ಕಂಪ್ಲಿ ಪಟ್ಟಣದಲ್ಲಿ ವಿವಿಧಡೆ ದಾಳಿ: ನಾಲ್ಕು ಕಿಶೋರ ಕಾರ್ಮಿಕರ ರಕ್ಷಣೆ…!!!

Listen to this article

ಬಳ್ಳಾರಿ : ಕಂಪ್ಲಿ ಪಟ್ಟಣದಲ್ಲಿ ಜಿಲ್ಲಾ ರಾಷ್ಟ್ರೀಯ ಬಾಲಕಾರ್ಮಿಕ ಯೋಜನೆ, ಕಾರ್ಮಿಕ ಇಲಾಖೆ, ಬಚಪನ್ ಬಚಾವೋ ಆಂದೋಲನ, ಪೋಲಿಸ್ ಇಲಾಖೆ,ˌ ಕಂದಾಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಕ್ಕಳ ಸಹಾಯವಾಣಿ ಮತ್ತು ಶಿಕ್ಷಣ ಇಲಾಖೆ ಸಹಯೋಗದೊಂದಿಗೆ ಜಿಲ್ಲಾಧಿಕಾರಿಗಳ ನಿರ್ದೇಶನದ ಮೇರೆಗೆ ಮಂಗಳವಾರದಂದು ಕಾರ್ಮಿಕ ನಿರೀಕ್ಷಕರಾದ ಎಂ.ಅಶೋಕ, ಬಚಪನ್ ಬಚಾವೋ ಆದೋಲನ ರಾಜ್ಶ ಸಮನ್ವಯಾಧಿಕಾರಿ ಬೀನು ವರ್ಗೀಸ, ಕ್ಷೇತ್ರಾಧಿಕಾರಿ ಪಿ.ಎಂ ಈಶ್ವರಯ್ಯ ಮತ್ತು ಇತರ ಅಧಿಕಾರಿಗಳ ನೇತೃತ್ವದಲ್ಲಿ ದಾಳಿ ನಡೆಸಿ 04 ಕಿಶೋರ ಕಾರ್ಮಿಕ ಮಕ್ಕಳನ್ನು ರಕ್ಷಿಸಲಾಗಿದೆ.

ಪಟ್ಟಣದ ವಿವಿಧೆಡೆ ಗ್ಯಾರೇಜ್, ಬೇಕರಿ, ಶಾಮಿಯಾನ ಸಪ್ಲೆಯರ್ಸ್, ಮೆಕ್ಯಾನಿಕ್ ಶಾಪ್ ಇತ್ಯಾದಿ ಅಂಗಡಿ ಉದ್ದಿಮೆಗಳ ಮೇಲೆ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) 1986 ಕಾಯ್ದೆ ಉಲ್ಲಂಘನೆ ಮಾಡಿದ ಉದ್ದಿಮೆಗಳ ಮೇಲೆ ಆಕಸ್ಮಿಕ ದಾಳಿ ನಡೆಸಿ 04 ಕಿಶೋರ ಕಾರ್ಮಿಕನ್ನು ಕೆಲಸದಿಂದ ಬಿಡುಗಡೆಗೊಳಿಸಿ 03 ಮಕ್ಕಳ ಮಾಲೀಕರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಮಕ್ಕಳ ವಿದ್ಯಾಭ್ಯಾಸವನ್ನು ಮುಂದುವರೆಸುವಂತೆ ಮನವೊಲಿಸಿ ಪೋಷಕರಿಗೆ ಒಪ್ಪಿಸಲಾಯಿತು.

ಮಾಲೀಕರ ವಿರುದ್ದ ಕಂಪ್ಲಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಇದೇ ಸಂದರ್ಭದಲ್ಲಿ ಕಾಯ್ದೆಯ ಕರಪತ್ರ ಮತ್ತು ಸ್ಟೀಕರ್ಸ್ ಹಂಚುವುದರ ಮೂಲಕ ಕಾನೂನು ಅರಿವು ಮೂಡಿಸಲಾಯಿತು ಎಂದು ರಾಷ್ಟ್ರೀಯ ಬಾಲ ಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕ ಎ.ಮೌನೇಶ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ..

ವರದಿ. ವಿರೇಶ್. ಎಚ್.

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend