ಸ್ವಚ್ಚ ಶನಿವಾರ: ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶ್ರಮದಾನ
ಹಾಸನ: ಅಂಗಡಿ ಮುಂಗಟ್ಟುಗಳ ಮುಂದೆ ಮಾಲೀಕರು ಸ್ವಚ್ಚತೆಗೆ ಗಮನಹರಿಸುವುದರ ಜೊತೆಗೆ ಒತ್ತುವರಿಯನ್ನು ತೆರವುಗೊಳಿಸುವಂತೆ ಜಿಲ್ಲಾಧಿಕಾರಿ ಸತ್ಯಭಾಮ ಅವರು ತಿಳಿಸಿದ್ದಾರೆ.
ಸ್ವಚ್ಚ ಶನಿವಾರ ಶ್ರಮದಾನ ಮೂಲಕ ನಗರದ ಸ್ವಚ್ಚತೆಗೆ ಒತ್ತು ನೀಡಿರುವ ಜಿಲ್ಲಾಧಿಕಾರಿ ಅವರು ಇಂದು ಡೈರಿ ವೃತ್ತದಿಂದ ಬೇಲೂರು ರಸ್ತೆಗೆ ಸಂಪರ್ಕ ಕಲ್ಪಿಸುವ ಬೈಪಾಸ್ ರಸ್ತೆಯಲ್ಲಿ ಜಿಲ್ಲಾಧಿಕಾರಿ ಅವರ ನೇತೃತ್ವದಲ್ಲಿ ನಡೆದ ಸ್ವಚ್ಚತಾ ಕಾರ್ಯದಲ್ಲಿ ಭಾಗವಹಿಸಿದ್ದ ಅವರು ಅಂಗಡಿ ಮಾಲೀಕರು ತಮ್ಮ ತಮ್ಮ ಅಂಗಡಿ ಮುಂದೆ ಸ್ವಚ್ಚತೆ ಮಾಡಿಕೊಳ್ಳುವಂತೆ ಸೂಚಿಸಿದರು.
ಪ್ಲಾಸ್ಟಿಕ್ ಎಲ್ಲೆಂದರಲ್ಲಿ ಎಸೆಯಬಾರದು ಒಂದು ಕಡೆ ಕಸದಬುಟ್ಟಿ ಇಟ್ಟು ಸಂಗ್ರಹ ಮಾಡಿ ನಗರ ಸಭೆ ವಾಹನಕ್ಕೆ ನೀಡುವಂತೆ ನಿರ್ದೇಶನ ನೀಡಿದರು.
ನಗರದ ಸ್ವಚ್ಚತೆಗೆ ನಾಗರೀಕರು ಎಚ್ಚೆತ್ತುಕೊಂಡು ಕಸವನ್ನು ಎಲ್ಲೆಂದರಲ್ಲಿ ಬಿಸಾಡದೆ ನಗರ ಸಭೆ ವಾಹನಕ್ಕೆ ನೀಡುವುದರ ಮೂಲಕ ಸಾರ್ವಜನಿಕರು ಸಹಕರಿಸಬೇಕು ಎಂದರು.
ನಗರದ ಸ್ವಚ್ಛತೆ ಕಾಪಾಡುವುದು ಪ್ರತಿಯೊಬ್ಬ ನಾಗರಿಕರ ಜವಾಬ್ದಾರಿ ಈ ನಿಟ್ಟಿನಲ್ಲಿ ತಮ್ಮ ತಮ್ಮ ಮನೆಯ ಸುತ್ತ ಮುತ್ತಲಿನ ಪರಿಸರವನ್ನು ಉತ್ತಮವಾಗಿಟ್ಟುಕೊಳ್ಳುವುದರ ಜೊತೆಗೆ ಮನೆಯಲ್ಲಿ ಉತ್ಪತ್ತಿಯಾಗುವ ಕಸವನ್ನು ಹಸಿ ಕಸ ಹಾಗೂ ಒಣ ಕಸವನ್ನು ಬೇರ್ಪಡಿಸಿ ನಗರ ಸಭೆ ವಾಹನಕ್ಕೆ ನೀಡಬೇಕು ಎಂದರು.
ಸ್ವಚ್ಚತಾ ಕಾರ್ಯದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು…
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030