ಶ್ರೀ ಹಾಸನಾಂಬ ಹಾಗೂ ಶ್ರೀ ಸಿದ್ದೇಶ್ವರ ಜಾತ್ರಾ ಮಹೋತ್ಸವ: ಸಿದ್ದತೆ ಪರೀಶಿಲನೆ
ಹಾಸನ.:- ಶ್ರೀ ಹಾಸನಾಂಬ ದೇವಸ್ಥಾನದ ಬಾಗಿಲನ್ನು ಅಕ್ಟೋಬರ್ 24 ರಂದು ತೆರೆಯಲಾಗುತ್ತಿದ್ದು ಇಂದು ಸಹಕಾರ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎನ್ ರಾಜಣ್ಣ ಅವರು ದೇವಸ್ಥಾನಕ್ಕೆ ಭೇಟಿ ನೀಡಿ ಸಿದ್ದತೆಗಳ ಬಗ್ಗೆ ಪರಿಶೀಲಿಸಿದರು ನಂತರ ಜಾತ್ರಮಹೋತ್ಸವದ ಹಿನ್ನೆಲೆಯಲ್ಲಿ ಜಿಲ್ಲಾ ಖಜಾನೆಯಿಂದ ಇಂದು ತರಲಾಗಿದ್ದ ದೇವಿಯ ಆಭರಣಗಳಿಗೆ ದೇವಸ್ಥಾನದ ಆವರಣದಲ್ಲಿ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಂಸದ ಶ್ರೇಯಸ್ ಪಟೇಲ್, ಕರ್ನಾಟಕ ರಾಜ್ಯ ಗೃಹ ಮಂಡಳಿ ಅಧ್ಯಕ್ಷ ಹಾಗೂ ಶಾಸಕರಾದ ಕೆ.ಎಂ ಶಿವಲಿಂಗೇಗೌಡ, ಶಾಸಕರಾದ ಸ್ವರೂಪ್ ಪ್ರಕಾಶ್, ನಗರಸಭೆ ಅಧ್ಯಕ್ಷ ಚಂದ್ರೇಗೌಡ, ಜಿಲ್ಲಾಧಿಕಾರಿಗಳಾದ ಸಿ. ಸತ್ಯಭಾವi, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಆರ್. ಪೂರ್ಣಿಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತಾ, ಅಪರ ಜಿಲ್ಲಾಧಿಕಾರಿ ಕೆ.ಟಿ ಶಾಂತಲಾ ಮತ್ತಿತರ ಅಧಿಕಾರಿಗಳು ಹಾಜರಿದ್ದರು…
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030