ಕೂಡ್ಲಿಗಿ:ಎ29ರಂದು CM DCM ಕ್ಷೇತ್ರಕ್ಕೆ-MLA Dr.NTS ಹೇಳಿಕೆ…!!!

Listen to this article

ಕೂಡ್ಲಿಗಿ:ಎ29ರಂದು CM DCM ಕ್ಷೇತ್ರಕ್ಕೆ-MLA Dr.NTS ಹೇಳಿಕೆ- ವಿಜಯನಗರ ಜಿಲ್ಲೆ ಕೂಡ್ಲಿಗಿ: ಎ29ರಂದು ಪಟ್ಟಣಕ್ಕೆ ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯ, ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರವರು ಆಗಮಿಸಲಿದ್ದಾರೆ. ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಪಕ್ಷದ ಪರ ಪ್ರಚಾರ, ಹಾಗೂ ಅಖಂಡ ಬಳ್ಳಾರಿ ಲೋಕಸಭಾ ಕ್ಷೇತ್ರದ ಕಾಂಗ್ರೇಸ್ ಅಭ್ಯಾರ್ಥಿ ಈ ತುಕಾರಾಂ ರವರ ಪರ ಮತಯಾಚನೆ ಮಾಡಲು. ಮುಖ್ಯ ಮಂತ್ರಿಗಳಾದ ಸಿದ್ಧರಾಮಯ್ಯ, ಹಾಗೂ ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರವರು ಆಗಮಿಸಲಿದ್ದಾರೆಂದು. ಕೂಡ್ಲಿಗಿ ಶಾಸಕರಾದ Dr.N.T.ಶ್ರೀನಿವಾಸ್ ರವರು, ಪಕ್ಷದ ಕಚೇರಿಯಲ್ಲಿ ಜರುಗಿದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಅಂದು ಜರುಗುವ ಕಾಂಗ್ರೇಸ್ ಪಕ್ಷದ ಕಾರ್ಯಕರ್ತರ ಬೃಹ್ ಸಮಾವೇಶ, ಹಾಗೂ ಮತ ಯಾಚನೆ ಕಾರ್ಯಕ್ರಮದಲ್ಲಿ CM ಮತ್ತು DCM ರವರು. ಉಸ್ಥುವಾರಿ ಸಚಿವರಾದ ಬಿ.ಜೆಡ್.ಜಮೀರ್ ಅಹಮ್ಮದ್ ಖಾನ್, ಕಾರ್ಮಿಕ ಸಚಿವ ಸಂತೋಷ್ ಲಾಡ್ ರವರು ಸೇರಿದಂತೆ, ವಿವಿದ ಇಲಾಖೆಗಳ ಸಚಿವರು ಮತ್ತು ಕಾಂಗ್ರೇಸ್ ಪಕ್ಷದ ರಾಜ್ಯ ಮಟ್ಟದ ಪದಾಧಿಕಾರಿಗಳು, ಪಕ್ಷದ ಹಿರಿಯ ಮುಖಂಡರು ಪಟ್ಟಣಕ್ಕೆ ಆಗಮಿಸಲಿದ್ದಾರೆ ಎಂದು ಶಾಸಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಾರ್ಯಕ್ರಮಕ್ಕೆ ಅಖಂಡ ಬಳ್ಳಾರಿ ಲೋಕ ಸಭಾ ಕ್ಷೇತ್ರದ ಕಾಂಗ್ರೇಸ್ ಪಕ್ಷದ ಸಮಸ್ತ ಅಭಿಮಾನಿಗಳಿಗೆ, CM ಹಾಗೂ DCM ರವರ ಸಮಸ್ತ ಅಭಿಮಾನಿಗಳಿಗೆ. ಅಖಂಡ ಜಿಲ್ಲೆಯ ಪಕ್ಷದ ಸರ್ವ ಪದಾಧಿಕಾರಿಗಳಿಗೆ, ಮತ್ತು ಪಕ್ಷದ ಎಲ್ಲಾ ಕಾರ್ಯಕರ್ತರಿಗೆ ಈ ಮೂಲಕ ಮುಕ್ತ ಆಹ್ವಾನ ನೀಡುತ್ತಿರುವುದಾಗಿ ಅವರು ತಿಳಿಸಿದ್ದಾರೆ. ಕೂಡ್ಲಿಗಿ ಪಟ್ಟಣ ಸೇರಿದಂತೆ ಕ್ಷೇತ್ರದ ಕಾಂಗ್ರೇಸ್ ಪಕ್ಷದ ಸಮಸ್ತ ಕಾರ್ಯಕರ್ತರು , ಎ29ರ ಭಹಿರಂಗ ಸಭೆಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮ ಯಶಸ್ವೀಗೊಳಿಸಬೇಕೆಂದು ಅವರು ಈ ಮೂಲಕ ಕೋರಿದ್ದಾರೆ. *ಮೂಲ ಭೂತ ಸೌಕರ್ಯಗಳಿಗೆ ಪ್ರಥಮ ಆಧ್ಯತೆ*-ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದ ಕೆಲ ಪತ್ರಕರ್ತರು ಕೇಳಿದ ಹಲವು ಪ್ರೆಶ್ನೆಗಳಿಗೆ, ಶಾಸಕರಾದ ಡಾ”ಎನ್.ಟಿ.ಶ್ರೀನಿವಾಸ್ ಉತ್ತರಿಸಿದರು. ತಾವು ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗಾಗಿ, ಸರ್ಕಾರದಿಂದ ಸಾಕಷ್ಟು ಅನುದಾನ ಮಂಜೂರು ಮಾಡಿಸುತ್ತಿರುವುದಾಗಿ ತಿಳಿಸಿದರು. ಕ್ಷೇತ್ರದಲ್ಲಿ ಮೂಲಭೂತ ಸೌಕರ್ಯಗಳನ್ನು ಸಮರ್ಪಕವಾಗಿ ಸಕಾಲಕ್ಕೆ ಒದಗಿಸುವ ನಿಟ್ಟಿನಲ್ಲಿ ಪ್ರಥಮ ಆಧ್ಯತೆ ನೀಡಿದ್ದು, ಅದಕ್ಕ‍ಾಗಿ ಪ್ರಾಮಾಣಿಕ ಪ್ರಯತ್ನ ಮಾಡುತ್ತಿರುವುದಾಗಿ ಅವರು ಮನವರಿಕೆ ಮಾಡಿಕೊಟ್ಟರು….

ವರದಿ.ವಿ.ಜಿ.ವೃಷಭೇಂದ್ರ ಕೂಡ್ಲಿಗಿ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend