ಬಳ್ಳಾರಿ :ಜಿಲ್ಲೆಯ ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆ ನಿಮಿತ್ತ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಸಂಸದ ಈ.ತುಕಾರಾಂ ಅವರ ಪತ್ನಿ ಅನ್ನಪೂರ್ಣ ತುಕಾರಾಂ ಅವರು ಇಂದು ನಾಮಪತ್ರ ಸಲ್ಲಿಸಿದರು.
ಭರ್ಜರಿ ರೋಡ್ ಶೋ ನಡೆಸಿ ಶಕ್ತಿ ಪ್ರದರ್ಶನ ಮಾಡುವ ಮೂಲಕ ತಹಶೀಲ್ದಾರ್ ಕಚೇರಿಗೆ ತೆರಳಿ ತಮ್ಮ ನಾಮಪತ್ರ ಸಲ್ಲಿಕೆ ಮಾಡಿದರು.
ಸಂಸದ ಈ ತುಕಾರಾಂ, ಮಾಜಿ ಸಚಿವ ಅಲ್ಲಂ ವೀರಭದ್ರಪ್ಪ ನಾಮಪತ್ರ ಸಲ್ಲಿಕೆ ವೇಳೆ ಸಾಥ್ ನೀಡಿದರು. ರೋಡ್ ಶೋ ನಡೆಯುವಾಗಲೇ ಮಧ್ಯದಲ್ಲಿಯೇ ತಹಶೀಲ್ದಾರ್ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಕೆ ಮಾಡಿದರು. ಅತ್ತ ಚನ್ನಪಟ್ಟಣದಿಂದ ಈ ದಿನವೇ ಕೈ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಅವರೂ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಕ್ಷೇತ್ರದ ಶಾಸಕರಾಗಿದ್ದ ಈ. ತುಕಾರಂ ಗೆಲುವು ಸಾಧಿಸಿ ಸಂಸದರಾದ ಕಾರಣ ಸಂಡೂರು ಕ್ಷೇತ್ರ ತೆರವಾಗಿತ್ತು. ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ವಿರುದ್ಧ ಬಿಜೆಪಿಯಿಂದ ಬಂಗಾರು ಹನುಮಂತು ಕಣದಲ್ಲಿ ಇದ್ದಾರೆ…
ವರದಿ. ಉಜ್ಜಿನಯ್ಯ ಸಂಡೂರು
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030