ಕುರುಗೋಡು: ಬೆಟ್ಟ ಹತ್ತುವ ಮೂಲಕ ಮತದಾನ ಜಾಗೃತಿ…!!!

Listen to this article

ಕುರುಗೋಡು: ಬೆಟ್ಟ ಹತ್ತುವ ಮೂಲಕ ಮತದಾನ ಜಾಗೃತಿ

ಬಳ್ಳಾರಿ:ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ ಮತ್ತು ಕುರುಗೋಡು ತಾಲ್ಲೂಕು ಆಡಳಿತ, ತಾಲ್ಲೂಕು ಸ್ವೀಪ್ ಸಮಿತಿ ಹಾಗೂ ಪುರಸಭೆ ಇವರ ಸಂಯುಕ್ತಾಶ್ರಯದಲ್ಲಿ ಲೋಕಸಭಾ ಸಾರ್ವತ್ರಿಕ ಚುನಾವಣೆ ಅಂಗವಾಗಿ ಕುರುಗೋಡು ಪಟ್ಟಣದ ಐತಿಹಾಸಿಕ ಬೆಟ್ಟ ಹತ್ತುವ ಮೂಲಕ ಮತದಾನ ಜಾಗೃತಿ ಕಾರ್ಯಕ್ರಮ ಬುಧವಾರ ಹಮ್ಮಿಕೊಳ್ಳಲಾಗಿತ್ತು.


ತಾಲ್ಲೂಕು ಸ್ವೀಪ್ ನೋಡೆಲ್ ಅಧಿಕಾರಿ ಆಗಿರುವ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ನಿರ್ಮಲಾ.ಕೆ.ವಿ ಅವರು ಮಾತನಾಡಿ, ಮೇ 7 ರಂದು ನಡೆಯುವ ಲೋಕಸಭೆ ಚುನಾವಣೆಗೆ ಯಾವುದೇ ಆಸೆ-ಆಮೀಷಗಳಿಗೆ ಒಳಗಾಗದೇ ಎಲ್ಲರೂ ತಪ್ಪದೇ ಮತದಾನ ಮಾಡಬೇಕು ಎಂದು ಕರೆ ನೀಡಿದರು.
ಮತದಾನವನ್ನು ನಮ್ಮ ಸಂವಿಧಾನ ನಮಗೆ ನೀಡಿರುವ ಅತ್ಯಮೂಲ್ಯ ಹಕ್ಕು. ತಪ್ಪದೇ ಮತದಾನದ ಕರ್ತವ್ಯದಲ್ಲಿ ಭಾಗಿಯಾಗಿ ನಮ್ಮ ಹಕ್ಕನ್ನು ಚಲಾಯಿಸೋಣ. ಇತರರನ್ನು ತಪ್ಪದೇ ಮತದಾನ ಮಾಡುವಂತೆ ತಿಳಿಸೋಣ ಎಂದರು.
ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯತ್, ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಯವರು ಭಾಗವಹಿಸಿದ್ದರು….

ವರದಿ.ಉಮೇಶ್, ಕೆ, ಸಿರಿಗುಪ್ಪ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend