ಹಾಡ ಹಗಲೇ ಪತ್ನಿಯ ಪ್ರಿಯಕರನನ್ನು ಕೊಡಲಿಯಿಂದ ಕೊಚ್ಚಿ ಕೊಲೆಗೈದ ಪತಿರಾಯ
ಪತ್ನಿಯ ಪ್ರಿಯಕರನನ್ನು ಹಾಡಹಗಲೇ ಕೊಡಲೆಯಿಂದ ಕೊಚ್ಚಿ ಕೊಲೆಗೈದ ಘಟನೆ ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ ತಾಲೂಕು, ಚಿಲಗೋಡು ಗ್ರಾಮದಲ್ಲಿ ನಡೆದಿದೆ
ವಿಜಯದಶಮಿ ದಿನದಂದೆ ಗ್ರಾಮದ ತಂಬ್ರಹಳ್ಳಿ ಹಗರಿಬೊಮ್ಮನಹಳ್ಳಿ ಮುಖ್ಯ ರಸ್ತೆಯ ಪಕ್ಕದಲ್ಲಿ ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಲಾಗಿದೆ.
ಚಿಲಗೋಡು ಗ್ರಾಮದ ಆನಂದೇವನಹಳ್ಳಿ ಬಸವರಾಜ (26) ಕೊಲೆಯಾದ ದುರ್ದೇವಿ ಅದೇ ಗ್ರಾಮದ ಬಸರಕೋಡು ಫಕೀರ್ ಸ್ವಾಮಿ ತನ್ನ ಪತ್ನಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ಪತ್ನಿಯ ಪ್ರಿಯಕರನನ್ನು ಹಾಡಹಗಲೇ ಕೊಡಲೆಯಿಂದ ತಲೆಗೆ ಬಲವಾಗಿ ಹೊಡೆದು ಕುತ್ತಿಗೆಗೆ ಕತ್ತರಿಸಿ ಬರ್ಬರವಾಗಿ ಕೊಲೆ ಮಾಡಿದ್ದಾನೆ. ಕೊಲೆ ಮಾಡಿ ತಾನೇ ತಂಬ್ರಹಳ್ಳಿ ಪೊಲೀಸ್ ಠಾಣೆಗೆ ಹೋಗಿ ಶರಣಾಗತನಾಗಿದ್ದಾನೆ.
ಕಳೆದ ಮೂರು ತಿಂಗಳ ಹಿಂದೆ ಪಕೀರಸ್ವಾಮಿಯ ಪತ್ನಿ ಕಾಣೆಯಾಗಿದ್ದಳು. ತಂಬ್ರಹಳ್ಳಿ ಪೊಲೀಸ್ ಠಾಣೆ ದೂರು ದಾಖಲಿಸಿದ ಬಳಿಕ ಪತ್ನಿ ತನ್ನ ಪ್ರಿಯಕರನೊಂದಿಗೆ ಓಡಿ ಹೋಗಿದ್ದಾಳೆ ಎಂದು ತಿಳಿದು ಬಂದಿತ್ತು. ಇದೀಗ ವಾಪಸ್ಸಾಗಿ ಎರಡು ತಿಂಗಳು ಕಳೆದಿತ್ತು ಆದರೆ ದಸರಾ ಹಬ್ಬ ದಂದು ಗ್ರಾಮದಲ್ಲಿ ಪತ್ನಿಯ ಪ್ರಿಯಕರನನ್ನು ಕೊಲೆ ಮಾಡಿದ್ದಾನೆ.
ಸ್ಥಳಕ್ಕೆ ಹಗರಿಬೊಮ್ಮನಹಳ್ಳಿ ಸಿಪಿಐ ವಿಕಾಸ್ ಲಮಾಣಿ, ತಂಬ್ರಹಳ್ಳಿ ಪಿಎಸ್ಐ ಗುರುಚಂದ್ರ ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿ ಕೊಲೆಗಾರನನ್ನು ವಶಕ್ಕೆ ಪಡೆದಿದ್ದಾರೆ…
ವರದಿ..ಮ್ಯಾಗೇರಿ ಸಂತೋಷ ಹೂವಿನಹಡಗಲಿ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030