ತಾಲೂಕಿನ ಹೈಸ್ಕೂಲ್ ಮೈದನದ 100 ಮೀಟರ್ ವ್ಯಪ್ತಿಯಲ್ಲಿ ಯಾವುದೇ ತಂಬಾಕು ಹಾಗೂ ಸಿಗರೇಟ್ ಮಾರುವುದಕ್ಕೆ ಅನುಮತಿ ಇರುವುದಿಲ್ಲ ಹೀಗೆ ಇದ್ದರು ಸಹ ಕೆಲ ವ್ಯಾಪಾರಿಗಳು ತಮ್ಮ ಲಾಭಕ್ಕಾಗಿ ಶಾಲಾ ಅವರಣದ 100 ಮೀಟರ್ ಒಳಗೆ ಮಾರಟ ಮಾಡುವವರ ವಿರುದ್ದ ಮಂಗಳವಾರ ಜಿಲ್ಲಾ ತಂಬಾಕು ನಿಯಂತ್ರಣ ಅಧಿಕಾರಿ ಗೋವಿಂದಪ್ಪ ನಗರದಲ್ಲಿನ ಶಾಲಾ ಕಾಲೇಜು 100 ಮೀಟ್ ಒಳಗೆ ಮಾರಟ ಮಾಡುವವರ ದಾಳಿ ಮಾಡಿ ಅಲ್ಲಿ ಇದ್ದ ತಂಬಾಕು ಹಾಗೂ ಸಿಗರೇಟ್ ಜಪ್ತೀ ಮಾಡಿ ಎಚ್ಚರಿಕೆ ನೀಡಿದರು ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಉದ್ದೇಶಗಳು.
1. ತಂಬಾಕು ಸೇವನೆಯ ಹಾನಿಕಾರಕ ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವುದು.
2. ತಂಬಾಕು ಉತ್ಪನ್ನಗಳ ಸೇವನೆ, ಉತ್ಪಾದನೆ ಮತ್ತು ಪೂರೈಕೆಯನ್ನು ಕಡಿಮೆ ಮಾಡುವುದು.
3. ಸಿಗರೇಟ್ ಮತ್ತು ಇತರೆ ತಂಬಾಕು ಉತ್ಪನ್ನಗಳ ಕಾಯ್ದೆ(ಕೋಟ್ಪಾ)2003 ರನ್ನು ಪರಿಣಾಮಕಾರಿಯಾಗಿ ಜಾರಿ ಮಾಡುವುದು.
4. ತಂಬಾಕು ಬಳಕೆಯನ್ನು ತ್ಯಜಿಸಲು ಸೇವೆಯನ್ನು ಒದಗಿಸುವುದು.
5. ತಂಬಾಕು ನಿಯಂತ್ರಣ ಮತ್ತು ತಡೆಗಟ್ಟುವಿಕೆಗಾಗಿ ವಿಶ್ವ ಆಯೋಗ್ಯ ಸಂಸ್ಥೆಯ ಎಫ್.ಸಿ.ಟಿ.ಸಿಯ ಕಾರ್ಯತಂತ್ರಗಳನ್ನು ಅನುಷ್ಠಾನ ಮಾಡುವುದು. ಜಿಲ್ಲಾ ಮಟ್ಟದಲ್ಲಿ
• ಕಾನೂನು ಜಾರಿ ಅಧಿಕಾರಿಗಳಿಗೆ ಶಾಲಾ ಶಿಕ್ಷಕರಿಗೆ ಕಾಲೇಜು ಉಪನ್ಯಾಸಕರಿಗೆ ಸಾಮಾಜಿಕ ಕಾರ್ಯಕರ್ತರು ಸರಕಾರೇತರ ಸಂಸ್ಥೆಗಳ ಪ್ರತಿ ನಿಧಿಗಳಿಗೆ ಮತ್ತು ಪಂಚಾಯ್ತಿ ಮಟ್ಟದ ಅಧಿಕಾರಿಗಳಿಗೆ ತರಬೇತಿಗಳನ್ನು ಆಯೋಜಿಸುವುದು.
• ಮಾಹಿತಿ ಶಿಕ್ಷಣ ಸಂವಹನ (ಐ.ಇ.ಸಿ) ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಿ ಹದಿಹರೆಯದ ವಯಸ್ಸಿನವರು ತಂಬಾಕು ವ್ಯಸನಕ್ಕೆ ಬಲಿಯಾಗದಂತೆ ಜಾಗೃತಿ ಮೂಡುಸುವುದು.
• ಶಾಲಾ/ಕಾಲೇಜು ಅರಿವು ಕಾರ್ಯಕ್ರಮಗಳನ್ನು ಆಯೋಜಿಸಿ ಹದಿಹರೆಯದ ವಯಸ್ಸಿನವರು ತಂಬಾಕು ವ್ಯಸನಕ್ಕೆ ಬಲಿಯಾಗದಂತೆ ಜಾಗೃತಿ ಮೂಡಿಸುವುದು.
• ನಗರ ಸ್ಥಳೀಯ ಮತ್ತು ಪಂಚಾಯತ್ ರಾಜ್ ಸಂಸ್ಥೆಗಳ ಸಮನ್ವಯದೊಂದಿಗೆ ತಂಬಾಕು ನಿಯಂತ್ರಣ ಕಾರ್ಯಕ್ರಮವನ್ನು ತಳಮಟ್ಟದಲ್ಲಿ ಅನುಷ್ಠಾನಗೊಳಿಸುವುದು.
• ಪೊಲೀಸ್ ಇಲಾಖೆಯ ಅಧಿಕಾರಿಗಳ ಸಮನ್ವಯದೊಂದಿಗೆ ಕೋಟ್ಪಾ ಕಾಯ್ದೆಯ ಉಲ್ಲಂಘನೆಗಳನ್ನು ಪತ್ತೆಮಾಡಿ ಉಲ್ಲಂಘನೆ ಮಾಡುತ್ತಿರುವವರ ವಿರುದ್ದ ಕಾನೂನು ಕ್ರಮ ಜರುಗಿಸುವುದು.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030