ಸಂಡೂರು ವಿಧಾನಸಭೆ ಉಪಚುನಾವಣೆಯಲ್ಲಿ 06 ಅಭ್ಯರ್ಥಿಗಳ ಭವಿಷ್ಯ ಇವಿಯಂನಲ್ಲಿ ಭದ್ರ, ಸ್ಟಾರಂಗ್    ರೂಮ್ ಸುತ್ತ ಪೊಲೀಸ್ ಬಿಗಿ ಬಂದೋಬಸ್ತ್…!!!

Listen to this article

ಸಂಡೂರು ವಿಧಾನಸಭೆ ಉಪಚುನಾವಣೆ-2024

06 ಅಭ್ಯರ್ಥಿಗಳ ಭವಿಷ್ಯ ಇವಿಯಂನಲ್ಲಿ ಭದ್ರ, ಸ್ಟಾರಂಗ್    ರೂಮ್ ಸುತ್ತ ಪೊಲೀಸ್ ಬಿಗಿ ಬಂದೋಬಸ್ತ್

ಬಳ್ಳಾರಿ:ಸಂಡೂರು ವಿಧಾನಸಭೆ ಉಪಚುನಾವಣೆ 2024 ರ ಅಂಗವಾಗಿ ನ.13 ರಂದು ಸುಸೂತ್ರವಾಗಿ ಶಾನoತತೆಯಿಂದ ಮತದಾನ ನಡೆದಿದ್ದು, 06 ಅಭ್ಯರ್ಥಿಗಳ ಭವಿಷ್ಯ ಇವಿಯಂನಲ್ಲಿ ಭದ್ರವಾಗಿದೆ.
ಸಂಡೂರು ಕ್ಷೇತ್ರ ವ್ಯಾಪ್ತಿಯ 253 ಮತ ಕೇಂದ್ರಗಳಲ್ಲಿ ನಡೆದ ಚುನಾವಣೆಯ ಮತ ಎಣಿಕೆಯು ಬಳ್ಳಾರಿ ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನ.23 ರ ಶನಿವಾರ ಬೆಳಗ್ಗೆ 08 ರಿಂದ ನಡೆಯಲಿದೆ.
ಗುರುವಾರದಂದು, ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಕಟ್ಟಡದಲ್ಲಿ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಚುನಾವಣಾ ಸಾಮಾನ್ಯ ವೀಕ್ಷಕರು, ವೆಚ್ಚ ವೀಕ್ಷಕರ ಸಮ್ಮುಖದಲ್ಲಿ ಮತಯಂತ್ರಗಳನ್ನು ನಿಗದಿಪಡಿಸಿರುವ ಭದ್ರತಾ ಕೊಠಡಿಯಲ್ಲಿ ಸುರಕ್ಷಿತವಾಗಿ ಇರಿಸಲಾಯಿತು. ಮತಯಂತ್ರಗಳ ಸ್ಟಾçಂಗ್ ರೂಂ ಬಾಗಿಲಿಗೆ ಬೀಗ ಹಾಕಿ ಮೊಹರು ಹಾಕಲಾಯಿತು, ಜೊತೆಗೆ ಬಾಗಿಲನ್ನು ದಪ್ಪ ಹಲಗೆಯ ಮೂಲಕ ಸಂಪೂರ್ಣ ಮುಚ್ಚಿ ಸೀಲ್ ಮಾಡಲಾಯಿತು.


ಮತ ಎಣಿಕೆ ಕೇಂದ್ರ ಸುತ್ತಲೂ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ. ಮತ ಎಣಿಕಾ ಕೇಂದ್ರಕ್ಕೆ ಸೂಕ್ತ ಭದ್ರತೆ ಕಲ್ಪಿಸಲಾಗಿದೆ.
ಈ ವೇಳೆ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ.ವಿ.ಜೆ., ಚುನಾವಣಾ ಸಾಮಾನ್ಯ ವೀಕ್ಷಕರಾದ ಡಾ.ದಿವ್ಯಾ ಎಸ್.ಅಯ್ಯರ್, ವೆಚ್ಚ ವೀಕ್ಷಕ ಮುರಳಿರಾವ್ ಆರ್.ಜೆ., ಚುನಾವಣಾಧಿಕಾರಿ ರಾಜೇಶ್.ಹೆಚ್.ಡಿ, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್, ಸಂಡೂರು ತಾಲ್ಲೂಕು ತಹಶೀಲ್ದಾರ ಅನೀಲ್ ಕುಮಾರ್ ಸೇರಿದಂತೆ ಪೊಲೀಸ್ ಅಧಿಕಾರಿಗಳು ಹಾಗೂ ಇತರರು ಇದ್ದರು.
ಜಿಲ್ಲೆಯಾದ್ಯಂತ ಪ್ರತಿಬಂಧಕಾಜ್ಞೆ:
ಸoಡೂರು ವಿಧಾನಸಭೆ ಕ್ಷೇತ್ರ ಉಪಚುನಾವಣೆಯ ಮತಎಣಿಕೆಯು ನ.23 ರಂದು ಬಳ್ಳಾರಿ ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನಡೆಯಲಿದ್ದು, ಮತ ಎಣಿಕೆ ಸಂಬoಧ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ನ.22 ರ ಸಂಜೆ 06 ಗಂಟೆಯಿoದ ನ.24 ರ ಬೆಳಿಗ್ಗೆ 06 ಗಂಟೆಯವರೆಗೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ 2023 ರ ಕಲಂ 163 ರಡಿ ಜಿಲ್ಲೆಯಾದ್ಯಂತ ಪ್ರತಿಬಂಧಕಾಜ್ಞೆ ವಿಧಿಸಿ ಜಿಲ್ಲಾ ದಂಡಾಧಿಕಾರಿ ಆದ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆದೇಶಿಸಿದ್ದಾರೆ….

ವರದಿ. ಉಜ್ಜಿನಯ್ಯ ಸಂಡೂರು

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend