ಕಮಲಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್ ದುರಂತ ಅಪಘಾತದ ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ನೀಡಬೇಕು…!!!

Listen to this article

ಕಮಲಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್ ದುರಂತ
ಅಪಘಾತದ ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ನೀಡಬೇಕು

ಕಲಬುರಗಿ:ಕಮಲಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಬೆಳಿಗ್ಗೆ ಸಂಭವಿಸಿದ ಬಸ್ ಅಪಘಾತದಲ್ಲಿನ ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ನೀಡಬೇಕೆಂದು ಕಲಬುರಗಿಯ ಯುನೈಟೆಡ್ ಆಸ್ಪತ್ರೆಯ ವೈದ್ಯರಿಗೆ ಕೇಂದ್ರ ರಾಸಾಯನಿಕ, ರಸಗೊಬ್ಬರ ಹಾಗೂ ನೂತನ ಮತ್ತು ನವೀಕರಿಸಬಹುದಾದ ಇಂಧನ ಖಾತೆಯ ರಾಜ್ಯ ಸಚಿವ ಹಾಗೂ ಬೀದರ ಸಂಸದ ಭಗವಂತ ಖೂಬಾ ಅವರು ಸೂಚಿಸಿದರು.
ಇಂದು ಸಂಜೆ ಯುನೈಟೆಡ್ ಆಸ್ಪತ್ರೆಗೆ ಭೇಟಿ ನೀಡಿ ದಾಖಲಾಗಿರುವ 8 ಮಂದಿ ಗಾಯಾಳುಗಳನ್ನು ಭೇಟಿ ಮಾಡಿ ಆರೋಗ್ಯ ಸ್ಥಿತಿ ವಿಚಾರಿಸಿದ ಸಚಿವರು, ನಾವು ನಿಮ್ಮೊಂದಿಗಿದ್ದೇವೆ. ಆಸ್ಪತ್ರೆಯ ಗಾಯಾಳುಗಳ ವೆಚ್ಚವನ್ನು ಜಿಲ್ಲಾಡಳಿತ ಭರಿಸಲಿದೆ ಎಂದು ಹೇಳಿ ಅವರಿಗೆ ಧೈರ್ಯ ತುಂಬಿದರು.
ಬಸ್‍ನಲ್ಲಿ ಸಂಚರಿಸುತ್ತಿದ್ದ ಎಲ್ಲಾ 35 ಜನರು ತೆಲಂಗಾಣಕ್ಕೆ ಸೇರಿದವರರಾಗಿದ್ದು, ಗೋವಾದಿಂದ ಬಸ್ ಹೈದ್ರಾಬಾದ್‍ಗೆ ತೆರಳುತ್ತಿತ್ತು. ಶುಕ್ರವಾರ ಬೆಳಿಗ್ಗೆ 6.30ಕ್ಕೆ ಅಪಘಾತ ಸಂಭವಿಸಿದ್ದು, ಇದಕ್ಕೆ ಬಸ್ ಚಾಲಕನ ಬೇಜಬ್ದಾರಿಯೇ ಎಂದು ತಿಳಿದು ಬಂದಿದೆ. ಬಸ್ ಅತಿ ವೇಗವಾಗಿ ಚಾಲನೆ ಮಾಡುತ್ತಿದ್ದುದೇ ಇದಕ್ಕೆ ಕಾರಣ ಎಂದ ಸಚಿವರು, ಪೊಲೀಸರು ಚಾಲಕನ್ನು ಬಂಧಿಸಿದ್ದು, ಮುಂದಿನ ಕಾನೂನು ಕ್ರಮಕೈಗೊಂಡಿದ್ದಾರೆ ಎಂದು ಅವರು ಹೇಳಿದರು.


ಘಟನೆಯಲ್ಲಿ ಇಬ್ಬರು ಮಕ್ಕಳು ಸೇರಿ 7 ಮಂದಿ ಮೃತಪಟ್ಟಿದ್ದು, ಮೃತಪಟ್ಟವರ ಗುರುತುಪತ್ತೆ ಹಚ್ಚಿ ಸಂಬಂಧಿಕರಿಗೆ ಮೃತ ದೇಹಗಳನ್ನು ಒಪ್ಪಿಸಲು ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಗಳು ಕ್ರಮಕೈಗೊಂಡಿವೆ ಎಂದು ಅವರು ತಿಳಿಸಿದರು.
ಕರ್ನಾಟಕ ಮುಖ್ಯಮಂತ್ರಿಗಳು, ತೆಲಂಗಾಣ ಮುಖ್ಯಮಂತ್ರಿಗಳು ಹಾಗೂ ಕೇಂದ್ರದ ಸರ್ಕಾರದ ಸಂಬಂಧಪಟ್ಟ ಇಲಾಖೆಯೊಂದಿಗೆ ಮಾತನಾಡಿ ಸೂಕ್ತ ಪರಿಹಾರ ಕೊಡಿಸುವ ಭರವಸೆಯನ್ನು ಸಚಿವರು ಈ ಸಂದರ್ಭದಲ್ಲಿ ನೀಡಿದರು
ಈ ಸಂದರ್ಭದಲ್ಲಿ ದುರಂತದಲ್ಲಿ ಬದುಕುಳಿದ ಟಿ. ಸುಧೀರ್ ಕುಮಾರ್ ಎಂಬುವರೊಂದಿಗೆ ಸಚಿವರು ಮಾತನಾಡಿ, ಘಟನೆಯ ಬಗ್ಗೆ ಸಂಪೂರ್ಣ ಮಾಹಿತಿ ಪಡೆದರು.
ಯುನೈಟೆಡ್ ಆಸ್ಪತ್ರೆಯ ವೈದ್ಯ ಡಾ. ಬಷೀರ್ ಅವರು ಗಾಯಾಳುಗಳಿಗೆ ಕೈಗೊಂಡಿರುವ ಚಿಕಿತ್ಸಾ ಕ್ರಮಗಳ ಬಗ್ಗೆ ಸಚಿವರಿಗೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಬಿ.ಜಿ. ಪಾಟೀಲ್, ಕರ್ನಾಟಕ ನವೀಕರಿಸಬಹುದಾದದ ಇಂಧನ ಅಭಿವೃದ್ಧಿ ನಿಗಮದ ಅಧ್ಯಕ್ಷ ಚಂದ್ರಕಾಂತ್.ಬಿ. ಪಾಟೀಲ್ (ಚಂದು ಪಾಟೀಲ್), ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಇಶಾ ಪಂತ್, ಅಪರ ಜಿಲ್ಲಾಧಿಕಾರಿ ಭೀಮಾಶಂಕರ ತೆಗ್ಗೆಳ್ಳಿ ಮುಂತಾದವರು ಹಾಜರಿದ್ದರು.

ವರದಿ. ಬಸವರಾಜ್. ಹಿರೇಮಠ್

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend