ಸಾರ್ವಜನಿಕರು ಈಸಂಸ್ಥೆಗಳ ಯೋಜನೆಗಳ ಸದುಪಯೋಗ ಪಡೆಯಿರಿ ರೆಡ್ ಕ್ರಾಸ್ ಸಂಸ್ಥೆ ಸಭಾಪತಿ ಬಸ್ರೂರು ರಾಜೀವ್ ಶೆಟ್ಟಿ…!!!

Listen to this article

ರೆಡ್ ಕ್ರಾಸ್ ಹಾಗೂ ರೋಟರಿ ಸಂಸ್ಥೆಗಳು ಸಾಮಾಜಿಕ
ಕಳಕಳಿ ಹೊಂದಿದ ಸಂಸ್ಥೆಗಳಾಗಿದ್ದು, ಸಾರ್ವಜನಿಕರು
ಈಸಂಸ್ಥೆಗಳ ಯೋಜನೆಗಳ ಸದುಪಯೋಗ ಪಡೆಯಿರಿ
ರೆಡ್ ಕ್ರಾಸ್ ಸಂಸ್ಥೆ ಸಭಾಪತಿ ಬಸ್ರೂರು ರಾಜೀವ್ ಶೆಟ್ಟಿ
ಹಿರಿಯೂರು:
ರೆಡ್ ಕ್ರಾಸ್ ಹಾಗೂ ರೋಟರಿ ಸಂಸ್ಥೆಗಳು ಸಾಮಾಜಿಕ ಕಳಕಳಿ ಹೊಂದಿದ ಸಂಸ್ಥೆಗಳಾಗಿದ್ದು, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಸಮಾಜದ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತಿದ್ದು, ಸಾರ್ವಜನಿಕರು ಈ ಸಂಸ್ಥೆಗಳ ಯೋಜನೆಗಳ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂಬುದಾಗಿ ರಾಜ್ಯ ರೆಡ್ ಕ್ರಾಸ್ ಸಂಸ್ಥೆಯ ಸಭಾಪತಿಗಳಾದ ಬಸ್ರೂರು ರಾಜೀವ್ ಶೆಟ್ಟಿರವರು ಹೇಳಿದರು.
ನಗರದ ರೋಟರಿ ಸಭಾಭವನದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಹಾಗೂ ರೋಟರಿ ಸಂಸ್ಥೆ ಹಿರಿಯೂರು, ರೋಟರಿ ಬೆಂಗಳೂರು ರಾಜರಾಜೇಶ್ವರಿ ನಗರ ಸೆಂಟೇನಿಯಲ್ ಇವರುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ತಾಲ್ಲೂಕಿನ ಸರ್ಕಾರಿ ಪ್ರೌಢಶಾಲೆಗಳ 10ನೇ ತರಗತಿ ವ್ಯಾಸಂಗ ಮಾಡುವ ಸುಮಾರು 2ಸಾವಿರ ವಿದ್ಯಾರ್ಥಿಗಳಿಗೆ “ಉಚಿತನೋಟ್ ಬುಕ್ ವಿತರಣೆ” ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ನಗರದ ರೆಡ್ ಕ್ರಾಸ್ ಹಾಗೂ ರೋಟರಿ ಸಂಸ್ಥೆಗಳ ನೇತೃತ್ವದಲ್ಲಿ ಸರ್ಕಾರಿ ಪ್ರೌಢಶಾಲೆಗಳ10 ನೇ ತರಗತಿ ವಿದ್ಯಾರ್ಥಿಗಳಿಗೆ ಸುಮಾರು 2 ಸಾವಿರ ನೋಟ್ ಪುಸ್ತಕಗಳನ್ನು ಉಚಿತವಾಗಿ ವಿತರಣೆ ಮಾಡುತ್ತಿದ್ದು, ವಿದ್ಯಾರ್ಥಿಗಳು ಅವುಗಳನ್ನು ಸದ್ಭಳಕೆ ಮಾಡಿಕೊಂಡು ಶೈಕ್ಷಣಿಕವಾಗಿ ಪ್ರಗತಿಯನ್ನು ಸಾಧಿಸಬೇಕು. ಈ ನೋಟ್ ಪುಸ್ತಕಗಳನ್ನು ಕೊಡುಗೆಯಾಗಿ ನೀಡಿದ ರೊಟೇರಿಯನ್ ಶ್ರೀಯುತ ಅನಿಲ್ ಸುರಾನ ರವರಿಗೆ ವಿದ್ಯಾರ್ಥಿಗಳ ಪರವಾಗಿ ಅಭಿನಂದನೆಗಳು ಎಂಬುದಾಗಿ ಹೇಳಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎಂ.ತಿಪ್ಪೇಸ್ವಾಮಿ ಮಾತನಾಡಿ, ನಮ್ಮ ರಾಜ್ಯ ಸರ್ಕಾರ ಶಿಕ್ಷಣಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಿ, ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ, ಪಠ್ಯಪುಸ್ತಕ, ಬಿಸಿಯೂಟದ ವ್ಯವಸ್ಥೆ ಮಾಡುವ ಮೂಲಕ ಸಾವಿರಾರು ಕೋಟಿ ಹಣ ಶೈಕ್ಷಣಿಕ ಉದ್ದೇಶಕ್ಕಾಗಿ ಖರ್ಚು ಮಾಡುತ್ತಿದ್ದರೂ, ಹಲವಾರು ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುತ್ತಿರುವುದು ನಿಜಕ್ಕೂ ವಿಷಾದನೀಯ ಎಂದರಲ್ಲದೆ,
ಸರ್ಕಾರ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅಗತ್ಯವಾದ ಎಲ್ಲಾ ಸೌಲಭ್ಯಗಳನ್ನು ನೀಡಿದ್ದರೂ, ವಿದ್ಯಾರ್ಥಿಗಳು ಆಸಕ್ತಿಯಿಂದ ಕಲಿಯುತ್ತಿಲ್ಲವೆಂಬುದು ಬೇಸರದ ಸಂಗತಿಯಾಗಿದೆ, ವಿದ್ಯಾರ್ಥಿಗಳು ಸರ್ಕಾರದ ಸೌಲಭ್ಯಗಳನ್ನು ಬಳಸಿಕೊಂಡು ಸತತ ಪರಿಶ್ರಮದಿಂದ ಅಭ್ಯಾಸ ಮಾಡುವ ಮೂಲಕ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆದುಕೊಳ್ಳಬೇಕು ಎಂಬುದಾಗಿ ಹೇಳಿದರು.
ರೊಟೇರಿಯನ್ ಅನಿಲ್ ಸುರಾನ ಮಾತನಾಡಿ, ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಅತ್ಯಂತ ಪ್ರತಿಭಾವಂತರಾಗಿದ್ದು, ಅವರ ಪ್ರತಿಭೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಅವರುಗಳಿಗೆ ಅಗತ್ಯವಾದ ಶಿಕ್ಷಣ ಸಾಮಾಗ್ರಿಗಳನ್ನು ಕೊಡಲು ನನಗೆ ಅವಕಾಶ ಮಾಡಿಕೊಟ್ಟಿರುವುದು ಅತ್ಯಂತ ಸಂತಸದ ವಿಚಾರವಾಗಿದೆ ಎಂಬುದಾಗಿ ಅವರು ಹೇಳಿದರು.
ರೆಡ್ ಕ್ರಾಸ್ ಛೇರ್ಮನ್ ರಾದ ಹೆಚ್.ಎಸ್.ಸುಂದರ್ ರಾಜ್ ಮಾತನಾಡಿ, ನಮ್ಮ ರೋಟರಿ ಹಾಗೂ ರೆಡ್ ಕ್ರಾಸ್ ಸಂಸ್ಥೆಗಳು ಸಮಾಜದಲ್ಲಿ ಶಿಕ್ಷಣ, ಆರೋಗ್ಯ ಸೇರಿದಂತೆ ವಿವಿಧ ಕ್ಷೇತ್ರಗಳನ್ನು ಅಭಿವೃದ್ಧಿ ಪಡಿಸುವ ಉದ್ದೇಶದಿಂದ ಹಲವಾರು ಯೋಜನೆಗಳನ್ನು ರೂಪಿಸುತ್ತಿದ್ದು, ಇದೀಗ ಸರ್ಕಾರಿ ಶಾಲೆಗಳ ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವಾಗುವ ನಿಟ್ಟಿನಲ್ಲಿ ಉಚಿತ ನೋಟ್ ಪುಸ್ತಕಗಳನ್ನು ವಿತರಣೆ ಮಾಡುತ್ತಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗಪಡಿಸಿಕೊಳ್ಳಬೇಕು ಎಂಬುದಾಗಿ ಅವರು ಹೇಳಿದರು.
ಇದೇ ಸಂದರ್ಭದಲ್ಲಿ ರಾಜ್ಯ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆ ವತಿಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಸಮಾರಂಭದಲ್ಲಿ ಮಾಜಿ ಲೋಕಾಯುಕ್ತರಾದ ಡಾ.ಸಂತೋಷ್ ಹೆಗಡೆಯವರಿಂದ “ಮಾಧ್ಯಮರತ್ನ” ಪ್ರಶಸ್ತಿ ಪುರಸ್ಕಾರಕ್ಕೊಳಗಾದ ಹಿರಿಯ ಪತ್ರಕರ್ತರಾದ ಆಲೂರು ಹನುಮಂತರಾಯಪ್ಪರವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೋಟರಿ ಅಧ್ಯಕ್ಷರಾದ ಹೆಚ್.ಎಸ್.ಕಿರಣ್ ವಹಿಸಿದ್ದರು. ಕಾರ್ಯಕ್ರಮದಲ್ಲಿ ನಗರಸಭೆ ಪೌರಾಯುಕ್ತರಾದ ಎ.ವಾಸೀಂ, ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎಂ.ತಿಪ್ಪೇಸ್ವಾಮಿ, ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಜಿಲ್ಲಾ ಪ್ರತಿನಿಧಿ ಅನಂತರೆಡ್ಡಿ, ರಾಜರಾಜೇಶ್ವರಿ ನಗರದ ರೋಟರಿ ಅಧ್ಯಕ್ಷೆ ಶ್ರೀಮತಿ ಸವಿತಾ ಇನಾಂದಾರ್, ಹಿರಿಯೂರು ರೋಟರಿ ಕಾರ್ಯದರ್ಶಿ ರಾಘವೇಂದ್ರಚಾರಿ, ಖಜಾಂಚಿ ಹೆಚ್.ಎಸ್.ಪ್ರಶಾಂತ್, ರೆಡ್ ಕ್ರಾಸ್ ಛೇರ್ಮನ್ ಹೆಚ್.ಎಸ್.ಸುಂದರರಾಜ್, ವೈಸ್ ಛೇರ್ಮನ್ ಬಿ.ಕೆ.ನಾಗಣ್ಣ, ಕಾರ್ಯದರ್ಶಿ ಎಂ.ಎಸ್.ರಾಘವೇಂದ್ರ, ಉಪಾಧ್ಯಕ್ಷರಾದ ಎ.ರಾಘವೇಂದ್ರ, ಖಜಾಂಚಿ ಸಣ್ಣಭೀಮಣ್ಣ, ರೆಡ್ ಕ್ರಾಸ್ ಹಾಗೂ ರೋಟರಿ ಸಂಸ್ಥೆಯ ಸದಸ್ಯರುಗಳಾದ ಆನಂದಶೆಟ್ಟಿ, ಹೆಚ್.ಎಂ.ಬಸವರಾಜ್, ಕೆ.ಎಸ್.ಮಹಬಲೇಶ್ವರಶೆಟ್ಟಿ, ಪಿ.ಆರ್.ಸತೀಶ್ ಬಾಬು, ಪರಮೇಶ್ವರ ಭಟ್, ಧನರಾಜ್, ಜಾಜೆಡ್, ದೇವರಾಜ್, ಶ್ರೀಮತಿ ಶಶಿಕಲಾ ರವಿಶಂಕರ್, ಚಂದ್ರಕೀರ್ತಿಗುಜ್ಜಾರ್, ಸೇರಿದಂತೆ ಅನೇಕರು ಉಪಸ್ಥಿತರಿದ್ದರು…

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend