ಗ್ರಾಮೀಣ ಭಾಗದ ಅಭಿವೃದ್ಧಿಗೆ ಕಾಂಗ್ರೆಸ್ ಗೆಲ್ಲಿಸಿ: ಮಾಜಿ ಸಚಿವ ಸಂತೋಷ್ ಲಾಡ್…!!!

Listen to this article

ಗ್ರಾಮೀಣ ಭಾಗದ ಅಭಿವೃದ್ಧಿಗೆ ಕಾಂಗ್ರೆಸ್ ಗೆಲ್ಲಿಸಿ: ಮಾಜಿ ಸಚಿವ ಸಂತೋಷ್ ಲಾಡ್

ವಿಜಯನಗರ ಜಿಲ್ಲೆ
ಕೂಡ್ಲಿಗಿತಾಲೂಕಿನ ಚಿಕ್ಕಜೋಗಿಹಳ್ಳಿ ಲಕ್ಷ್ಮಿ ವೆಂಕಟೇಶ್ವರ ಕಲ್ಯಾಣ ಮಂಟಪದ
ಆವರಣದಲ್ಲಿ ವಿಧಾನ ಪರಿಷತ್ ಚುನಾವಣೆ ಪ್ರಚಾರಕ್ಕಾಗಿ ಏರ್ಪಡಿಸಿದ್ದ ಕೆ.ಸಿ.ಕೊಂಡಯ್ಯ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದರು. ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ದೇಶವ್ಯಾಪ್ತಿ ನರೇಗಾ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನಕ್ಕೆ ತರುವ ಮೂಲಕ ಬಡವರ ಹಸಿವು ನೀಗಿಸುವ ಕಾರ್ಯ ಮಾಡಿತು. ಆದರೆ, ಈಗಿನ ಬಿಜೆಪಿ ಸರ್ಕಾರವು ನರೇಗಾ ಯೋಜನೆಯನ್ನು ತಡೆ ಹಿಡಿಯಲು ಹೊರಟಿತ್ತು. ಗ್ರಾಮ ಪಂಚಾಯಿತಿಗಳಿಗೆ ಸಂಪೂರ್ಣ ಅಧಿಕಾರ ನೀಡುವುದಕ್ಕೆ ಹಾಗೂ ಸ್ಥಳೀಯ ಆಡಳಿತ ಬಲವರ್ಧನೆಗಾಗಿ ಶ್ರಮಿಸಿದ ವಿಧಾನ ಪರಿಷತ್ ಚುನಾವಣೆಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕೆ.ಸಿ.ಕೊಂಡಯ್ಯ ಅವರನ್ನು ಗೆಲ್ಲಿಸುವಂತೆ ಮಾಜಿ ಸಚಿವ ಸಂತೋಷ್‌ಲಾಡ್ ತಿಳಿಸಿದರು.

ಸಂಡೂರು ಶಾಸಕರಾದ ಈ.ತುಕಾರಾಂ ಮಾತನಾಡಿ ಕಾಂಗ್ರೆಸ್ ಪಕ್ಷವು ತಾಯಿಯ ಸಮಾನ. ತಾಯಿಯ ಋಣ ತೀರಿಸುವುದು ನಮ್ಮೆಲ್ಲರ ಕರ್ತವ್ಯ, ದೇಶ ಮತ್ತು ರಾಜ್ಯಗಳಲ್ಲಿ ಕೋಟೆಗಳನ್ನು ಕಟ್ಟುವ ಹಾಗೆ, ಕಾಂಗ್ರೆಸ್ ಪಕ್ಷದ ಕೋಟೆಯನ್ನು ಕಟ್ಟುವ ಕೆಲಸ ಮಾಡಬೇಕು. ಈ ರೀತಿ ಕಾಂಗ್ರೆಸ್ ಕೋಟಿಯನ್ನು ಕಟ್ಟಿದಾಗ ಮಾತ್ರ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಾಧ್ಯ ಎಂದರು.

ಯುವ ಮುಖಂಡರಾದ ಗುಜ್ಜಲ್ ರಘು ಮಾತನಾಡಿ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಲಭಿಸುವ ಮತಗಳು ವಿಭಜನೆಯಾಗಿ ಪಕ್ಷದ ಅಭ್ಯರ್ಥಿ ಸೋಲಬೇಕಾಯಿತು. ಕ್ಷೇತ್ರದ ಮುಖಂಡರು ಸೇರಿ ಗ್ರಾಮೀಣ ಭಾಗದ ಕಾರ್ಯಕರ್ತರನ್ನು ಸಂಘಟನಾತ್ಮಕವಾಗಿ ಒಗ್ಗೂಡಿಸಿರುವುದರಿಂದ ವಿಧಾನ ಪರಿಷತ್ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗೆ ಹೆಚ್ಚಿನ ಮತಗಳು ದೊರೆಯಲಿವೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಪಂ ಸದಸ್ಯ ಮುಂಡ್ರಿಗಿ ನಾಗರಾಜ, ಕೆಪಿಸಿಸಿ ಮಹಿಳಾ ವಿಭಾಗದ ಪ್ರಧಾನ ಕಾರ್ಯದರ್ಶಿ ನಾಗಮಣಿ ಜಿಂಕಾಲ್, ಕೆಪಿಸಿಸಿ ಕಾರ್ಯದರ್ಶಿ ಹಿರೇಕುಂಬಳಗುಂಟೆ ಉಮೇಶ್, ಕೂಡ್ಲಿಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಗುರುಸಿದ್ದನಗೌಡ, ಹೊಸಹಳ್ಳಿ ಬ್ಲಾಕ್ ಅಧ್ಯಕ್ಷ ಕೆ.ಜಿ.ಕುಮಾರಗೌಡ, ಮುಖಂಡರಾದ ಬಿ.ಎಂ.ಪಾಟೀಲ್, ನರಸಿಂಹಗಿರಿ ವೆಂಕಟೇಶ್, ಅಸುಂಡಿ ಹೊನ್ನೂರಪ್ಪ, ಆಶಾಲತಾ ಸೋಮಪ್ಪ, ಕಾವಲ್ಲಿ ಶಿವಪ್ಪನಾಯಕ, ಬಿ.ಇ.ಜಗದೀಶ, ಕಾನಮಡುಗು ಶರಣಪ್ಪ, ಜೆ.ಎಂ.ಕೃಷ್ಣನಾಯ್ಕ್, ಗುಡೇಕೋಟೆ ರಾಘವೇಂದ್ರರಾವ್, ಗುರುಸಿದ್ದನಗೌಡ, ಜಿ. ಓಬ್ಬಣ್ಣ ಸೇರಿದಂತೆ ಕಾಂಗ್ರೆಸ್ ಎಲ್ಲಾ ಕಾರ್ಯಕರ್ತರು, ಉಪಸ್ಥಿತರಿದ್ದರು…

 

ವರದಿ. ವಿರೇಶ್, ಕೆ, ಎಸ್, ಕಾನಹೋಸಹಳ್ಳಿ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend