ಸರ್ಕಾರದ ಯೋಜನೆಗಳು ಜನರ ಮನೆ ಬಾಗಿಲಿಗೆ ತಲುಪಿಸುವಲ್ಲಿ ಮಹಿಳೆಯರ ಪಾತ್ರ ಅಮೂಲ್ಯವಾದದ್ದು,ಶಾಸಕ ಎಲ್.ಕೃಷ್ಣನಾಯಕ್ ಹೇಳಿದರು
ಹೂವಿನಹಡಗಲಿ: ಸರ್ಕಾರದ ಯೋಜನೆಗಳು ಜನರ ಮನೆ ಬಾಗಿಲಿಗೆ ತಲುಪಿಸುವಲ್ಲಿ ಮಹಿಳೆಯರ ಪಾತ್ರ ಅಮೂಲ್ಯವಾದದ್ದು ಎಂದು ಶಾಸಕ ಎಲ್.ಕೃಷ್ಣನಾಯಕ್ ಹೇಳಿದರು.
ಪಟ್ಟಣದ ಪಂಚಮಸಾಲಿ ಸಮುದಾಯ ಭವನದಲ್ಲಿ ಕೇಂದ್ರ ಸಂವಹನ ಇಲಾಖೆ ಶಿವಮೊಗ್ಗ-ಬಳ್ಳಾರಿ, ವಾರ್ತಾ ಮತ್ತು ಪ್ರಸಾರ ಸಚಿವಾಲಯ ಬೆಂಗಳೂರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಶಾಖೆ ಹೂವಿನಹಡಗಲಿ ಸೇರಿ ವಿವಿಧ ಇಲಾಖೆ ಸಂಯುಕ್ತಾಶ್ರಯದಲ್ಲಿ ಪೋಷಣ್ ಅಭಿಯಾನ ಪಿಎಂ ಸೂರ್ಯ ಫರ್ ಯೋಜನೆ, ವಿಕಸಿತ ಭಾರತ ಬಜೆಟ್, ಹೊಸ ಕ್ರಿಮಿನಲ್ ಕಾನೂನುಗಳು ಮತ್ತು టిఎం ದೂರದರ್ಶಿತ್ವ 2047, ಛಾಯಾಚಿತ್ರ ಪ್ರದರ್ಶನ ಹಾಗೂ ವಿಶೇಷ ಜಾಗೃತಿ
ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಭಾರತ ಸರ್ಕಾರದ ವಾರ್ತಾ ಶಾಖೆಯ (ಪಿಐಬಿ) ಹೆಚ್ಚುವರಿ ನಿರ್ದೇಶಕ ಎಸ್.ಜಿ.ರವೀಂದ್ರ, ವಾರ್ತಾ ಇಲಾಖೆಯ ವಾರ್ತಾಧಿ ಕಾರಿ ಗವಿಸಿದ್ದಪ್ಪ ಹೊಸಮನಿ ಅಧ್ಯಕ್ಷತೆ ವಹಿಸಿದ್ದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಶ್ವೇತಾ ಮಾತನಾಡಿದರು. ಬಿಜೆಪಿ ವಿಭಾಗಿಯ ಪ್ರಧಾನ ಕಾರ್ಯದರ್ಶಿ ಎಚ್.ಪೂಜಪ್ಪ, ಹಣ್ಣಿ ಶಶಿಧರ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ರಾಮನಗೌಡ, ಅಂಗನವಾಡಿ ಫೆಡರೇಶನ್ ಅಧ್ಯಕ್ಷೆ ಜಯಲಕ್ಷ್ಮೀ, ಗಾಯಕಿ ಪಾರಿ ಕಾವ್ಯ, ಸಿಡಿಪಿಒ ಇಲಾಖೆಯ ಸಿಬ್ಬಂದಿ ಶಿವರಾಜ್, ಮೇಲ್ವಿಚಾರಕಿ ಡಿ.ಹನುಮಕ್ಕ ಸೇರಿ ಮತ್ತಿತರರಿದ್ದರು.
ವರದಿ.. ಮ್ಯಾಗೇರಿ ಸಂತೋಷ ಹೂವಿನಹಡಗಲಿ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030