ಗಂಗಾ ಪದವಿ ಕಾಲೇಜಿನಲ್ಲಿ ಅಂತಿಮ ಪದವಿ ವಿದ್ಯಾರ್ಥಿಗಳಿಗೆ ಬಿಳ್ಕೊಡುಗೆ
2024-25 ನೇ ಸಾಲಿನ ಅಂತಿಮ ಬಿ.ಕಾಂ ಮತ್ತು ಬಿಸಿಎ ವಿದ್ಯಾರ್ಥಿಗಳಿಗೆ ಕಿರಿಯ ವಿದ್ಯಾರ್ಥಿಗಳು ಬಿಳ್ಕೊಡುಗೆ ಸಮಾರಂಭವನ್ನು ಏರ್ಪಡಿಸಿದ್ದರು.
ಈ ಸಂದರ್ಭದಲ್ಲಿ ಪ್ರಸ್ತುತ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕಾಲೇಜಿನ ವ್ಯವಸ್ಥಾಪಕ ನಿರ್ದೇಶಕರು. ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಲು ಯಾವ ರೀತಿಯಲ್ಲಿ ಅಭ್ಯಾಸ ಮಾಡಬೇಕು ಹೇಗೆ ಶ್ರಮಿಸಬೇಕು. ಎಂಬುದನ್ನು ಐಎಸ್ ಮತ್ತು ಕೆಎಎಸ್ ಸಾಧಕರ ನಿದರ್ಶನಗಳನ್ನು ನೀಡುವ ಮೂಲಕ ವಿದ್ಯಾರ್ಥಿಗಳನ್ನು ಹುರಿದುಂಬಿಸಿದರು. ಮೂರು ವರ್ಷಗಳ ಒಡನಾಟದಲ್ಲಿ ನಡೆದ ವಿವಿಧ ಶೈಕ್ಷಣಿಕ ಚಟುವಟಿಕೆಗಳನ್ನು ಕುರಿತು ಸ್ಮರಿಸಿದರು. ಅಂತಿಮ ವರ್ಷದ ವಿದ್ಯಾರ್ಥಿಗಳು ತಮ್ಮ ಅನಿಸಿಕೆಗಳನ್ನು ಹಂಚಿಕೊಳ್ಳುವಾಭಾವುಕರಾದರು. ಹಾಗೆ ಕಿರಿಯರಿಗೆ ಉತ್ತಮ ಸಲಹೆ ಸೂಚನೆಗಳನ್ನು ನೀಡಿದರು. ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಫೋಟೋ ಫ್ರೇಮ್ ಗಳನ್ನು ಕಾಣಿಕೆಗಳಾಗಿ ನೀಡುವ ಮೂಲಕ ಅವರನ್ನು ಆತ್ಮೀಯವಾಗಿ ಕಿರಿಯ ವಿದ್ಯಾರ್ಥಿಗಳು ಬಿಳ್ಕೊಟ್ಟರು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರು ಉಪನ್ಯಾಸಕರು ಎಲ್ಲ ವಿದ್ಯಾರ್ಥಿಗಳು ಹಾಜರಿದ್ದರು…
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030