ಸಂಡೂರು ವಿಧಾನಸಭೆ ಉಪಚುನಾವಣೆ 2024 ಶಾಂತಿಯುತ ಮತದಾನ, ಮತ ಹಕ್ಕು ಚಲಾಯಿಸಿದ ಮತದಾರರು…!!!

Listen to this article

ಸಂಡೂರು ವಿಧಾನಸಭೆ ಉಪಚುನಾವಣೆ 2024
ಶಾಂತಿಯುತ ಮತದಾನ, ಮತ ಹಕ್ಕು ಚಲಾಯಿಸಿದ ಮತದಾರರು

ಬಳ್ಳಾರಿ:ಸಂಡೂರು ವಿಧಾನಸಭೆ ಉಪಚುನಾವಣೆಗೆ ನ.13 ರ ಬುಧವಾರದಂದು ಬೆಳಿಗ್ಗೆ 07 ಗಂಟೆಯಿoದ ಸಂಡೂರು ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ವಿವಿಧೆಡೆ ಮತದಾನ ಬಹುತೇಕ ಶಾಂತಿಯುತವಾಗಿ ಜರುಗಿತು.
ಸಂಡೂರು ತಾಲ್ಲೂಕಿನ ಸಂಡೂರು ಪಟ್ಟಣ, ಕುಡತಿನಿ, ತೋರಣಗಲ್ಲು ಮತ್ತು ವಡ್ಡು ಗ್ರಾಮಗಳಲ್ಲಿ ಮತದಾರರು ಸರತಿ ಸಾಲಿನಲ್ಲಿ ಬಂದು ತಮ್ಮ ಮತ ಹಕ್ಕು ಚಲಾಯಿಸಿದ್ದು ಕಂಡುಬoದಿತು.
ಕುಡತಿನಿ ಪಟ್ಟಣದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಂದೇ ಕಡೆ ಇರುವ 186, 187, 188 ಮತ್ತು 189 ಮತಗಟ್ಟೆ ಕೇಂದ್ರಗಳಲ್ಲಿ ಮಹಿಳೆಯರು ಸಾಲಾಗಿ ಬಂದು ತಮ್ಮ ಮತ ಚಲಾವಣೆ ಮಾಡಿದರು. ಸುಶೀಲಾನಗರ ಗ್ರಾಮದಲ್ಲಿಯೂ ಮಹಿಳೆಯರು ಸಾಲು ನಿಂತು ಮತ ಚಲಾಯಿಸುವುದು ಕಂಡುಬದಿತು.


ಗಮನ ಸೆಳೆದ ಸಖಿ ಮತಗಟ್ಟೆ:
ಸಂಡೂರು ವಿಧಾನಸಭೆ ಉಪಚುನಾವಣೆ ಹಿನ್ನಲೆಯಲ್ಲಿ ಮತದಾರರನ್ನು ಆಕರ್ಷಿಸಲು ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ತೋರಣಗಲ್ಲು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಖಿ ಮತಗಟ್ಟೆ ಸ್ಥಾಪಿಸಲಾಗಿತ್ತು.
ಮತದಾರರು ಸಖಿ ಮತಗಟ್ಟೆಗೆ ಆಗಮಿಸಿ ತಮ್ಮ ಮತ ಚಲಾಯಿದರು. ಬಳಿಕ ಅಲ್ಲಿಯೇ ಸ್ಥಾಪಿಸಲಾಗಿದ್ದ ಪಿಂಕ್ ಸೆಲ್ಫಿ ಬೂತ್‌ನಲ್ಲಿ ನಿಂತುಕೊoಡು ಮತಶಾಹಿ ಬೆರಳು ತೋರಿಸಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳುವ ಮೂಲಕ ಸಂಭ್ರಮಿಸಿದ್ದು ಕಂಡುಬoತು.
ಮೊದಲ ಬಾರಿ ಮತ ಚಲಾಯಿಸಿದ ಯುವತಿ:
ಜಿಲ್ಲಾಡಳಿತವು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಅವಕಾಶ ನೀಡಿತ್ತು. ಮತದಾರರ ಪಟ್ಟಿಯಲ್ಲಿ ಪ್ರಥಮ ಬಾರಿಗೆ ನೊಂದಾಯಿಸಿಕೊoಡಿದ್ದ ಸಂಡೂರು ಪಟ್ಟಣದ ಯುವತಿ ಅವನಿತ್ ಅವರು ಸಂಡೂರು ತಾಪಂ ಕಚೇರಿಯ ಮತಗಟ್ಟೆ ಸಂಖ್ಯೆ 67 ರಲ್ಲಿ ಮೊದಲ ಬಾರಿಗೆ ತಮ್ಮ ಮತದಾನ ಹಕ್ಕನ್ನು ಚಲಾಯಿಸಿದ್ದು, ಇದೇ ಮೊದಲ ಬಾರಿ ಮತ ಚಲಾಯಿಸಿದ್ದಕ್ಕಾಗಿ ಹರ್ಷ ವ್ಯಕ್ತಪಡಿಸಿದರು.


ಹಿರಿಯ ವಯಸ್ಕರಿಂದ ಮತದಾನ:
ಸಂಡೂರು ವಿಧಾನಸಭೆ ಉಪಚುನಾವಣೆ ಅಂಗವಾಗಿ ಸಂಡೂರು ವ್ಯಾಪ್ತಿಯಲ್ಲಿ ವಿವಿಧೆಡೆ ಹಿರಿಯ ವಯಸ್ಕರು ತಮ್ಮ ಮತದಾನ ಹಕ್ಕು ಚಲಾಯಿಸಿ ಪ್ರಜಾಪ್ರಭುತ್ವದ ಕರ್ತವ್ಯ ಮೆರೆದರು.
ಸಂಡೂರು ಪಟ್ಟಣದ ಮತಗಟ್ಟೆ ಸಂಖ್ಯೆ 51 ರಲ್ಲಿ 91 ವರ್ಷದ ವಯೋವೃದ್ಧೆ ಹುಲಿಗೆಮ್ಮ ಉತ್ಸಾಹದಿಂದ ಮತಗಟ್ಟೆಗೆ ಬಂದು ತಮ್ಮ ಹಕ್ಕು ಚಲಾಯಿಸಿದರು. ಕೃಷ್ಣಾನಗರ ಬಡಾವಣೆಯ ಸರ್ಕಾರಿಯ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ 13 ರಲ್ಲಿ 78 ವರ್ಷದ ಲಥೀಫ್ ಸಾಬ್ ವೀಲ್‌ಚೇರ್ ಸಹಾಯದೊಂದಿಗೆ ಆಗಮಿಸಿ ಮತದಾನ ಮಾಡಿದರು.
ಮತದಾರರಿಗೆ ಮತ್ತು ಮತಗಟ್ಟೆ ಸಿಬ್ಬಂದಿಗಳಿಗೆ ಆರೋಗ್ಯ ಸಮಸ್ಯೆ ಕಂಡುಬoದಲ್ಲಿ ನಿಭಾಯಿಸಲು ಆರೋಗ್ಯ ಇಲಾಖೆಯ ತಂಡದ ಜೊತೆಗೆ ವಿವಿಧ ಅಗತ್ಯದ ಔಷಧಿಗಳ ಮೆಡಿಕಲ್ ಕಿಟ್ ಜೊತೆಗೆ ಆಶಾ, ಅಂಗನವಾಡಿ ಕಾರ್ಯಕರ್ತರನ್ನು ನಿಯೋಜಿಸಲಾಗಿತ್ತು.
ಜಿಲ್ಲಾಡಳಿತದಿಂದ ನೆರಳಿನ ಸೌಲಭ್ಯ ಇಲ್ಲದ ಕಡೆ ಶ್ಯಾಮಿಯಾನ ವ್ಯವಸ್ಥೆ ಕಲ್ಪಿಸಲಾಗಿತ್ತು. ಎಲ್ಲಾ ಮತಗಟ್ಟೆ ಕೇಂದ್ರಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ವಯಸ್ಕರಿಗೆ ಹಾಗೂ ವಿಶೇಷಚೇತನರಿಗೆ ವೀಲ್‌ಚೇರ್ ವ್ಯವಸ್ಥೆ ಮಾಡಲಾಗಿತ್ತು…

ವರದಿ. ಉಜ್ಜಿನಯ್ಯ ಸಂಡೂರು

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend