ವಿದ್ಯಾರ್ಥಿಗಳಿಂದ ಅರ್ಥಪೂರ್ಣ ಗುರುವಂದನಾ ಕಾರ್ಯಕ್ರಮ…!!!

Listen to this article

ವಿದ್ಯಾರ್ಥಿಗಳಿಂದ ಅರ್ಥಪೂರ್ಣ ಗುರುವಂದನಾ ಕಾರ್ಯಕ್ರಮ

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ನಡುವಲ ಹಟ್ಟಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಗುರುವಂದನಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಶಿಕ್ಷಕರನ್ನು ಕಡೆಗಣಿಸುವ ಇತ್ತೀಚಿನ ದಿನಗಳಲ್ಲಿ ತಮ್ಮ ವಿದ್ಯಾಭ್ಯಾಸದ ಅವಧಿಯಲ್ಲಿ ಮಾರ್ಗದರ್ಶಕರಾಗಿದ್ದ ಗುರುಗಳನ್ನು ಹೊರ ಊರುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಆ ಶಿಕ್ಷಕರನ್ನು ಕರೆಸಿ ಅರ್ಥಪೂರ್ಣ ಗುರುವಂದನೆ ಸಲ್ಲಿಸಿದ ವಿದ್ಯಾರ್ಥಿ ದರ್ಶನ್ ತಂದೆ ಓಬಣ್ಣ ಇವರು ತನ್ನ ಮಗನಿಗೆ ವಿದ್ಯಾಭ್ಯಾಸ ಕಲಿಸಿದ ಶಿಕ್ಷಕರಿಗೆ ಗುರುವಂದನಾ ಕಾರ್ಯಕ್ರಮವನ್ನು ರೈತರಾದ ಓಬಣ್ಣ ಅವರು ನನ್ನ ಮಗನಿಗೆ ಹಾಗೂ ನಮ್ಮ ಊರಿನ ಮಕ್ಕಳಿಗೆ ವಿದ್ಯಾಭ್ಯಾಸ ಕಲಿಸಿದ ಗುರುಗಳನ್ನು ಗೌರವಿಸಿ ಸನ್ಮಾನಿಸಿದ ರೈತರಾದ ಓಬಣ್ಣ ನನ್ನವರಿಗೆ ಶಿಕ್ಷಕರು ಅಭಿನಂದಿಸಿದರು. ಇಂತಹ ಕುಗ್ರಾಮವಾದ ನಡುವಲಹಟ್ಟಿ ಗ್ರಾಮದಲ್ಲಿ ಇಂತಹದೊಂದು ಕಾರ್ಯಕ್ರಮವನ್ನು ಇದೆ ಮೊದಲ ಬಾರಿಗೆ ಎಂದರು, ಶಾಲಾ ಮಕ್ಕಳಿಂದ ಪ್ರಾರ್ಥನೆಯೊಂದಿಗೆ ಸಭೆಯು ಎಸ್ಡಿಎಂಸಿ ಅಧ್ಯಕ್ಷರಾದ ಕ್ಯಾತಯ್ಯ ಅವರ ಅಧ್ಯಕ್ಷತೆಯಲ್ಲಿ ಪ್ರಾರಂಭಿಸಲಾಯಿತು. ವಿದ್ಯಾರ್ಥಿಗಳಿಂದ ಸಭೆಗೆ ಬಂದ ಅತಿಥಿಗಳನ್ನು ಮತ್ತು ಸದಸ್ಯರನ್ನು ಪ್ರೀತಿಪೂರ್ವಕವಾಗಿ ಶಾಲೆಯ ಮುಖ್ಯಗುರುಗಳಾದ ರವಿಕುಮಾರ್ ಕೆಜಿ ಸ್ವಾಗತಿಸಿದರು. ಇದೇ ವೇಳೆ ಸ.ಹಿ.ಪ್ರಾ ಶಾಲೆಯ ಮುಖ್ಯಗುರುಗಳಾದ ಪಾಲಯ್ಯ ಅವರು ಮಾತನಾಡಿ ವಿಜ್ಞಾನ ತಂತ್ರಜ್ಞಾನ ಮುಂದುವರಿದ ಈ ಕಾಲದಲ್ಲಿ ವಿಶ್ವವೇ ಒಂದು ಗ್ರಾಮವಂತಾಗಿದೆ. ಉದ್ಯೋಗ ಇನ್ನಿತರೆ ಕಾರಣಗಳಿಗಾಗಿ ಹುಟ್ಟಿದ ಊರು ಬಿಟ್ಟು ಬೇರೆಲ್ಲೋ ನೆಲೆಸಿದವರು ತಮ್ಮ ದಿನನಿತ್ಯದ ಒತ್ತಡ ಜೀವನದಲ್ಲಿ ಹುಟ್ಟಿದ ಊರು, ಹೆತ್ತವರು, ಅಕ್ಷರ ಕಲಿಸಿದ ಗುರುಗಳನ್ನು ನೆನೆಸಿಕೊಳ್ಳಲಾಗದ ಸ್ಥಿತಿಗೆ ತಲುಪಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಒಬ್ಬ ವಿದ್ಯಾರ್ಥಿ ಒಟ್ಟುಗೂಡಿಸುವ, ತಮ್ಮ ಹಳೆಯ ದಿನಗಳನ್ನು ಮೆಲಕು ಹಾಕುವಂತಹ ಸುಂದರ ಕ್ಷಣಗಳಿಗೆ ಸಾಕ್ಷಿಯಾದ ಇಂತಹ ಕಾರ್ಯಕ್ರಮ ಇದೀಗ ಅಗತ್ಯವಿದೆ. ಆ ಮೂಲಕ ಶಾಲೆ ಹಾಗೂ ಗ್ರಾಮದ ಅಭಿವೃದ್ಧಿಯನ್ನು ಸಾಧಿಸಲು ಸಹಕಾರಿಯಾಗುತ್ತದೆ ಎಂದು ಅಭಿಪ್ರಾಯಪಟ್ಟರು. ಇನ್ನು ಇದೇ ವೇಳೆ ಶಿಕ್ಷಕರಾದ ಈಶ್ವಣ್ಣ ಅವರು ಮಾತನಾಡಿ ಮಕ್ಕಳಿಗಾಗಿ ಆಸ್ತಿ ಮಾಡಬೇಡಿ ಮಕ್ಕಳನ್ನೇ ಆಸ್ತಿಯಾಗಿಸಿ, ಜೀವನದಲ್ಲಿ ಗುರಿ, ಚಲ, ಗುರುವಿನ ಆಶೀರ್ವಾದ ಇದ್ದರೆ ಮಾತ್ರವೇ ವಿದ್ಯೆ ಕಲಿತು ಸಮಾಜದಲ್ಲಿ ಉನ್ನತ ಸ್ಥಾನ ಗಳಿಸಲು ಸಾಧ್ಯ, ನಾವು ಗಳಿಸಿದ ಆಸ್ತಿ, ಅಂತಸ್ತು, ಸಂಪತ್ತು ಯಾವುದೂ ಕೊನೆಯವರೆಗೂ ಉಳಿಯೊಲ್ಲ. ಆದರೆ ಕಲಿತ ವಿದ್ಯೆ ಮಾತ್ರ ಕೊನೆಯವರೆಗೂ ಜತೆಗಿರುತ್ತದೆ ಎಂದು ಅಭಿಪ್ರಾಯಪಟ್ಟರು. ನಂತರ ವಿದ್ಯಾರ್ಥಿ ದರ್ಶನ್ ಎಸ್ಸೆಸ್ಸೆಲ್ಸಿಯಲ್ಲಿ ಹೆಚ್ಚು ಅಂಕ ಗಳಿಸಿ ಗ್ರಾಮಕ್ಕೆ ಹಾಗೂ ಶಾಲೆಗೆ ಕೀರ್ತಿ ತಂದಿದ್ದಾರೆ ಎಂದು ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಶಿಕ್ಷಕರಾದ ನಾಗರಾಜ್, ತಿಪ್ಪೇರುದ್ರಪ್ಪ, ನಾಗರಾಜ್, ರಾಜಗೋಪಾಲ, ಉಮೇಶ್, ಬಷೀರ್ ಅಹಮದ್, ವಾಣಿ, ನೇತ್ರಾವತಿ, ಶಾಂತಕುಮಾರಿ, ಕರಿಬಸಮ್ಮ ಹಾಗೂ ಗ್ರಾ.ಪಂ ಅಧ್ಯಕ್ಷರಾದ ಕರಿಬಸಮ್ಮ ದುರುಗಪ್ಪ, ಮಾಜಿ ತಾ.ಪಂ ಸದಸ್ಯರಾದ ಪೇಪರ್ ಸುರಯ್ಯ, ಸದಸ್ಯರಾದ ಚಿತ್ತಯ್ಯ, ವಕೀಲರಾದ ಶಿವಣ್ಣ, ಮಾಜಿ ಗ್ರಾ.ಪಂ ಸದಸ್ಯ ಸಣ್ಣ ಬೋರಯ್ಯ, ಅಂಗನವಾಡಿ ಕಾರ್ಯಕರ್ತೆ ಸರೋಜಮ್ಮ ಸೇರಿದಂತೆ ಶಾಲೆ ಮಕ್ಕಳು, ಗ್ರಾಮಸ್ಥರು ಉಪಸ್ಥಿತರಿದ್ದರು…

 

ವರದಿ. ಡಿ. ಎಂ. ಈಶ್ವರಪ್ಪ ಸಿದ್ದಾಪುರ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend