ಡಬಲ್ ಡೆಕ್ಕರ್ ಬಸ್ಸಿನಲ್ಲಿ ಮುಖ್ಯಮಂತ್ರಿ
ಹಾಸನ : ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಇಂದು ಹಾಸನಕ್ಕೆ ಆಗಮಿಸಿ ಹಾಸನಾಂಬ ದೇವಿ ದರ್ಶನ ಪಡೆದ ನಂತರ ಡಬಲ್ ಡೆಕ್ಕರ್ ಬಸ್ಸಿನಲ್ಲಿ ಪ್ರಯಾಣಿಸಿ ಜಾತ್ರಾ ಮಹೋತ್ಸವದ ಹಿನ್ನಲೆಯಲ್ಲಿ ನಗರ ಮುಖ್ಯ ರಸ್ತೆಗಳಲ್ಲಿ ವಿದ್ಯುತ್ ದೀಪಾಲಂಕಾರವನ್ನು ವೀಕ್ಷಣೆ ಮಾಡಿದರು.
ಸಹಕಾರ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎನ್.ರಾಜಣ್ಣ, ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ, ಕರ್ನಾಟಕ ರಾಜ್ಯ ಗೃಹ ಮಂಡಳಿ ಅಧ್ಯಕ್ಷರು ಹಾಗೂ ಶಾಸಕರಾದ ಕೆ.ಎಂ.ಶಿವಲಿoಗೇಗೌಡ, ಲೋಕಸಭಾ ಸದಸ್ಯರಾದ ಶ್ರೇಯಸ್ ಪಟೇಲ್, ಜಿಲ್ಲಾಧಿಕಾರಿ ಸಿ ಸತ್ಯಭಾಮ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಆರ್.ಪೂರ್ಣಿಮ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತ ಮತ್ತಿತರರು ಮುಖ್ಯಮಂತ್ರಿಗಳೊoದಿಗೆ ಬಸ್ಸಿನಲ್ಲಿ ಪ್ರಯಾಣಿಸಿ ದೀಪಾಲಂಕಾರ ವೀಕ್ಷಣೆಗೆ ಸಾಥ್ ನೀಡಿದರು…
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030