ತೋಟಗಾರಿಕೆ ವಿವಿಧ ಬೆಳೆಗಳಿಗೆ ಸಹಾಯ ಧನ… !!!

Listen to this article

ತೋಟಗಾರಿಕೆ ವಿವಿಧ ಬೆಳೆಗಳಿಗೆ ಸಹಾಯ ಧನ !!!!! ಕೂಡ್ಲಿಗಿ: ಕೂಡ್ಲಿಗಿ ಹಾಗೂ ಕೊಟ್ಟೂರು ತಾಲೂಕಿನಲ್ಲಿ 2023-24 ನೇ ಸಾಲಿನಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ವಿವಿಧ ತೋಟಗಾರಿಕಾ ಪ್ರದೇಶ ವಿಸ್ತರಣೆ ಕೈಗೊಳ್ಳಲು ಅವಕಾಶ ಇದ್ದು , ಆಸಕ್ತ ರೈತರು ಅಗತ್ಯ ದಾಖಲೆಗಳೊಂದಿಗೆ ತೋಟಗಾರಿಕೆ ಇಲಾಖೆಯ ಅಧಿಕಾರಿ ವಿಜಯ್ ನಿಚ್ಚಾಪುರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಉದ್ಯೋಗ ಖಾತ್ರಿ ಯೋಜನೆಯಡಿ ಸಹಾಯಧನ ನೀಡಲು ನೀರಾವರಿ ಸೌಲಭ್ಯವುಳ್ಳ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಇತರೆ ಸಣ್ಣ,ಅತಿ ಸಣ್ಣ ರೈತರಿಗೆ ವಿವಿಧ ಬಗೆಯ ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ಅರ್ಜಿ ಆಹ್ವಾನಿಸಲಾಗಿದೆ, ಇದರೊಂದಿಗೆ 2023-24 ನೇ ಸಾಲಿನಲ್ಲಿ ವಿವಿಧ ಬೆಳೆಗಳಿಗೆ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಲ್ಲಿ ವಿಮಾ ಮೊತ್ತ ಪಾವತಿ ಮಾಡಲು ಜುಲೈ 31 ಕೊನೆ ದಿನವಾಗಿರುತ್ತದೆ. ಅಗತ್ಯ ದಾಖಲೆಗಳೊಂದಿಗೆ ಸಮೀಪದ ಸಾರ್ವಜನಿಕ ಸೇವಾ ಕೇಂದ್ರಗಳು ಅಥವಾ ಗ್ರಾಮ ಓನ್ ಸೇವಾ ಕೇಂದ್ರಗಳಲ್ಲಿ ನೋಂದಣಿ ಮಾಡಿಕೊಳ್ಳಬಹುದಾಗಿತ್ತು ಹೆಚ್ಚಿನ ಮಾಹಿತಿಗಾಗಿ ಸಹಾಯಕ ತೋಟಗಾರಿಕೆ ನಿರ್ದೇಶಕರು 08391-299929/9900775894) ಹಾಗೂ ತೋಟಗಾರಿಕೆ ಸಹಾಯಕ ಅಧಿಕಾರಿಗಳು ಗುಡೇಕೋಟೆ -9632824658 . ಕಾನಹೊಸಹಳ್ಳಿ 8197954070 , ಕೂಡ್ಲಿಗಿ -9591617005 ಹಾಗೂ ಕೊಟ್ಟೂರು -9483923322 ಇವರನ್ನು ಸಂಪರ್ಕಿಸಬಹುದು…

ವರದಿ. ಬಸಪ್ಪ ಬಣವಿಕಲ್ಲು

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend