ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ 11-11-2024 ರಂದು ಸ್ವತಂತ್ರ ಉದ್ಯಾನವನ ಬೆಂಗಳೂರಿನಲ್ಲಿ ಸಂಜೀವಿನಿ ಒಕ್ಕೂಟದ 15000 ಸಿಬ್ಬಂದಿಗಳಿಂದ ಧರಣಿ
ಕರ್ನಾಟಕ ರಾಜ್ಯ ಗ್ರಾಮ ಪಂಚಾಯತಿ ಮಟ್ಟದ ಮುಖ್ಯ ಪುಸ್ತಕ ಬರಹಗಾರರ(MBK) ಮತ್ತು ಸ್ಥಳಿಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳ(LCRP) ಸಖಿಯರ ಮಹಾ ಒಕ್ಕೂಟ ದಿಂದ ಇಂದು ಧರಣಿ
ಕರ್ನಾಟಕ ರಾಜ್ಯ ರಾಷ್ಟ್ರೀಯ ಜೀವನೋಪಾಯ ಅಭಿಯಾನ (ಸಂಜೀವಿನಿ ಯೋಜನೆ) ದಡಿ ಗ್ರಾಮ ಪಂಚಾಯತಿ ಮಟ್ಟದಲ್ಲಿ ಸ್ವ-ಸಹಾಯ ಗುಂಪುಗಳ ಒಕ್ಕೂಟವನ್ನು ರಚಿಸಿಕೊಂಡು ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳನ್ನು ಅತ್ಯಂತ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತ ಬಂದಿರುತ್ತೇವೆ. ಹಾಗೂ ಇನ್ನೂ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸಲು ಹಾಗೂ ಜೀವನ ಭದ್ರತೆ ದೃಷ್ಟಿಯಿಂದ ನಮ್ಮ ಬೇಡಿಕೆಗಳನ್ನು ಈಡೇರಿಸಲು ಈ ಹಿಂದೆ ಹಲವು ಬಾರಿ ಸರ್ಕಾರಕ್ಕೆ ಮನವಿಗಳನ್ನು ಸಲ್ಲಿಸುತ್ತ ಬಂದಿದ್ದೇವೆ ಸರ್ಕಾರ ಕೌಶಲ್ಯ ಅಭಿವೃದ್ಧಿ
ಸುತ್ತೋಲೆಯನ್ನು ಹೊರಡಿಸಿದ್ದು ಅದು ಗ್ರಾಮ ಪಂಚಾಯತಿ ಒಕ್ಕೂಟದ ಎಮ್ ಬಿ ಕೆ ಮತ್ತು ಎಲ್ ಸಿ ಆರ್ ಪಿಗಳಿಗೆ ಮಾರಕವಾಗಿದೆ. ಈ ಹಿಂದೆ ಹಲವಾರು ಬಾರಿ ನಮ್ಮ ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಾಗ ಸರ್ಕಾರದ ಅಭಿಯಾನ ನಿರ್ದೇಶಕರು ಸಕಾರತ್ಮಾಕವಾಗಿ ಸ್ಪಂದಿಸಿ ನಮ್ಮ ಬೇಡಿಕೆಗಳನ್ನು ಈಡೇರಿಸುವ ಭರವಸೆಯನ್ನು ನೀಡಿರುತ್ತಾರೆ ಆದರೆ ಸದರಿ ಉಲ್ಲೇಖದಲ್ಲಿ ಮುಖ್ಯ ಪುಸ್ತಕ ಬರಹಗಾರರು ಹಾಗೂ ಸ್ಥಳೀಯ ಸಂಪನ್ಮೂಲ ವ್ಯಕ್ತಿಗಳ ಗೌರವಧನವನ್ನು ಪರಿಷ್ಕರಿಸಿ ಆದೇಶ ಹೊರಡಿಸಿದ್ದು ಈ ಆದೇಶಕ್ಕೆ ರಾಜ್ಯದ ಎಲ್ಲಾ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತಿ ಮಟ್ಟದ ಮುಖ್ಯ ಪುಸ್ತಕ ಬರಹಗಾರರ(MBK) ಮತ್ತು ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳ(LCRP) ಮಹಾ ಒಕ್ಕೂಟ ವಿರೋದಿಸುತ್ತಿದ್ದು ಸದರಿ ಆದೇಶವನ್ನು ಹಿಂಪಡೆದು ನಮ್ಮ ಬೇಡಿಕೆಗಳನ್ನ ಈಡೇರಿಸುವ ವರೆಗೆ ರಾಜ್ಯದ 15000 ಸಂಜೀವಿನಿ ಒಕ್ಕೂಟದ ಸಿಬ್ಬಂದಿಗಳು ನಮ್ಮ ಹೋರಾಟವನ್ನ ನಿಲ್ಲಿಸದೆ ಅನಿರ್ದಿಷ್ಟ ಅವಧಿ ಧರಣಿಯನ್ನ ಮಾಡುತ್ತೇವೆ
ಬೇಡಿಕೆಗಳು:-
1. 2/22/ GEN/ 06/2024/ INSBLD
6:02-09-2024
ಸರ್ಕಾರದ
ಆದೇಶವನ್ನು ಹಿಂಪಡೆಯಬೇಕು
2. ಗ್ರಾಮ ಪಂಚಾಯತಿ ಒಕ್ಕೂಟದ ಮುಖ್ಯ ಪುಸ್ತಕ ಬರಹಗಾರರು (MBK) ಗಳಿಗೆ 20,000-00 ಹಾಗೂ ಸ್ಥಳೀಯ ಸಂಪನ್ಮೂಲ ವ್ಯಕ್ತಿಗಳ (LCRP) ಗಳಿಗೆ 15,000-00 ರೂಪಾಯಿ ನಿಗದಿಪಡಿಸಬೇಕು.
3. ಪಂಚಾಯತಿ ಮಟ್ಟದ ಒಕ್ಕೂಟದ ಸಖಿಯರು ಗಳಿಗೆ 15000-00 ನಿಗದಿಪಡಿಸಬೇಕು.
4. ಸಮಾನ ಕೆಲಸಕ್ಕೆ ಸಮಾನ ವೇತನ
5. ಸರ್ಕಾರದಿಂದ ನೇರವಾಗಿ ಮುಖ್ಯ ಪುಸ್ತಕ ಬರಹಗಾರರು (MBK) ಗಳಿಗೆ ಹಾಗೂ ಸ್ಥಳೀಯ ಸಂಪನ್ಮೂಲ ವ್ಯಕ್ತಿಗಳ (LCRP) ವೇತನ ಜಮೆಯಾಗಬೇಕು
6. ನಮ್ಮ ಕೆಲಸದ ಜೊತೆಗೆ ಗ್ರಾಮ ಪಂಚಾಯತಿಗಳ ಹಲವಾರು ಕೆಲಸಗಳನ್ನು ನಿರ್ವಹಣೆ ಮಾಡುತ್ತಿದ್ದು ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿ ಮಟ್ಟದ ಒಕ್ಕೂಟಗಳನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ವಹಿಸುಬೇಕು
7. ವೇತನ ಸಹಿತ ಹೆರಿಗೆ ರಜೆ ಮಂಜೂರು ಮಾಡುವುದು
8. ಮಹಿಳಾ ಸಿಬ್ಬಂದಿಗಳಾದ ನಮ್ಮಗಳ ಮೇಲೆ ಮೇಲಾಧಿಕಾರಿಗಳಿಂದ ನಡೆಯುತ್ತಿರುವ ಮಾನಸಿಕ ದೌರ್ಜನ್ಯವನ್ನು ನಿಲ್ಲಿಸಬೇಕು.
9. ESI & PF ಸೌಲಭ್ಯಗಳನ್ನು ಒದಗಿ ಬೇಕೆಂದು.
ಒಕ್ಕೂಟದ ರಾಜ್ಯಾಧ್ಯಕ್ಷರಾದ
ರುದ್ರಮ್ಮ
ನಮ್ಮ ಬೇಡಿಕೆ ಈಡೇರಬೇಕು ಇಲ್ಲದಿದ್ದಲ್ಲಿ ಅನಿರ್ದಿಷ್ಟಾವದಿ ಧರಣಿಮಾಡುತೇವೆ ಎಂದರು..
ವರದಿ. ಯುವರಾಜ್ ಹೊನ್ನಾಳಿ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030