ಹೊಳಲು ಗ್ರಾಮದಲ್ಲಿ ವಿಶ್ವ ಯೋಗ ದಿನಾಚರಣೆ…!!!

Listen to this article

ಹೊಳಲು ಗ್ರಾಮದಲ್ಲಿ ವಿಶ್ವ ಯೋಗ ದಿನಾಚರಣೆ. ವಿಜಯನಗರ ಜಿಲ್ಲಾ, ಹೂವಿನ ಹಡಗಲಿ ತಾಲ್ಲೂಕಿನ ಹೊಳಲು ಗ್ರಾಮದಲ್ಲಿ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಯಶಸ್ವಿಯಾಗಿ ಯೋಗ ಗುರುಗಳಾದ ಶ್ರೀ ಶಿವುಕುಮಾರ್ ಯೋಗಾಚಾರ್ಯರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಹಾಗೂ ಎಲ್ಲಾ ಶಾಲಾ ಕಾಲೇಜು ವಿದ್ಯಾರ್ಥಿಗಳು ಸಾರ್ವಜನಿಕರು ಉಪಸ್ಥಿತಿಯಲ್ಲಿ ನಡೆಸಲಾಯಿತು. ಇ ಕಾರ್ಯಕ್ರಮಕ್ಕೆ ಶಿಕ್ಷಣ ಇಲಾಖೆ ಆರೋಗ್ಯ ಇಲಾಖೆ ಗ್ರಾಮ ಪಂಚಾಯಿತಿ ಎಲ್ಲಾ ಸಂಘ ಸಂಸ್ಥೆಯ ಸಹಯೋಗದೊಂದಿಗೆ ಸುಮಾರು ಒಂದು ಸಾವಿರ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಬಸವ ಪತಂಜಲಿ ಯೋಗ ಸಮಿತಿ ಹೊಳಲು ಹಾಗೂ ಶ್ರೀ ಯೋಗ ಸಂಜೀವಿನಿ ಜನ ಸೇವಾ ಟ್ರಸ್ಟ್ ರಿಜಿಸ್ಟರ್ ಇಟ್ಟಿಗಿ ಇವರ ನೇತೃತ್ವದಲ್ಲಿ ಎಂಟನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯು ಹೊಳಲು ಗ್ರಾಮದಲ್ಲಿ ಅದ್ದೂರಿಯಿಂದ ಯೋಗವನ್ನು ಆಚರಣೆ ಮಾಡಲಾಗಿತ್ತು. ಯೋಗ ಗುರುಳಾದ ಶ್ರೀ ಶಿವಕುಮಾರ್ ಯೋಗಾಚಾರ್ಯರು ಪತ್ರಿಕೆಯ ವರದಿಗಾರರೊಂದಿಗೆ ಮಾತಾಡಿ 2015 ಜೂನ್ 21ರಂದು ಮೊದಲ ಬಾರಿಗೆ ಜಾರಿಗೆ ಬಂದಿರುವ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ವಿಶ್ವಾದ್ಯಂತ ಪ್ರತಿವರ್ಷ ಜೂನ್ 21ರಂದು ಆಚರಿಸಲಾಗುತ್ತದೆ. ಯೋಗವು ಬಹಳ ಹಳೆಯ ಅಭ್ಯಾಸವಾಗಿದ್ದು, ಪ್ರಾಚೀನ-ಪುರಾಣ ಕಾಲದಿಂದಲೂ ದೇಶದಲ್ಲಿ ಅನುಸರಿಸುತ್ತಾ ಬರಲಾಗಿದೆ.ಪ್ರತಿ ವರ್ಷ ಜೂನ್‌ 21 ರಂದು ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಇತ್ತಿಚಿನ ದಿನಗಳಲ್ಲಿ ವಿಶ್ವಾದ್ಯಂತ ಹೆಚ್ಚಿನ ಜನರು ತಮ್ಮ ಮಾನಸಿಕ ಒತ್ತಡ ಮತ್ತು ದೈಹಿಕ ಸೌಂದರ್ಯಕ್ಕಾಗಿ ಯೋಗದ ಮೊರೆ ಹೋಗುತ್ತಿದ್ದಾರೆ. ಯೋಗವು ಮನಸ್ಸು ಮತ್ತು ದೇಹವನ್ನು ಸಂಪರ್ಕಿಸುವ ಪ್ರಾಚಿನ ಕಲೆಯಾಗಿದೆ. ಭಾರತವು ಜಗತ್ತಿಗೆ ನೀಡಿದ ಒಂದು ದೊಡ್ಡ ಕೊಡುಗೆಯಾಗಿದೆ.

ಮನುಷ್ಯನಿಗೆ ಬಾಹ್ಯ ಸೌಂದರ್ಯ ಎಷ್ಟು ಮುಖ್ಯವೊ, ಆಂತರಿಕ ಸೌಂದರ್ಯವು ಅಷ್ಟೇ ಮುಖ್ಯವಾಗಿರುತ್ತದೆ. ಇವೆರಡನ್ನು ಚೆನ್ನಾಗಿ ಇಟ್ಟುಕೊಳ್ಳಲು ಯೋಗವು ಬಹಳ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಪ್ರತಿ ನಿತ್ಯವು ಮನುಷ್ಯ ಯೋಗ ಮಾಡುವುದರಿಂದ ಉತ್ತಮವಾದ ಆರೋಗ್ಯಕರ ಜೀವನವನ್ನು ನಡೆಸಬಹುದಾಗಿದೆ.

ಯೋಗವು 6000 ವರ್ಷಕ್ಕೂ ಹಳೆಯದಾದ ಭೌತಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಅಭ್ಯಾಸವಾಗಿದೆ. ಪ್ರತಿವರ್ಷ ಯೊಗದ ದಿನಾಚರಣೆಯು ಯೋಗ, ಧ್ಯಾನ, ಸಭೆಗಳು ಚರ್ಚೆಗಳು, ಸಾಂಸ್ಕೃತಿಕ ಪ್ರದರ್ಶನಗಳು ಇತ್ಯಾದಿಗಳನ್ನು ಅಭ್ಯಸಿಸುವುದರ ಮೂಲಕ ವಿಶ್ವದ ಬಹುತೇಕ ರಾಷ್ಟ್ರಗಳಲ್ಲಿ ಯೋಗ ದಿನವನ್ನು ಆಚರಿಸಲಾಗುತ್ತದೆ ಎಂದರು. ಯೋಗವು ಯೋಗ ದಿನಾಚರಣೆಗಷ್ಟೆ ಸೀಮಿತವಾಗದೆ.ಪ್ರತಿದಿನ ಯೋಗ ಮಾಡಿ ಉತ್ತಮ ಆಯುಷ್ಯ, ಆರೋಗ್ಯ ಪಡೆಯಲೆಂದು ನಮ್ಮ ಪತ್ರಿಕೆಯ ಆಶಯ.

ವರದಿ-ಪ್ರಕಾಶ್ ಆಚಾರ್ ಇಟ್ಟಿಗಿ.

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend