ವಾಣಿವಿಲಾಸ ವಿದ್ಯಾಸಂಸ್ಥೆಯಲ್ಲಿ ರ್ಯಾಂಕ್ ಪಡೆದಿರುವ ವಿದ್ಯಾರ್ಥಿಗಳಿಗೆ ಪ್ರಶಸ್ತಿಫಲಕ ಹಾಗೂ ಮೆಡಲ್ ವಿತರಣೆ…!!!

Listen to this article

ವಾಣಿವಿಲಾಸ ವಿದ್ಯಾಸಂಸ್ಥೆಯಲ್ಲಿ ರ್ಯಾಂಕ್ ಪಡೆದಿರುವ
ವಿದ್ಯಾರ್ಥಿಗಳಿಗೆ ಪ್ರಶಸ್ತಿಫಲಕ ಹಾಗೂ ಮೆಡಲ್ ವಿತರಣೆ
ವಿದ್ಯಾಸಂಸ್ಥೆಕಾರ್ಯದರ್ಶಿ ಆಲೂರುಹನುಮಂತರಾಯಪ್ಪ
ಹಿರಿಯೂರು :
ಇಂದಿನ ಪೋಷಕರು ತಮ್ಮ ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ಕೊಡಿಸುವ ಜೊತೆಗೆ ಬಾಲ್ಯದಿಂದಲೇ ಪ್ರತಿ ತರಗತಿಯಲ್ಲೂ ಅವರ ಪರೀಕ್ಷೆಯ ಫಲಿತಾಂಶವನ್ನು ಅತ್ಯಂತ ಕಾತುರದಿಂದ ಕಾಯುತ್ತಾರೆ, ಇಂತಹ ಪೋಷಕರಿಗೆ ಸಂತಸ ನೀಡುವ ಉದ್ದೇಶದಿಂದ ಪ್ರತಿ ತರಗತಿಯಲ್ಲಿ ರ್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಪ್ರಶಸ್ತಿಫಲಕ ಹಾಗೂ ಮೆಡಲ್ ಬಹುಮಾನ ನೀಡಲಾಗುತ್ತಿದೆ ಎಂಬುದಾಗಿ ವಾಣಿವಿಲಾಸ ವಿದ್ಯಾಸಂಸ್ಥೆ ಕಾರ್ಯದರ್ಶಿ ಆಲೂರು ಹನುಮಂತರಾಯಪ್ಪ ಹೇಳಿದರು.
ನಗರದ ವಾಣಿವಿಲಾಸ ವಿದ್ಯಾಸಂಸ್ಥೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಪರೀಕ್ಷೆ ಫಲಿತಾಂಶ ಪ್ರಕಟಣೆ ಕಾರ್ಯಕ್ರಮದಲ್ಲಿ ರ್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಫಲಕ ಹಾಗೂ ಮೆಡಲ್ ಗಳನ್ನು ವಿತರಿಸುವ ಮೂಲಕ ಶುಭಹಾರೈಸಿ, ನಂತರ ಅವರು ಮಾತನಾಡಿದರು.
ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಪ್ರತಿ ತರಗತಿಯಲ್ಲಿ ಅತಿ ಹೆಚ್ಚು ಅಂಕ ಪಡೆದ 10 ವಿದ್ಯಾರ್ಥಿಗಳಿಗೆ ರ್ಯಾಂಕ್ ಗಳನ್ನು ನೀಡಲಾಗುತ್ತಿದ್ದು, ಈ ರ್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಫಲಕ ಹಾಗೂ ಮೆಡಲ್ ಗಳನ್ನು ಬಹುಮಾನವಾಗಿ ನೀಡುವ ಮೂಲಕ ಅವರಿಗೆ ಮುಂದಿನ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹವನ್ನು ನೀಡಲಾಗುತ್ತಿದೆ ಎಂದರಲ್ಲದೆ,
ಇಂದಿನ ಆಧುನಿಕ ಜಗತ್ತಿನಲ್ಲಿ ತಂತ್ರಜ್ಞಾನ ಆಧಾರಿತ ಶಿಕ್ಷಣಕ್ಕೆ ಹೆಚ್ಚು ಮಹತ್ವವಿದ್ದು, ಈ ನಿಟ್ಟಿನಲ್ಲಿ ನಮ್ಮ ಶಾಲೆಯ ಎಲ್ಲಾ ತರಗತಿಗಳನ್ನು ಡಿಜಿಲೀಕರಣ ಮಾಡಲಾಗಿದ್ದು, ಪ್ರತಿ ತರಗತಿಯಲ್ಲೂ ಟಿ.ವಿ.ಗಳನ್ನು ಅಳವಡಿಸಿ, ಶಿಕ್ಷಕರಿಗೆ ಸೂಕ್ತ ತರಬೇತಿ ಕೊಟ್ಟು, ವಿದ್ಯಾರ್ಥಿಗಳಿಗೆ ತಂತ್ರಜ್ಞಾನ ಆಧಾರಿತ ಶಿಕ್ಷಣವನ್ನು ನೀಡುವ ವ್ಯವಸ್ಥೆಯನ್ನು ಮಾಡಿದ್ದೇವೆ ಇದರ ಸದುಪಯೋಗವನ್ನು ನಗರದ ಪೋಷಕರು ಪಡೆದುಕೊಳ್ಳಬೇಕು ಎಂಬುದಾಗಿ ಅವರು ಹೇಳಿದರು.
ಈ ಕಾರ್ಯಕ್ರಮದಲ್ಲಿ ವಿದ್ಯಾಸಂಸ್ಥೆಯ ಮುಖ್ಯಶಿಕ್ಷಕಿ ಶ್ರೀಮತಿ ಸೌಮ್ಯ, ವ್ಯವಸ್ಥಾಪಕಿ ಶ್ರೀಮತಿ ವಸಂತಾ, ಕೋ-ಆರ್ಡಿನೇಟರ್ ಗಳಾದ ಶ್ರೀಮತಿ ನಂದಿನಿ, ಶ್ರೀಮತಿ ರಚನ, ಶಿಕ್ಷಕಿಯರುಗಳಾದ ಶ್ರೀಮತಿ ರಜಿಯಾಬೇಗಂ, ಶ್ರೀಮತಿ ರಂಜಿತಾ, ಶ್ರೀಮತಿ ಗಂಗಮ್ಮ, ಶ್ರೀಮತಿ ಸಬೀಹಾ, ಶ್ರೀಮತಿ ಮುಬೀನಾ, ಶ್ರೀಮತಿ ದ್ರಾಕ್ಷಾಯಣಿ, ಶ್ರೀಮತಿ ಸಾಧಿಕಾ, ಶ್ರೀಮತಿ ಮಮತಾ, ಶ್ರೀಮತಿ ಜೈಸುಧಾ, ಶ್ರೀಮತಿ ಅಕ್ಷಿತಾ, ಶ್ರೀಮತಿ ಸುಲೋಚನಾ, ಪೂಜಾ, ಕಾವ್ಯ, ರಂಜಿತಾ, ಮಮತಾ, ಶಿಕ್ಷಕರುಗಳಾದ ಉಮೇಶ್ ಯಾದವ್, ಶಿವರಾಜ್, ಸೇರಿದಂತೆ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಹಾಗೂ ಪೋಷಕರು ಉಪಸ್ಥಿತರಿದ್ದರು…

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend