‘ಡಿ.25ರಂದು ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನಾ ಕಚೇರಿ ಉದ್ಘಾಟನೆ’
ಹೊಳಲ್ಕೆರೆ: ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಹೊಳಲ್ಕೆರೆ ಪಟ್ಟಣಕ್ಕೆ ಭೇಟಿ ನೀಡಲಿದ್ದು, ತಾಲ್ಲೂಕು ಕ್ರೀಡಾಂಗಣ- ದಲ್ಲಿ ಬೃಹತ್ ಸಮಾವೇಶ ನಡೆಸಲಾಗುವುದು ಎಂದು ಶಾಸಕ ಡಾ. ಎಂ.ಚಂದ್ರಪ್ಪ ಹೇಳಿದರು.
ಹೊಳಲ್ಕೆರೆ ಪಟ್ಟಣದ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಕಛೇರಿಯಲ್ಲಿ ಶನಿವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ವೀರೇಂದ್ರ ಹೆಗ್ಗಡೆ ಅವರು ಹೊಳಲ್ಕೆರೆ ಪಟ್ಟಣದಲ್ಲಿ ಸುಮಾರು ₹ 4 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಚೇರಿಯ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ. ಅವರನ್ನು ಕುದುರೆ ಸಾರೋಟಿನಲ್ಲಿ ಅದ್ದೂರಿ ಮೆರವಣಿಗೆ ಮೂಲಕ ಕರೆತರಲಾಗುವುದು’ ಎ೦ದರು.
ಸಮಾವೇಶವನ್ನು ಅದ್ದೂರಿಯಾಗಿ ಮಾಡುವ ಮೂಲಕ ಯಶಸ್ವಿಗೊಳಿಸಬೇಕು. ಸಮಾವೇಶಕ್ಕೆ ಬರುವ ಜನರಿಗೆ ಊಟದ ವ್ಯವಸ್ಥೆ ಮಾಡಬೇಕು. ಕಾರ್ಯಕ್ರಮ ಯಶಸ್ವಿಯಾಗಲು ಎಲ್ಲರೂ ಕೈಜೋಡಿಸಬೇಕು’ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕಿ ಬಿ.ಗೀತಾ ಸಭೆಯಲ್ಲಿ ಮಾತನಾಡಿ ಮನವಿ ಮಾಡಿದರು.
ಪುರಸಭೆ ಸದಸ್ಯ ಆರ್.ಎ. ಅಶೋಕ್, ಕೆ.ಸಿ. ರಮೇಶ್, ಜನ ಜಾಗೃತಿ ವೇದಿಕೆಯ ಮಾರುತೇಶ್, ದೇವರಾಜು, ಕರಿಯಪ್ಪ, ಎಚ್. ಟಿ.ಹನುಮಂತಪ್ಪ, ಸಂಗನ ಗುಂಡಿ ಮಂಜುನಾಥ್, ಮೋಹನ್ ನಾಗರಾಜ್, ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ದಿನೇಶ್ ಪೂಜಾರಿ, ತಾಲ್ಲೂಕು ಯೋಜನಾಧಿಕಾರಿ ಪ್ರಭಾಕರ್, ವಸಂತ್ ಇನ್ನು ಇತರರು ಇದ್ದರು…
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030