ಸಂಡೂರು ವಿಧಾನಸಭೆ ಉಪಚುನಾವಣೆ; ಸಂಡೂರು ವ್ಯಾಪ್ತಿಯಲ್ಲಿ ನ.13 ರಂದು ವೇತನ ಸಹಿತ ರಜೆ
ಬಳ್ಳಾರಿ:95-ಸಂಡೂರು (ಪ.ಪಂ) ವಿಧಾನಸಭಾ ಕ್ಷೇತ್ರ ಉಪ ಚುನಾವಣೆಗೆ ನ.13 ರಂದು ಮತದಾನ ನಡೆಯಲಿದ್ದು, ಮತದಾರರು ಮತ ಚಲಾಯಿಸಲು ಸಂಡೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಎಲ್ಲಾ ರಾಜ್ಯ ಸರ್ಕಾರಿ ಕಚೇರಿಗಳಿಗೆ, ಶಾಲಾ ಕಾಲೇಜುಗಳಿಗೆ (ಅನುದಾನಿತ ಶಿಕ್ಷಣ ಸಂಸ್ಥೆಗಳು ಒಳಗೊಂಡoತೆ) ಹಾಗೂ ರಾಷ್ಟಿಕೃತ ಬ್ಯಾಂಕುಗಳು, ಜೀವವಿಮಾ ನಿಗಮ, ಹಣಕಾಸು ಸಂಸ್ಥೆಗಳು ಹಾಗೂ ಇನ್ನಿತರೆ ಔಧ್ಯಮಿಕ ಸಂಸ್ಥೆಗಳಲ್ಲಿ ಖಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ಎಲ್ಲಾ ಅರ್ಹ ಮತದಾರರಿಗೆ ಸೀಮಿತವಾದಂತೆ ಹಾಗೂ ಮತದಾನ ಮಾಡಲು ನೆಗೋಶಬಲ್ ಇನ್ಸ್ಟ್ರುಮೆಂಟ್ ಅಕ್ಟ್ 1881, ಕಲಂ 135ಬಿ ಅಡಿ ಎಲ್ಲಾ ಉಪಬಂಧಗಳನ್ವಯ ಒಂದು ದಿನದ ವೇತನ ಸಹಿತ ರಜೆಯನ್ನು ಜಿಲ್ಲಾ ಚುನಾವಣಾಧಿಕಾರಿ ಆದ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆದೇಶಿಸಿದ್ದಾರೆ.
ಈ ರಜೆಯು ತುರ್ತು ಸೇವೆಗಳ ಮೇಲೆ ಇರುವ ಸರ್ಕಾರಿ ನೌಕರರಿಗೆ ಅನ್ವಯಿಸುವುದಿಲ್ಲ. ಆದಾಗ್ಯೂ ಕೂಡ ತುರ್ತು ಸೇವೆಯಡಿ ಕೆಲಸ ಮಾಡುವ ನೌಕರರಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ಸಂಬoಧಿಸಿದ ಇಲಾಖೆ ಹಾಗೂ ಸಂಘ ಸಂಸ್ಥೆಗಳು ವ್ಯವಸ್ಥೆ ಮಾಡಬೇಕು ಹಾಗೂ ಈ ಚುನಾವಣಾ ಕಾರ್ಯಗಳಿಗೆ ನಿಯೋಜಿಸಲ್ಪಟ್ಟ ಎಲ್ಲಾ ಸರ್ಕಾರಿ ನೌಕರರುಗಳು ಚುನಾವಣಾ ಕಾರ್ಯಕ್ಕೆ ಹಾಜರಾಗಬೇಕು ಎಂದು ಅವರು ತಿಳಿಸಿದ್ದಾರೆ.
ವರದಿ. ಉಜ್ಜಿನಯ್ಯ ಸಂಡೂರು
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030