ರಾಷ್ಟ್ರೀಯ ಪೋಷಣ ಅಭಿಯಾನ ಕಾರ್ಯಕ್ರಮ…!!!

Listen to this article

ರಾಷ್ಟ್ರೀಯ ಪೋಷಣ ಅಭಿಯಾನ ಕಾರ್ಯಕ್ರಮ
ಕೂಡ್ಲಿಗಿ:- ಶಿಕ್ಷಕರು ವಿದ್ಯಾರ್ಥಿಗಳಿಗೆ ಸುಚಿತ್ರ ಆಹಾರ ಪೋಷಣೆ ಮತ್ತು ಆರೋಗ್ಯದ ಬಗ್ಗೆ ಅರಿವು ಮೂಡಿಸುವುದು ಅವರ ಪ್ರಮುಖ ಕರ್ತವ್ಯವಾಗಿದೆ ಎಂದು ಪಟ್ಟಣ ಪಂಚಾಯಿತಿ ಸದಸ್ಯರಾದ ಕಾವಲಿ ಶಿವಪ್ಪನಾಯಕ ನುಡಿದರು ಅವರು, ಸಾ ಉರ್ದು ಹಿ ಪ್ರಾ ಶಾಲೆಯಲ್ಲಿ ಏರ್ಪಡಿಸಿದ್ದ ಉರ್ದು ಕ್ಲಸ್ಟರ್ ಮಟ್ಟದ ರಾಷ್ಟ್ರೀಯ ಪೋಷಣ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದರು.


ರಾಷ್ಟ್ರೀಯ ಪೋಷಣೆ ಅಭಿಯಾನ ಕಾರ್ಯಕ್ರಮದಡಿಯಲ್ಲಿ ಶಿಕ್ಷಕರು ತಮ್ಮ ವಿದ್ಯಾರ್ಥಿಗಳಿಗೆ ಸುಚಿತ್ರಾ ಆಹಾರ ಪೋಷಣೆ ಮತ್ತು ಆರೋಗ್ಯದ ಬಗ್ಗೆ ಅರಿವು ಮತ್ತು ಜಾಗೃತಿ ಮೂಡಿಸುವಂತಹ ಕಾರ್ಯಕ್ರಮಗಳನ್ನು ನಡೆಸಿರುವುದು ಹಾಗೂ ಶಿಕ್ಷಕರ ಮಾರ್ಗದರ್ಶನದಂತೆ ವಿದ್ಯಾರ್ಥಿಗಳು ತಮ್ಮ ತಮ್ಮ ಮನೆಯಲ್ಲಿದ್ದ ವಿವಿಧ ತರಕಾರಿ, ದವಸ ಧಾನ್ಯ ಮತ್ತು ಪೋಷಣೆಗೆ ಅವಶ್ಯಕವಾದ ಆಹಾರ ಪದಾರ್ಥಗಳನ್ನು ತಂದು ವಿವಿಧ ವಿನ್ಯಾಸಗಳಲ್ಲಿ ಜೋಡಿಸಿ ಪ್ರದರ್ಶನ ಮಾಡಿ ಪೋಷಣೆಗೆ ಅವಶ್ಯಕವಾದ ವಸ್ತುಗಳನ್ನು ವೀಕ್ಷಿಸುವ ಅವಕಾಶವನ್ನು ಕೊಟ್ಟಿರುವುದ ರಿಂದ ಇಲ್ಲಿವರೆಗೆ ಕಂಡು ಕೇಳರಿಯದಂತಹ ಪೋಷಣ ವಸ್ತುಗಳನ್ನು ನೋಡುವ ಭಾಗ್ಯ ವಿದ್ಯಾರ್ಥಿಗಳಿಗೆ ಲಭಿಸುವಂತಾಗಿದೆ ಇದು ಒಂದು ಉತ್ತಮ ಅಭಿಯಾನ ಕಾರ್ಯಕ್ರಮ ಎಂಬುದು ಎಲ್ಲರಿಗೂ ಮನವರಿಕೆ ಮಾಡಿಕೊಟ್ಟಂತಾಗಿದೆ ಎಂದು ಈ ಸಂದರ್ಭದಲ್ಲಿ ಮಾತನಾಡಿದರು.
ಉರ್ದು ಶಾಲೆಯ ಮುಖ್ಯ ಶಿಕ್ಷಕರಾದ ಶೇಕ್ ಮದರ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಕ್ಷೇತ್ರ ಸಮನ್ವಯ ಅಧಿಕಾರಿ ಶ್ರೀ ಜಗದೀಶ್ ಈ ಕಾರ್ಯಕ್ರಮ ಕುರಿತು ಪ್ರಾಸ್ತಾವಿಕ ವಾಗಿ ಮಾತನಾಡಿದರು.
ಅಕ್ಷರ ದಾಸೋಹ ಅಧಿಕಾರಿ ಆಂಜನೇಯ, ಪಟ್ಟಣ ಪಂಚಾಯಿತಿ ಸದಸ್ಯರಾದ ಕಾವಲಿ ಶಿವಪ್ಪನಾಯಕ, ಮುಖಂಡ ರಾಘವೇಂದ್ರ, ಉರ್ದು ಬಿ ಆರ್ ಪಿ ಶ್ರೀಮತಿ ಕೆ.ಜಿ ನಾಭಿ ಉರ್ದು ಶಾಲೆಯ ಮುಖ್ಯ ಶಿಕ್ಷಕರು ಅಧಿಕಾರಿಗಳು ಶಿಕ್ಷಕರು ಗಿಡಕ್ಕೆ ನೀರು ಹಾಕುವುದರ ಮೂಲಕ ಉದ್ಘಾಟನೆಯನ್ನು ನೆರವೇರಿಸಿದರು.
ಈ ಕರಿಬಸಪ್ಪ ಶಿಕ್ಷಕರು ಕಾರ್ಯಕ್ರಮ ನಿರೂಪಣೆ ಮಾಡಿದರು.
ಬಿ ಆರ್ ಪಿ ಶ್ರೀಮತಿ ಕೆ.ಜೀನಾಭಿ ಸ್ವಾಗತಿಸಿದರು.
ಈ ಕಾರ್ಯಕ್ರಮದಲ್ಲಿ ಬಿ ಆರ್ ಪಿ ಗಳಾದ ರವೀಂದ್ರ, ಬಸವರಾಜಯ್ಯ, ರೇವಣಸಿದ್ದಪ್ಪ, ಉರ್ದು ಪ್ರೌಢಶಾಲೆಯ ಮುಖ್ಯಶಿಕ್ಷಕ ಸಿದ್ದಲಿಂಗಯ್ಯಸ್ವಾಮಿ, ನಾಗವೇಣಿ, ಸಿಆರ್ ಪಿ ಗಳಾದ ದೊಡ್ಡಪ್ಪ ಪ್ರಕಾಶ್ ಬೋರಯ್ಯ,ಶ್ರೀನಿವಾಸ, ಸಂದೀಪ ಶೇಖರಪ್ಪ, ಇಸಿಓ ಗಳಾದ ಮಂಜುನಾಥ,ನಾಗರಾಜ, ಶಿಕ್ಷಕರಾದ ಕೊಟ್ರೇಶ್. ಅಶಿಯ ಬೇಗಮ್,, ಶಿವನಾಯ್ಕ್, ಸುಮಂಗಳ, ಸೇರಿದಂತೆ ಉದ್ದು ಶಾಲೆಯ ಸಿಬ್ಬಂದಿ ವರ್ಗ ಮತ್ತು ಶಾಲೆಯ ಮಕ್ಕಳು ಪತ್ರಕರ್ತ ಮಿತ್ರರು ಉಪಸ್ಥಿತರಿದ್ದರು.
ಈ ಕಾರ್ಯಕ್ರಮದಲ್ಲಿ ಶಾಲೆಯ ಮಕ್ಕಳು ವಿವಿಧ ವೇಷಭೂಷಣಗಳನ್ನು ಧರಿಸಿ ಪ್ರದರ್ಶಿಸಿದ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರೇಕ್ಷಕರ ಕಣ್ಮನ ಸೆಳೆದವು….

ವರದಿ. ಡಿ. ಎಂ. ಈಶ್ವರಪ್ಪ ಸಿದ್ದಾಪುರ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend