ್ಯ ವಿವಾಹವನ್ನು ತಡೆಗಟ್ಟುವ ನಿಟ್ಟಿನಲ್ಲಿ ತೆಗೆದುಕೊಳ್ಳಬೇಕಾದ ಕಾನೂನಿನ ಸಹಕಾರದ ಬಗ್ಗೆ ಜಾಗೃತಿ ಮೂಡಿಸಲಾಯಿತು. ಹೆಣ್ಣು ಮಕ್ಕಳನ್ನು ಶಿಕ್ಷಣದಿಂದ ವಂಚಿತಗೊಳಿಸಿ ಅವರನ್ನು ಚಿಕ್ಕವಯಸ್ಸಿನಲ್ಲಿ ಮದುವೆ ಮಾಡುವುದರಿಂದ ಆ ಹೆಣ್ಣು ಮಕ್ಕಳು ಎದುರಿಸುವ ದೈಹಿಕ, ಮಾನಸಿಕ ಮತ್ತು ಸಾಮಾಜಿಕ ತೊಂದರೆಗಳು ಹೇಗೆ ಮಕ್ಕಳ ಮನಸ್ಸಿನ ಮೇಲೆ ಪರಿಣಾಮ ಬೀರುತ್ತವೆ ಎಂಬುವುದನ್ನು ರೀಚ್ ಸಂಸ್ಥೆ ಸಂಡೂರು ತಾಲೂಕು ಸಂಯೋಜಕರಾದ ಡಾ ಎರ್ರಿಸ್ವಾಮಿ ಹೆಚ್ ಅವರು ಹೇಳಿದರು. ಈ ಸಂದರ್ಭದಲ್ಲಿ ಶಾಲಾ ಪ್ರಭಾರಿ ಮುಖ್ಯಗುರುಗಳಾದ ಮಂಜುನಾಥ ಹಾಗೂ ನರಸಿಂಗ, ಶಾಲಾ ಶಿಕ್ಷಕರು, ಸಿಬ್ಬಂದಿ ಭಾಗವಹಿಸಿದರು.ಡಾ. ಎರ್ರಿಸ್ವಾಮಿ ಹೆಚ್ ರೀಚ್ ಸಂಸ್ಥೆ ಸಂಡೂರು ತಾಲೂಕು ಸಂಯೋಜಕರು- 8867962218….
ವರದಿ.ಕಾಶಪ್ಪ ಸಂಡೂರು ಗ್ರಾಮಾಂತರ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030