ಹಾವೇರಿಯಲ್ಲಿ ಚರಂಡಿಯಲ್ಲಿ ಕೊಚ್ಚಿ ಹೋಗಿದ್ದ ಬಾಲಕ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ.
ರಸ್ತೆ ಕಾಣದೇ 12 ವರ್ಷದ ಬಾಲಕ ನಿವೇದ್ ಚರಂಡಿ ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ ನಡೆದಿತ್ತು. ಹಾವೇರಿ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಮುಂಭಾಗವೇ ಈ ಘಟನೆ ನಡೆದಿತ್ತು.
12 ವರ್ಷದ ನಿವೇದನ್ ಬಸವರಾಜ್ ಚರಂಡಿ ನೀರಿನಲ್ಲಿ ಕೊಚ್ಚಿ ಹೋಗಿರುವ ಬಾಲಕನಾಗಿದ್ದು, ಆತನನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಿಸದೇ ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಆತ ಮೃತಪಟ್ಟಿದ್ದಾನೆ.
ಸದ್ಯ, ಮೃತ ಬಾಲಕನ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ವೈದ್ಯರು ಎಷ್ಟೇ ಹರಸಾಹಸ ಪಟ್ಟರೂ ಬಾಲಕನನ್ನು ಉಳಿಸಲು ಸಾಧ್ಯವಾಗಲಿಲ್ಲ ಹಾಗೂ ಸಂಬಂಧ ಪಟ್ಟ ಅಧಿಕಾರಿಗಳ ನಿರ್ಲಕ್ಷಕ್ಕೆ ಇನ್ನೆಷ್ಟು ಬಲಿ ಬೇಕು ಎಂದು ಸಾರ್ವಜನಿಕರು ಇಡಿ ಶಾಪ ಹಾಕುತ್ತಿದ್ದಾರೆ…
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030