ಸರ್ಕಾರಿ ಬಾಲಕರ ಪ್ರೌಢಶಾಲೆಯ ಮಕ್ಕಳಿಗೆ ಯುವ ಸ್ಪಂದನ… ವಿಜಯನಗರ ಜಿಲ್ಲೆ ಕೊಟ್ಟೂರು ತಾಲೂಕಿನ ಸರ್ಕಾರಿ ಬಾಲಕರ ಪ್ರೌಢ ಶಾಲೆಯ ಮಕ್ಕಳಿಗೆ ಇಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಯುವ ಸ್ಪಂದನ ಕಾರ್ಯಕ್ರಮದ ಅಡಿಯಲ್ಲಿ ತಾಲೂಕಿನ ಯುವ ಪರಿವರ್ತಕರಾದ ಎಮ್ ಶಿವರಾಜ್ ಅವರು ಯುವಕರ ಪ್ರಸ್ತುತ ಸನ್ನಿವೇಶದಲ್ಲಿ ಶಿಕ್ಷಣದ ಸಮಸ್ಯೆ , ಸಂರಕ್ಷಣೆ, ವ್ಯಕ್ತಿತ್ವ ಬೆಳವಣಿಗೆಯ ಸಮಸ್ಯೆಗಳ ಕುರಿತು ಮಾಹಿತಿ ತಿಳಿಸಿ ಯುವಕರು ತಮ್ಮ ಸಮಸ್ಯೆಗಳಿಗೆ ಸಂಬಂಧಪಟ್ಟಂತೆ ಕಚೇರಿ ದೂರವಾಣಿ ಸಂಖ್ಯೆಯ ಮೂಲಕ ಹಾಗೂ ಯುವ ಸ್ಪಂದನ ಕೇಂದ್ರಕ್ಕೆ ಭೇಟಿ ನೀಡುವ ಮೂಲಕ ಮಾರ್ಗದರ್ಶನವನ್ನು ಪಡೆದು ಕೊಳ್ಳಬಹುದು ಎಂದು ಮಕ್ಕಳಿಗೆ ಅರಿವು ಕಾರ್ಯಕ್ರಮವನ್ನು ಆರೋಗ್ಯ ಇಲಾಖೆಯ ಸಿಬ್ಬಂದಿ ಶ್ರೀಮತಿ ಸುಮಂಗಳ ಹಾಗೂ ಇತರ ಸಿಬ್ಬಂದಿ ಸಹಯೋಗದೊಂದಿಗೆ ಮಾಡಲಾಯಿತು.
ವರದಿ. ಮ್ಯಾಗೇರಿ ಸಂತೋಷ್
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030