ಹೂಡೇಂ: ಲಾಕ್‌ಡೌನ್ ಸಮಯದಲ್ಲಿ ಕೂಲಿಕಾರರಿಗೆ ಆಸರೆಯಾದ ಉದ್ಯೋಗ ಖಾತ್ರಿ ಯೋಜನೆ.!!

Listen to this article

ವಿಜಯನಗರ: ಕೂಡ್ಲಿಗಿ ತಾಲೂಕಿನ ಹೂಡೇಂ ಗ್ರಾಮ ಪಂಚಾಯಿತಿಯಲ್ಲಿ ಇಂದು (ಜೂ,17) ಲಾಕ್‌ಡೌನ್‌ನಿಂದ ಕೆಲಸವಿಲ್ಲದೇ ಪರದಾಡುತ್ತಿದ್ದ ಕೂಲಿ ಕಾರ್ಮಿಕರಿಗೆ ಉದ್ಯೋಗ ಖಾತ್ರಿ ಯೋಜನೆ ಆಸರೆಯಾಗಿದ್ದು ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಹೂಡೇಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಾಯಕನಹಳ್ಳಿ, ಹೊಸೂರು, ಕರ್ನಾರಹಟ್ಟಿ, ಒಟ್ಟು 6 ಹಳ್ಳಿ ಸೇರಿದಂತೆ ಗ್ರಾಮದ ರೈತರ ಮುಖದಲ್ಲಿ ಮಂದಹಾಸ ಮೂಡಿಸಿದೆ. ಲಾಕ್‌ಡೌನ್‌ನಿಂದ ಕೆಲಸವಿಲ್ಲದೇ ಪರದಾಡುತ್ತಿದ್ದ ಹೂಡೇಂ ಗ್ರಾಮ ಪಂಚಾಯಿತಿಯ ಕೂಲಿ ಕಾರ್ಮಿಕರು ಹಾಗೂ ರೈತರು ಚಿಂತೆಯಲ್ಲಿದ್ದರು. ಆದರೆ, ಉದ್ಯೋಗ ಖಾತ್ರಿ ಯೋಜನೆಯಿಂದ ಕೈ ತುಂಬಾ ಕೆಲಸ ಸಿಕ್ಕಿದ್ದು ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯ ಜಾರಿಯಿಂದ ಸಂತಸ ಗೊಂಡಿದ್ದೇವೆ ಎಂದು ಕೂಲಿ ಕಾರ್ಮಿಕರು ತಿಳಿಸಿದರು. 575 ಜಾಬ್ ಕಾರ್ಡುಗಳು ಕೆಲಸ ಮಾಡುತ್ತಾ ಇದ್ದಾರೆ. ಒಂದು ಗುಂಡಿಗೆ 10 ಜನ ನಿಮಿತ, ಎಲ್ಲರೂ ಕಡ್ಡಾಯವಾಗಿ ಮಾಸ್ಕನ್ನು ಧರಿಸಿ ಸಾಮಾಜಿಕ ಅಂತರ ಕಾಪಾಡಿಕೊಂಡು ಕೆಲಸವನ್ನು ನಿವಾರಿಸಬೇಕೆಂದು ತಿಳಿಸಿದರು. ಈ ಸಂದರ್ಭದಲ್ಲಿ ಗ್ರಾ.ಪಂ ಕಾರ್ಯದರ್ಶಿ ಪಿ.ಜಿ ಚಂದ್ರಪ್ಪ, ಸದಸ್ಯರಾದ ಸುಂದರಮ್ಮ-ಮಲ್ಲಿಕಾರ್ಜುನ್, ನಾಗಮ್ಮ-ಗದ್ದಿಸ್ವಾಮಿ, ಗ್ರಾ.ಪಂ ಸಿಬ್ಬಂದಿ ವರ್ಗದವರು, ಸರ್ವಸದಸ್ಯರು, ಮೇಟಿ ನಾಗರಾಜ್, ಗೋವಿಂದಪ್ಪ, ಕೂಲಿ ಕಾರ್ಮಿಕರು ಉಪಸ್ಥಿತರು..

ವರದಿ. ಮಂಜುನಾಥ್, ಎಚ್

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend