ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕರ್ನಾಟಕ ರಾಜ್ಯಕ್ಕೆ 8ಮತ್ತು 9ನೇ ರ್ಯಂಕ್ ಪಡೆದ ವಿದ್ಯಾರ್ಥಿಗಳಿಗೆ ಅಭಿನಂದನೆಗಳು…!!!

Listen to this article

2023ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಕರ್ನಾಟಕ ರಾಜ್ಯಕ್ಕೆ ಎಂಟು ಮತ್ತು ಒಂಬತ್ತನೇ ರ್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಹೃತ್ಪೂರ್ವಕ ಅಭಿನಂದನೆಗಳು.
ಮಲ್ಲಿಗೆ ನಾಡಿಗೆ ನಾವೇ ನಂಬರ್:-1 ಎಂದು ಕಾಲೇಜಿನ ವಿದ್ಯಾರ್ಥಿಗಳು & ಉಪನ್ಯಾಸಕರು ಖುಷಿಯಿಂದ ಸಂಭ್ರಮವನ್ನು ಆಚರಿಸಿದರು.

ರ್ಯಾಂಕ್ ಪಡೆದ ವಿದ್ಯಾರ್ಥಿಗಳ ಪೋಷಕರು ಸಹ ಸಂತಸ ಪಟ್ಟರು.

ಕರ್ನಾಟಕ ರಾಜ್ಯಕ್ಕೆ ಎಂಟು ಮತ್ತು 9ನೇ ರ್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿಯವರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದನೆಗಳನ್ನು ಸಲ್ಲಿಸಿದರು.

ಗ್ರಾಮೀಣ ಭಾಗದಲ್ಲಿ ಇಂತಹ ವಿದ್ಯೆ ಸಂಸ್ಥೆಯನ್ನು ಸ್ಥಾಪಿಸಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿರುವ ಕಾಲೇಜಿನ ಆಡಳಿತ ಮಂಡಳಿಯವರಿಗೆ ಮತ್ತು ಉಪನ್ಯಾಸಕ ವರ್ಗದವರಿಗೆ ತುಂಬು ಹೃದಯದ ಅಭಿನಂದನೆಗಳನ್ನು ಪೋಷಕರು ಸಲ್ಲಿಸಿದರು.ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ರ್ಯಾಂಕ್ ಪಡೆದ ವಿದ್ಯಾರ್ಥಿಗಳ ಸಾಧನೆ ಕುರಿತು ಕಾಲೇಜಿನ ಪ್ರಾಂಶುಪಾಲರಾದ ದೇವರಾಜ್ ಬಳಿಗಾರ ಮತ್ತು ಕನ್ನಡ ಉಪನ್ಯಾಸಕರಾದ ಮೂಗಪ್ಪ.ಸಿ ರವರು
ಪರೀಕ್ಷೆ ಬರೆದ 52 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಎಂದು ಮಾಧ್ಯಮಕ್ಕೆ ತಿಳಿಸಿದರು. ಪರೀಕ್ಷೆ ಬರೆದ 52 ವಿದ್ಯಾರ್ಥಿಗಳಲ್ಲಿ
37 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಪಡೆದುಕೊಂಡಿದ್ದಾರೆಂದು ಹೇಳಲು ಹರ್ಷವೆನಿಸುತ್ತದೆ.

ಒಟ್ಟಾರೆಯಾಗಿ ಕಾಲೇಜಿನ ಫಲಿತಾಂಶ (ನೂರರಷ್ಟು) 💯 ಬಂದಿದೆ.

ವರದಿ-ಪ್ರಕಾಶ್ ಆಚಾರ್ ಇಟ್ಟಿಗಿ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend