ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯ ಹಲವು ತಾಲೂಕಿನ ಗ್ರಾಮಗಳಿಗೆ ಭೇಟಿನೀಡಿದ ಜಿಲ್ಲಾಧಿಕಾರಿ…!!!

Listen to this article

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಜಿಲ್ಲೆಯ ಜೇವರ್ಗಿ ಹಾಗೂ ಅಫಜಲಪುರ ತಾಲ್ಲೂಕುಗಳಿಗೆ ಭೇಟಿ ನೀಡಿ ಚುನಾವಣಾ ಪೂರ್ವಸಿದ್ಧತೆ ಹಾಗೂ ಮಾದರಿ ನೀತಿ ಸಂಹಿತೆ ಜಾರಿ ಕುರಿತು ಪರಿಶೀಲಿಸಿದರು.

ಜೇವರ್ಗಿ ಪಟ್ಟಣದ ಮಿನಿ ವಿಧಾನಸೌಧಕ್ಕೆ ಭೇಟಿ ನೀಡಿ ಮಸ್ಟರಿಂಗ್, ಡಿ-ಮಸ್ಟರಿಂಗ್ ಕೇಂದ್ರ ಹಾಗೂ ಸ್ಟ್ರಾಂಗ್ ರೂಮ್ ಪರಿಶೀಲಿಸಿದರು. ಏಕಗವಾಕ್ಷಿ ವ್ಯವಸ್ಥೆಯನ್ನು ವೀಕ್ಷಿಸಿದರು. ಚುನಾವಣೆಗೆ ಸಂಬಂಧಿಸಿದಂತೆ ತಂಡಗಳನ್ನು ರಚಿಸಿರುವ ಕುರಿತು ತಹಶೀಲ್ದಾರ್ ಮಲ್ಲಣ್ಣ ಯಲಗೋಡ ಅವರಿಂದ ಮಾಹಿತಿ ಪಡೆದರು.

ನಂತರ ಜೇರಟಗಿ ಚೆಕ್‌ಪೋಸ್ಟ್‌ಗೆ ಭೇಟಿ ನೀಡಿ ತಪಾಸಣೆ ಕಾರ್ಯ ವೀಕ್ಷಿಸಿದರು. ಬಳಿಕ ಗ್ರಾಮದ ಸೂಕ್ಷ್ಮ ಮತಗಟ್ಟೆಗೆ ಭೇಟಿ ನೀಡಿದರು. ನಂತರ ಬೇಲೂರ ಗ್ರಾಮದ ಮತಗಟ್ಟೆ ಹಾಗೂ ಅಂಕಲಗಾದ ಅತಿ ಸೂಕ್ಷ್ಮ ಮತಗಟ್ಟೆ ವೀಕ್ಷಿಸಿದರು.

ಜಿಲ್ಲಾ ಪಂಚಾಯಿತಿ ಸಿ.ಇ.ಒ ಭಂವರ್ ಸಿಂಗ್ ಮೀನಾ, ಎಸ್ಪಿ ಅಕ್ಷಯ್ ಹಾಕೆ, ಡಿವೈಎಸ್ಪಿ ಬಿಂದುರಾಣಿ, ಜೇವರ್ಗಿ ತಾಲ್ಲೂಕು ಎ.ಆರ್.ಒ. ಕೃಷ್ಣ ಹಾಜರಿದ್ದರು.

ಅಫಜಲಪುರ ತಾಲ್ಲೂಕಿಗೆ ಭೇಟಿ: ಬಿ.ಫೌಜಿಯಾ ತರನ್ನುಮ್ ಅವರು ಅಫಜಲಪುರ ತಾಲ್ಲೂಕಿನ ಗಾಣಗಾಪುರದ ಮತಗಟ್ಟೆ, ಚೌಡಾಪುರ ಚೆಕ್‌ಪೋಸ್ಟ್‌, ಮದರಾ ಬಿ. ಗ್ರಾಮದಲ್ಲಿನ ಅತಿ ಸೂಕ್ಷ್ಮ ಮತ್ತು ಸೂಕ್ಷ್ಮ ಮತಗಟ್ಟೆಗೆ ಭೇಟಿ ನೀಡಿ ಪರಿಶೀಲಿಸಿದರು. ತಹಶೀಲ್ದಾರ್ ಸಂಜೀವಕುಮಾರ ದಾಸರ್ ಹಾಜರಿದ್ದರು…

ವರದಿ.ವಿನಾಯಕ ಬೀದರ್

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend