ಕುಡಿಯುವ ನೀರು ಪೂರೈಕೆ ಪ್ರಥಮಾದ್ಯತೆ ಆಗಲಿ -ಭಂವರ್ ಸಿಂಗ್ ಮೀನಾ…!!!

Listen to this article

ಕುಡಿಯುವ ನೀರು ಪೂರೈಕೆ ಪ್ರಥಮಾದ್ಯತೆ ಆಗಲಿ
-ಭಂವರ್ ಸಿಂಗ್ ಮೀನಾ

ಕಲಬುರಗಿ, ಜಿಲ್ಲೆಯಲ್ಲಿ ಭೀಕರ ಬರಗಾಲ ಇರುವುದರಿಂದ ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದಲ್ಲೆ, ಕೂಡಲೆ ನೀರು ಪೂರೈಕೆ ಮಾಡಬೇಕು. ಇದನ್ನು ಪ್ರಥಮಾದ್ಯತೆಯನ್ನಾಗಿ ಪರಿಗಣಿಸಬೇಕು ಎಂದು ಜಿಲ್ಲಾ ಪಂಚಾಯತ್ ಸಿ.ಇ.ಓ ಭಂವರ್ ಸಿಂಗ್ ಮೀನಾ ಹೇಳಿದರು.

ಶುಕ್ರವಾರ ತಮ್ಮ ಕಚೇರಿಯಲ್ಲಿ ಬರಗಾಲ ಹಾಗೂ ಕುಡಿಯುವ ನೀರಿನ ಸಮಸ್ಯೆಗಳ ಕುರಿತು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಅಭಿಯಂತತರು, ಸಹಾಯಕ ಕಾರ್ಯಪಾಲಕ ಅಭಿಯಂತರರು ಹಾಗೂ ಎಲ್ಲಾ ತಾಲೂಕ ಪಂಚಾಯತ್ ಕಾರ್ಯನಿವಾಹಕ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು.

ಬರಗಾಲ ಪರಿಹಾರ ಕಾಮಗಾರಿಗಳ ನಿರ್ವಹಣೆಯಲ್ಲಿ ವಿಫಲರಾದಲ್ಲಿ, ಸಂಬಂಧಿಸಿದ ಅಧಿಕಾರಿಗಳ ಅಧಿಕಾರಿಗಳನ್ನೆ ನೇರ ಹೊಣೆಗಾರರನ್ನಾಗಿ ಮಾಡಿ “ರಾಷ್ಟ್ರೀಯ ವಿಪತ್ತು ನಿರ್ವಹಣೆ ಕಾಯ್ದೆ” ಅಡಿಯಲ್ಲಿ ಶಿಸ್ತು ಕ್ರಮ ಕೈಗೊಳ್ಳಲು ಮೇಲಾಧಿಕಾರಿಗಳಿಗೆ ವರದಿ ಸಲ್ಲಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ಅಧಿಕಾರಿಗಳಿಗೆ ಸಿ.ಇ.ಓ ಭಂವರ್ ಸಿಂಗ್ ಮೀನಾ ಎಚ್ಚರಿಕೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಅಬ್ದುಲ್ ಅಜೀಮ್, ಸೇರಿದಂತೆ ಯೋಜನಾ ನಿರ್ದೇಶಕ ಚಳಗೇರಿ ಹಾಗೂ ಯೋಜನಾ ಅಂದಾಜು ಮತ್ತು ಮೌಲ್ಯಮಾಪನ ಅಧಿಕಾರಿ ಮಧುಮತಿ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು…

ವರದಿ. ಸುನಿಲ್ ಮೇತ್ರಿ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend