ನವರಾತ್ರಿಯ ಎಂಟನೇ ದಿನದಂದು ಮಹಾಗೌರಿ ದೇವಿಯನ್ನು ಪೂಜಿಸಲಾಗುತ್ತದೆ…!!!

Listen to this article

🔱🌺 ಮಹಾ ಗೌರಿ 🔱🌺

ಶ್ವೇತೇ ವೃಷೇ ಸಮಾರೂಢಾ ಶ್ವೇತಾಂಬರಧರಾ ಶುಚಿಃ |
ಮಹಾಗೌರೀ ಶುಭಂ ದದ್ಯಾನ್ಮಹಾದೇವಪ್ರಮೋದದಾ ||

ನವರಾತ್ರಿಯ ಎಂಟನೇ ದಿನದಂದು ಮಹಾಗೌರಿ ದೇವಿಯನ್ನು ಪೂಜಿಸಲಾಗುತ್ತದೆ. ಮಹಾಗೌರಿಯು ತನ್ನ 16ನೇ ವಯಸ್ಸಿನ ಯೌವ್ವನೆಯಾಗಿ ಕಾಣಿಸಿಕೊಳ್ಳುತ್ತಾಳೆ. ಗೌರಿ ಎಂದರೆ ಆಕೆಯು ಗಿರಿ ಅಥವಾ ಪರ್ವತದ ಮಗಳೆಂದು ಹೇಳಲಾಗುತ್ತದೆ. ಗೂಳಿ ಮೇಲೆ ಪ್ರಯಾಣಿಸುವ ಗೌರಿ ತನ್ನ ಕೈಯಲ್ಲಿ ತ್ರಿಶೂಲದೊಂದಿಗೆ ಢಮರುವನ್ನು ಹಿಡಿಕೊಂಡಿರುತ್ತಾಳೆ.
ತಾಯಿ ದುರ್ಗೆಯು ಭೂಮಿಯ ಮೇಲೆ ಜನ್ಮವನ್ನು ಪಡೆದು, ಮರಳಿ ದೇವಲೋಕಕ್ಕೆ ಹೋಗಿ ಶಿವನನ್ನು ಮದುವೆಯಾಗಲು ಬಯಸುತ್ತಾಳೆ. ನಾರದರ ಸಲಹೆಯಂತೆ ಶಿವನನ್ನು ಒಲಿಸಿಕೊಳ್ಳಲು ತಪಸ್ಸು ಮಾಡುತ್ತಾಳೆ. ಆಕೆ ಸಂಪೂರ್ಣವಾಗಿ ತಪಸ್ಸಿನಲ್ಲಿ ಮಗ್ನವಾಗಿ ಆಹಾರ, ನೀರನ್ನು ತ್ಯಜಿಸಿರುವ ಸಮಯದಲ್ಲಿ ಆಕೆಯ ದೇಹದಲ್ಲಿ ಧೂಳು, ಕೊಳೆ ತುಂಬಿಕೊಳ್ಳುತ್ತದೆ. ಬಿಸಿಲಿನಿಂದಾಗಿ ಆಕೆಯ ದೇಹವು ಸಂಪೂರ್ಣವಾಗಿ ಕಪ್ಪಾಗುತ್ತದೆ. ಸಾಔಇರಾರು ವರ್ಷಗಳ ತಪಸ್ಸಿನ ನಂತರ ಶಿವನು ಆಕೆಯಿಂದ ಪ್ರಭಾವಿತನಾಗಿ ಆಕೆಯ ದೇಹವನ್ನು ಹೊಳೆಯುವಂತೆ ಮಾಡಲು ಗಂಗೆಯನ್ನು ಹರಿಯಲು ಬಿಡುತ್ತಾನೆ. ಇದರಿಂದಾಗಿ ಗೌರಿಯು ಕಾಂತಿಯುತವಾಗಿ, ಶ್ವೇತವರ್ಣದಲ್ಲಿ ಧ್ಯಾನಾಸಕ್ತಳಾಗಿ ಕಾಣುತ್ತಾಳೆ
🌼🌼🌼🌼🌼🌼🌼🌼🌼🌼.

🔱🌼🙌
*ಸರ್ವರಿಗೂ ಮಂಗಲವೇ ಒದಗಲಿ* 🙏🔱🙌

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend