ಹೂಡೇಂ ಗ್ರಾಮದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ…!!!

Listen to this article

ಹೂಡೇಂ ಗ್ರಾಮದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

ಕೂಡ್ಲಿಗಿ: ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಹೂಡೇಂ ಗ್ರಾಮದಲ್ಲಿ ಅ.9 ರಂದು ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಮಹರ್ಷಿ ವಾಲ್ಮೀಕಿ ವೃತ್ತದಲ್ಲಿ ವಾಲ್ಮೀಕಿ ಪುತ್ತಳಿ ಗೆ ಮಾಲರ್ಪಣೆ, ಪೂಜೆ, ಪುಷ್ಪಾರ್ಚನೆ ಸಲ್ಲಿಸಿದರು. ನಂತರ ಮಾಜಿ ತಾಲೂಕು ಪಂಚಾಯಿತಿ ಸದಸ್ಯರಾದ ಜಿ ಪಾಪನಾಯಕ ಮಾತನಾಡಿ ಹಿಂದೂ ಧರ್ಮದ ಪ್ರಮುಖ ಗ್ರಂಥಗಳಲ್ಲಿ ಒಂದಾದ ರಾಮಾಯಣದ ಹಿಂದೂ ಮಹಾಕಾವ್ಯವನ್ನು ಬರೆದಿದ್ದಕ್ಕಾಗಿ ವಾಲ್ಮೀಕಿ ಅವರು ಅತ್ಯಂತ ಪ್ರಸಿದ್ಧರಾಗಿದ್ದಾರೆ. ಇದು ಭಗವಾನ್ ವಿಷ್ಣುವಿನ ಎಂಟು ಅವತಾರಗಳ ಕಥೆಯನ್ನು ಹೇಳುತ್ತದೆ. ವಾಲ್ಮೀಕಿ ಅವರನ್ನು ಭಾರತದಲ್ಲಿ ದೇಶ ಕಂಡ ಶ್ರೇಷ್ಠ ಕವಿಗಳಲ್ಲಿ ಒಬ್ಬರೆಂದು ಪರಿಗಣಿಸಲಾಗಿದೆ. ಮೂಲತಃ ವಾಲ್ಮೀಕಿ ಬರೆದ ರಾಮಾಯಣವು 24,000 ಶ್ಲೋಕಗಳನ್ನು ಒಳಗೊಂಡಿದೆ. ರಾಮಾಯಣವು ಸುಮಾರು 480,002 ಪದಗಳಿಂದ ಕೂಡಿದೆ. ಸಾಮಾನ್ಯ ವ್ಯಕ್ತಿಯೊಬ್ಬ ಮಹಾನ್ ಕಾವ್ಯ ರಚಿಸುವಷ್ಟರ ಮಟ್ಟಿಗೆ ತಪಸ್ಸು ಮಾಡಿ ಜ್ಞಾನ ಸಂಪಾದನೆ ಮಾಡಿದ ಮಹರ್ಷಿ ವಾಲ್ಮೀಕಿ, ಅಜ್ಞಾನದಿಂದ ಸುಜ್ಞಾನದೆಡೆಗೆ ಸಾಗುವ ದಾರಿಯನ್ನು ತೋರಿಸಿಕೊಟ್ಟ ಇಂತಹ ಮೇರು ವ್ಯಕ್ತಿ ಈ ಪುಣ್ಯ ಭೂಮಿಯಲ್ಲಿ ಜನಿಸಿದ್ದು ನಾವೆಲ್ಲಾ ಹೆಮ್ಮೆ ಪಡುವಂತಹದ್ದು ಎಂದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಉಪಾಧ್ಯಕ್ಷರಾದ ಕೆಎನ್ ರಾಘವೇಂದ್ರ, ಮಾಜಿ ಗ್ರಾಮ ಪಂಚಾಯತಿ ಸದಸ್ಯರಾದ ಜಿ ಪಾಪ್ ನಾಯಕ, ಗ್ರಾಮ ಪಂಚಾಯತಿ ಸದಸ್ಯರಾದ ರಾಮಚಂದ್ರಪ್ಪ, ಸುಂದರಮ್ಮ ಮಲ್ಲಿಕಾರ್ಜುನ್, ನಾಗಮ್ಮ ಗದ್ದಿ ಸ್ವಾಮಿ, ಅಜ್ಜಣ್ಣ, ಕುಮಾರ್, ಮುಖ್ಯ ಗುರುಗಳಾದ ಅಜಯ್, ವಾಲ್ಮೀಕಿ ಮುಖಂಡರಾದ ಬೋಸಯ್ಯ, ಸೂರಣ್ಣ, ಎಂ ಎಸ್ ನಾಗರಾಜ್, ಬಂಗಾರಯ್ಯ, ಸುರೇಶ್ ಪಿ, ಬೋರೆಯ್ಯ, ಕರಿಬಸವ ಸ್ವಾಮಿ, ಬಿಲ್ ಕಲೆಕ್ಟರ್ ತಿಪ್ಪೇರುದ್ರಪ್ಪ, ಗ್ರಂಥಾಲಯ ಮೇಲ್ಚಾಲಕರಾದ ಗುರುರಾಜ್, ಸ್ವಾಮಿ ಸೇರಿದಂತೆ ವಾಲ್ಮೀಕಿ ಸಮಾಜದ ಮುಖಂಡರು, ಸಾರ್ವಜನಿಕರು ಉಪಸ್ಥಿತರಿದ್ದರು…

ವರದಿ. ಬಸಪ್ಪ ಬಣವಿಕಲ್ಲು

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend