ಮೊಳಕಾಲ್ಮೂರು: ತಾ.ಪಂ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕೋವಿಡ್ 19 ಪ್ರಗತಿ ಪರಿಶೀಲನಾ ಸಭೆ.!

Listen to this article

ಚಿತ್ರದುರ್ಗ: ಮೊಳಕಾಲ್ಮುರು ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕೋವಿಡ್ 19 ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ಕೊರೋನಾ ಸೋಂಕು ಹಳ್ಳಿಗಳಿಗೆ ಹರಡದಂತೆ
ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸುವಂತೆ ಸಂಸದ ಎ.ನಾರಾಯಣಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದರು. ರಾಜ್ಯದಲ್ಲಿ ಕೊರೋನಾ ಸೋಂಕು ದಿನೇ ದಿನೇಹೆಚ್ಚಾಗುತ್ತಿದೆ. ಜನರುಸಂಕಷ್ಟದಲ್ಲಿದ್ದಾರೆ. ಅಧಿಕಾರಿಗಳು ಈ ಕುರಿತು ತುಂಬಾ ಎಚ್ಚರಿಕೆ ವಹಿಸಬೇಕು. ಹಳ್ಳಿಗಳಿಗೆ ಕೊರೋನಾ ವೈರಸ್ ಹರಡದಂತೆ ತಡೆಗಟ್ಟಬೇಕು. ಇದಕ್ಕಾಗಿ ಆರೋಗ್ಯ ಇಲಾಖೆ ಅಧಿಕಾರಿಗಳು ಕ್ರಿಯಾ ಯೋಜನೆ ರೂಪಿಸಬೇಕು. ಕೊರೋನಾ ನಿಯಂತ್ರಣಕ್ಕೆ ಕೈಗೊಳ್ಳಬಹುದಾದ ಕ್ರಮಗಳ ಕುರಿತು ಮುನ್ನೆಚ್ಚರಿಕೆ ವಹಿಸಬೇಕು. ಇದಕ್ಕಾಗಿ ಸಮಿತಿಯೊಂದನ್ನು ರಚಿಸಿ ಆ ಮೂಲಕ ಕೊರೋನಾ ನಿಯಂತ್ರಣಕ್ಕೆ ಮಾರ್ಗಸೂಚಿಗಳನ್ನು ಸಿದ್ಧಪಡಿಸುವಲ್ಲಿ ನಿಷ್ಠೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂದರು. ಬೆಂಗಳೂರು ಸೇರಿ ವಿವಿಧೆಡೆಯಿಂದ ಬರುವ ಜನರಿಗೆ ಕಡ್ಡಾಯಾಗಿ ಕೋವಿಡ್-19 ಪರೀಕ್ಷೆ ನಡೆಸಿ ಅವರನ್ನು ಹೋಂ ಕಾರಂಟೈನ್‌ಗೆ ಒಳಪಡಿಸಿ ನಿತ್ಯವೂ ಅವರನ್ನು ನಿಗಾವಹಿಸಿ ಕೊರೋನಾ ಲಕ್ಷಣಗಳ ಕುರಿತು ಮಾಹಿತಿ ಪಡೆದುಕೊಳ್ಳಬೇಕು. ನಿತ್ಯ ಎಷ್ಟು ಜನರಿಗೆ ಕೋವಿಡ್ 19 ಪರೀಕ್ಷೆ ಮಾಡಲಾಗುತ್ತಿದೆ. ಹೋಬಳಿ ವ್ಯಾಪ್ತಿಯಲ್ಲಿ ಎಷ್ಟು ಲಸಿಕೆ ನೀಡಲಾಗಿದೆ ಎನ್ನುವ ಕುರಿತು ತಹಸೀಲ್ದಾರ್ ಟಿ.ಸುರೇಶಕುಮಾರ್ ಅವರನ್ನು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಅವರು, ತಾಲೂಕಿನ ಪ್ರತಿ ಹಳ್ಳಿಯಲ್ಲಿಯೂ ಕೊರೋನಾ ಲಕ್ಷಣಗಳು ಕಂಡುಬಂದರೆ ಕಡ್ಡಾಯವಾಗಿ ಕೊರೋನಾ ಪರೀಕ್ಷೆ ಮಾಡಲಾಗುತ್ತಿದೆ. ಹಾಗೆಯೇ ಲಸಿಕೆ ಪಡೆದುಕೊಳ್ಳಲು ಸಾರ್ವಜನಿಕರಲ್ಲಿ ಅರಿವನ್ನು ಮೂಡಿಸಲಾಗಿದೆ ಎಂದರು. ಗ್ರಾಮೀಣ ಭಾಗದಲ್ಲಿ ಸೋಂಕಿತ ಪ್ರಕರಣಗಳು ದೃಢಪಟ್ಟರೆ ತೀವ್ರ ನಿಗಾವಹಿಸಿ ಸೋಂಕಿತ ಯಾವ ಹಂತದಲ್ಲಿದ್ದಾರೆ ಎಂಬುದನ್ನು ದೃಢ ಪಡಿಸಿಕೊಳ್ಳಬೇಕು. ಇದರೊಟ್ಟಿಗೆ ಗ್ರಾ.ಪಂ ಅಧ್ಯಕ್ಷ ಮತ್ತು ಸದಸ್ಯರ ಸಹಕಾರದೊಂದಿಗೆ ಕೊರೋನಾ ಜಾಗೃತಿ ಮೂಡಿಸಿಇಡೀ ಗ್ರಾಮಕ್ಕೆ ಸ್ಯಾನಿಟೈಸೇಷನ್ ಮಾಡಿ ಸೋಂಕಿತ ವ್ಯಕ್ತಿಯ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರನ್ನು ಪರೀಕ್ಷೆಗೊಳಪಡಿಸಬೇಕು. ಕುಟುಂಬಸ್ಥರಲ್ಲಿ ನೆಗಟಿವ್ ವರದಿ ಬಂದರೂ ಅವರನ್ನು ಕ್ಯಾರೆಂಟೈನ್ ಮಾಡಬೇಕೆಂದು ತಾಕೀತು ಮಾಡಿದರು. ಹಿಂದುಳಿದ ಪ್ರದೇಶವಾಗಿರುವಗಡಿ ತಾಲೂಕಿನಲ್ಲಿ ಪ್ರತಿ ಹಳ್ಳಿಯ ವ್ಯಕ್ತಿಗೂ ಕೋವಿಡ್-19 ಲಸಿಕೆ ನೀಡಬೇಕು. ಪ್ರತಿ ದಿನ ಎಚ್ಚರಿಕೆ ವಹಿಸಿ ಕೊರೋನಾ ನಿಯಂತ್ರಣಕ್ಕೆ ಎಲ್ಲ ಇಲಾಖೆ ಅಧಿಕಾರಿಗಳು ಕೈ ಜೋಡಿಸಬೇಕು. ಕೋವಿಡ್ ಕೇರ್‌ಸೆಂಟರ್‌ಗಳಲ್ಲಿ ಕೊರೋನಾಸೋಂಕಿತರಿಗೆ ಅಗತ್ಯ ಸೌಕರ್ಯಗಳನ್ನು ಒದಗಿಸಬೇಕು. ಚಿಕಿತ್ಸೆಗೆ ಅಗತ್ಯವಿರುವಂತ ಬೆಡ್‌ಗಳು, ಔಷಧಗಳು ಮತ್ತು ಆಕ್ಸಿಜನ್ ಕೊರತೆಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದರು. ಈ ಸಂದರ್ಭದಲ್ಲಿ ತಹಸೀಲ್ದಾರ್ ಟಿ. ಸುರೇಶಕುಮಾರ್, ಪ್ರಭಾರ ಎಸಿ ಮಾರುತಿ ಬ್ಯಾಕೋಡ ಸೇರಿ ತಾಲೂಕು ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ವರದಿ. ಮಂಜುನಾಥ್, ಎಚ್

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend