ಶಾಸಕರಿಂದ ಯುವ ಸಂಸತ್ ಸ್ಪರ್ಧೆ ಕಾರ್ಯಕ್ರಮ ಉದ್ಘಾಟನೆ
ಹಾಸನ:- ಸಂಸದೀಯ ವ್ಯವಹಾರಗಳ ಇಲಾಖೆ ಮತ್ತು ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ರಾಜ್ಯಶಾಸ್ತ್ರ ಪ್ರಾಂಶುಪಾಲರು ಮತ್ತು ಉಪನ್ಯಾಸಕರ ವೇದಿಕೆ ಹಾಸನ, ಇವರ ಸಂಯುಕ್ತಾಶ್ರಯದಲ್ಲಿ ಲೋಕೋಪಯೋಗಿ ಭವನದಲ್ಲಿಂದು ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಜಿಲ್ಲಾ ಮಟ್ಟದ 2024-25ನೇ ಸಾಲಿನ ಯುವ ಸಂಸತ್ ಸ್ಪರ್ಧೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಉದ್ಘಾಟನೆ ನೆರವೇರಿಸಿದರು.
ಕಾರ್ಯಕ್ರಮವನ್ನು ಹಾಗೂ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳನ್ನು ಕುರಿತು ಮೊದಲ ಅಧಿವೇಶನದಲ್ಲಿ ಭಾಗವಹಿಸಿದ ಕ್ಷಣಗಳನ್ನು ಹಂಚಿಕೊoಡರು ಹಾಗೂ ದೇಶ ಕಟ್ಟುವಲ್ಲಿ ಯುವಕರು ಮತ್ತು ವಿದ್ಯಾರ್ಥಿಗಳ ಪಾತ್ರ ಬಹುಮುಖ್ಯವಾದದ್ದು ಎಂದು ವಿದ್ಯಾರ್ಥಿಗಳನ್ನು ಕುರಿತು ಮಾತನಾಡಿದರು.
ಈ ವೇಳೆಯಲ್ಲಿ ಪದವಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಮಹಾಲಿಂಗಯ್ಯ ಅವರು ಹಾಗೂ ಮತ್ತಿತತರು ಉಪಸ್ಥಿರಿದ್ದರು…
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030