ಹೊಳಲ್ಕೆರೆ ಪಟ್ಟಣದ ವಾಗ್ದೇವಿ ಇಂಟರ್ನ್ಯಾಷನಲ್ ಶಾಲೆಯಲ್ಲಿ ಭಾನುವಾರ ಶ್ರೀ ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿವಿಧ ವೇಷ ಭೂಷಣಗಳು ಸಾಂಸ್ಕೃತಿಕ ಹಾಡುಗಳ ಸಮಾರಂಭವನ್ನು ಆಯೋಜಿಸಲಾಗಿತ್ತು. ಸಂಸ್ಥೆಯ ಕಾರ್ಯದರ್ಶಿ ಸಿದ್ದಲಿಂಗ ಸ್ವಾಮಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಮಕ್ಕಳಲ್ಲಿ ಅಡಗಿರುವ ಪ್ರತಿಭೆಗಳನ್ನು ಗುರುತಿಸುವಲ್ಲಿ ಇಂತಹ ಕಾರ್ಯಕ್ರಮಗಳು ವೇದಿಕೆಗಳು ಅತ್ಯ ಅಗತ್ಯ ಎಂದರು ಶಿಕ್ಷಕರು ಪೋಷಕರು ಮಕ್ಕಳಲ್ಲಿರುವ ಸಾಂಸ್ಕೃತಿಕ ಮೌಲ್ಯಗಳನ್ನು ಪ್ರೋತ್ಸಾಹಿಸುವಂತಾಗಬೇಕು ಪಠ್ಯ ಪುಸ್ತಕದ ಜೊತೆಗೆ ಮಕ್ಕಳಲ್ಲಿ ಸಾಂಸ್ಕೃತಿಕ ಪ್ರಜ್ಞೆ ಶಿಸ್ತು ಸಂಯಮವನ್ನು ರೂಡಿಸಬೇಕೆಂದು ತಿಳಿಸಿದರು ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಶ್ರೀ ಕೃಷ್ಣ. ರಾದೆಯ ವೇಷ ಭೂಷಣಗಳನ್ನು ಧರಿಸಿ ವೇದಿಕೆಯ ಮೇಲೆ ನೃತ್ಯ ಮಾಡಿದರು. ಈ ಸಂದರ್ಭದಲ್ಲಿ ಶಾಲೆ ಆಡಳಿತ ಅಧಿಕಾರಿ ಶ್ರೀ ಶಿವರಾಮ್ ಶ್ರೀನಿವಾಸ್ ರಾಧಿಕಾ ಬಿ ಶ್ವೇತ ವೀಣಾ ಶಾಂತ ಹರಿತ ಸಿಂಧು ಮುಖ್ಯೋಪಾಧ್ಯಾಯರು ಶಿಕ್ಷಕರು ಉಪಸ್ಥಿತರಿದ್ದರು…
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030