ಕಾನಹೊಸಹಳ್ಳಿ ಪೊಲೀಸ್ ಠಾಣೆಯಲ್ಲಿ ಬಕ್ರೀದ್ ಹಬ್ಬದ ಪ್ರಯುಕ್ತ ಶಾಂತಿ ಸಭೆ ಜರುಗಿತ್ತು….!!!

Listen to this article

ಕಾನಹೊಸಹಳ್ಳಿ ಪೊಲೀಸ್ ಠಾಣೆಯಲ್ಲಿ ಬಕ್ರೀದ್ ಹಬ್ಬದ ಪ್ರಯುಕ್ತ ಶಾಂತಿ ಸಭೆ ಜರುಗಿತ್ತು.
ಕಾನಹೊಸಹಳ್ಳಿ :- ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಿ ಶಾಂತಿಯಿಂದ ಬಕ್ರೀದ್ ಹಬ್ಬವನ್ನು ಆಚರಿಸಿ ಎಂದು ಮಾನ್ಯ ಪಿಎಸ್ಐ ಎಚ್ ನಾಗರತ್ನಮ್ಮನವರು ನುಡಿದರು. ಅವರು ಬುಧವಾರ ಸಂಜೆ ಕೂಡ್ಲಿಗಿ ತಾಲೂಕು ಕಾನಹೊಸಹಳ್ಳಿ ಪೊಲೀಸ್ ಠಾಣೆಯ ಕಛೇರಿಯಲ್ಲಿ ಏರ್ಪಡಿಸಿದ್ದ ಬಕ್ರೀದ್ ಹಬ್ಬದ ಶಾಂತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು, ಪ್ರತಿಯೊಬ್ಬರು ಶಾಂತಿ-ಸುವ್ಯವಸ್ಥೆ ಕಾಪಾಡಬೇಕು, ಕುರುಬಾನಿ ಹೆಸರಿನಲ್ಲಿ ಪ್ರಾಣಿ ಬಲಿ ಕೊಡುವುದನ್ನು ನಿಷೇಧಿಸಲಾಗಿದೆ, ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಿ ಶಾಂತಿಯಿಂದ ಬಕ್ರೀದ್ ಹಬ್ಬವನ್ನು ಆಚರಿಸಿ. ಎರಡು ವರ್ಷಗಳಿಂದ ಕರೋನ ಭೀತಿಯಿಂದ ಸರಳವಾಗಿ ಬಕ್ರೀದ್ ಹಬ್ಬ ಆಚರಿಸಲಾಗು ತಿತ್ತು. ಈ ವರ್ಷ ಕರೋನವೈರಸ್ ಸ್ವರೂಪ ನಿಯಂತ್ರಣದಲ್ಲಿ ಇರುವುದರಿಂದ ಯಾರೂ ಕೂಡ ಮೈಮರೆಯದೆ ಜಾಗೃತಿ ವಹಿಸಿ ಹಬ್ಬವನ್ನು ಆಚರಿಸಿ. ಯಾರೂ ಕೂಡ ಶಾಂತಿಗೆ ಭಂಗ ತರುವಂತಹ ಕೆಲಸವನ್ನು ಮಾಡಬಾರದು. ಎಲ್ಲರೂ ಒಂದೇ ಎಂಬ ಮನೋಭಾವನೆಯಿಂದ ಶಾಂತಿಯಿಂದ ಬಕ್ರೀದ್ ಹಬ್ಬವನ್ನು ಆಚರಿಸಬೇಕು. ಒಂದು ವೇಳೆ ಶಾಂತಿಗೆ ಭಂಗ ತರುವಂತಹ ಕೆಲಸ ಮಾಡಿದ್ದಲ್ಲಿ ಅಂಥವರ ಮೇಲೆ ಕಾನೂನು ರೀತಿ ಕ್ರಮ ವಹಿಸಲಾಗುವುದು. ಸಾಮಾಜಿಕ ಜಾಲತಾಣದಲ್ಲಿ ಇನ್ನೊಬ್ಬರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತಹ ಪೋಸ್ಟ್ ಹಾಕಬಾರದು. ಅಂತವರು ಕಂಡುಬಂದರೆ ಕಾನೂನು ರೀತಿ ಕ್ರಮ ಜರುಗಿಸಲಾಗುವುದು ಎಂದು ಹೇಳಿ, ಎಲ್ಲರೂ ಶಾಂತಿ ಸೌಹಾರ್ದತೆಯಿಂದ ಒಗ್ಗಟ್ಟಿನಿಂದ ಬಕ್ರೀದ್ ಹಬ್ಬವನ್ನು ಆಚರಿಸಿರಿ ಎಂದು ಮಾನ್ಯ ಪಿಎಸ್ಐ ಎಚ್ ನಾಗರತ್ನಮ್ಮನವರು ಈ ಸಂದರ್ಭದಲ್ಲಿ ಮಾತನಾಡಿದರು.
ಈ ಶಾಂತಿ ಸಭೆಯಲ್ಲಿ ಠಾಣೆಯ ಎಎಸ್ಐ ಗಳಾದ ದುರುಗಪ್ಪ ಮತ್ತು ಗೋಪಾಲ್ ರವರು ಸೇರಿದಂತೆ ಕಾನಹೊಸಹಳ್ಳಿ ಪೊಲೀಸ್ ಠಾಣೆಗೆ ಸೇರಿದ ಎಲ್ಲಾ ಗ್ರಾಮದ ಮುಸ್ಲಿಂ ಬಂಧುಗಳು, ಸಾರ್ವಜನಿಕರು ಪೊಲೀಸ್ ಠಾಣೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು…

ವರದಿ.ಡಿ. ಎಂ. ಈಶ್ವರಪ್ಪ ಸಿದ್ದಾಪುರ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend