ಆದರ್ಶಗಳನ್ನು ಜಗತ್ತಿಗೆ ಪರಿಚಯಿಸುವ ಉದ್ದೇಶದಿಂದ ಮೇ 10 ರಂದು ಹೇಮರಡ್ಡಿ ಮಲ್ಲಮ್ಮರ ಜಯಂತಿಯನ್ನು ಆಚರಿಸಲಾಗುತ್ತಿದೆ:ಸಮಾಜಸೇವಕಿ ಶಶಿಕಲಾರವಿಶಂಕರ್…!!!

Listen to this article

ಮಹಾಸಾಧ್ವಿ ಹೇಮರಡ್ಡಿ ಮಲ್ಲಮ್ಮರವರ ಜೀವನದ ತತ್ವ
ಆದರ್ಶಗಳನ್ನು ಜಗತ್ತಿಗೆ ಪರಿಚಯಿಸುವ ಉದ್ದೇಶದಿಂದ
ಮೇ 10 ರಂದು ಹೇಮರಡ್ಡಿ ಮಲ್ಲಮ್ಮರ ಜಯಂತಿಯನ್ನು
ಆಚರಿಸಲಾಗುತ್ತಿದೆ:ಸಮಾಜಸೇವಕಿ ಶಶಿಕಲಾರವಿಶಂಕರ್
ಹಿರಿಯೂರು :
ಶ್ರೀಶೈಲ ಮಲ್ಲಿಕಾರ್ಜುನನನ್ನು ತನ್ನ ಆರಾಧ್ಯ ದೈವವಾಗಿ ಆರಾಧಿಸಿ, ಅವರನ್ನು ಸಾಕ್ಷಾತ್ಕರಿಸಿಕೊಂಡ ಹೇಮರಡ್ಡಿ ಮಲ್ಲಮ್ಮ ಮೋಕ್ಷ ಪಡೆಯಲು ಲೌಕಿಕ ಪ್ರಪಂಚವನ್ನು ತ್ಯಾಗ ಮಾಡದೇ ಸಂಸಾರದಲ್ಲಿದ್ದುಕೊಂಡೇ ಸದ್ಗತಿ ಹೊಂದಿದರು ಎಂಬುದಾಗಿ ಸಮಾಜ ಸೇವಕಿ ಶ್ರೀಮತಿ ಶಶಿಕಲಾರವಿಶಂಕರ್ ಹೇಳಿದರು.
ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ತಾಲ್ಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಹೇಮರೆಡ್ಡಿಮಲ್ಲಮ್ಮ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ತಾವು ಎಷ್ಟೇ ಕಷ್ಟ ಅನುಭವಿಸಿದರೂ ಅದಕ್ಕೆ ನೊಂದುಕೊಳ್ಳದೇ, ಮಲ್ಲಿಕಾರ್ಜುನನನ್ನು ಪೂಜಿಸಿ, ಧ್ಯಾನಿಸಿ ಮುಕ್ತಿ ಪಡೆದ ಮಹಾಸಾಧ್ವಿ ಹೇಮರಡ್ಡಿ ಮಲ್ಲಮ್ಮ ಅವರ ಜೀವನದ ತತ್ವ ಹಾಗೂ ಆದರ್ಶಗಳನ್ನು ಜಗತ್ತಿಗೆ ಪರಿಚಯಿಸುವ ಉದ್ದೇಶದಿಂದ ಮೇ 10 ರಂದು ಹೇಮರಡ್ಡಿ ಮಲ್ಲಮ್ಮ ಜಯಂತಿಯನ್ನು ಆಚರಿಸಲಾಗುತ್ತಿದೆ ಎಂಬುದಾಗಿ ಹೇಳಿದರು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಹಶೀಲ್ದಾರ್ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷರಾದ ಸಿ.ಜೆ.ಕೃಷ್ಣಕುಮಾರ್ ಅವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ನಿವೃತ್ತ ಶಾಲಾ ತನಿಖಾಧಿಕಾರಿಗಳಾದ ಶಿವಪ್ರಸಾದ್, ಯಶವಂತ್, ನಗರಸಭೆ ಸದಸ್ಯರಾದ ಶ್ರೀಮತಿ ರತ್ನಮ್ಮ, ಶ್ರೀಮತಿ ವಿಶಾಲಾಕ್ಷಿ, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯರಾದ ಮಹಾಂತೇಶ್, ಶ್ರೀಮತಿ ಡಿ.ಟಿ.ವೀಣಾ, ಜಿ.ಎಂ.ಉಮೇಶ್. ತ್ರಿಯಂಬಕಮೂರ್ತಿ, ರೇಷ್ಮೆ ಇಲಾಖೆಯ ಸಿ.ಎಸ್.ಈಶ್ವರಪ್ಪ, ಕಂದಾಯ ಇಲಾಖೆಯ ಸಿಬ್ಬಂದಿ ವರ್ಗದವರಾದ ಟಿ.ಶ್ರೀನಿವಾಸ್ ರೆಡ್ಡಿ, ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಆರಂಭದಲ್ಲಿ ಪಿ.ಶಶಿಕುಮಾರ್ ಕಾರ್ಯಕ್ರಮವನ್ನು ನಿರೂಪಿಸಿದರು. ಕಾರ್ಯಕ್ರಮದ ಕೊನೆಯಲ್ಲಿ ಡಿ.ರಾಧಮ್ಮ ಎಲ್ಲರಿಗೂ ವಂದನೆಗಳನ್ನು ಸಲ್ಲಿಸಿದರು…

 

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend