ವಿದ್ಯಾರ್ಥಿಗಳ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ,,,,!!!

Listen to this article

ವಿದ್ಯಾರ್ಥಿಗಳ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ,,,, ತಾಲೂಕಿನ ಕೂಡ್ಲಿಗಿ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಉದ್ಘಾಟನೆ ಮಾಡಿದ ಶಾಸಕ ಎನ್ ವೈ ಗೋಪಾಲಕೃಷ್ಣ ನಂತರ ಮಾತನಾಡಿದ ಶಾಸಕರು ಶಿಕ್ಷಣ ಕ್ಷೇತ್ರಕ್ಕೆ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು. ಕ್ಷೇತ್ರದಲ್ಲಿ ಸಾಕಷ್ಟು ಉತ್ತಮ ರಸ್ತೆಗಳನ್ನು ಮಾಡಲಾಗಿದೆ, ಅಲ್ಲದೆ 400ಕ್ಕೂ ಶಾಲಾ ಕೊಠಡಿಗಳನ್ನುನಿರ್ಮಾಣ ಮಾಡಲಾಗಿದೆ ಬಹುತೇಕ ಶಾಲೆಗಳಲ್ಲಿ ಈಗಾಗಲೇ ಶುದ್ಧ ಕುಡಿಯುವ ನೀರಿನ ಘಟಕವನ್ನು ಪ್ರಾರಂಭಿಸಲಾಗಿದೆ ಅಲ್ಲದೆ ಗ್ರಾಮೀಣ ಭಾಗದಲ್ಲಿ ನೀರು ಪೂರೈಕೆಯಲ್ಲಿ ವ್ಯಥೆಯವಾಗದಂತೆ ನೋಡಿಕೊಳ್ಳಲಾಗಿದೆ, ಪರಿಶಿಷ್ಟ ಪಂಗಡ, ಪರಿಶಿಷ್ಟ ಜಾತಿ ಕಾಲೋನಿಗಳಲ್ಲಿ ಸಿಸಿ ರಸ್ತೆಗಳನ್ನು ನಿರ್ಮಾಣ ಮಾಡಲಾಗಿದ್ದು ಮೂಲಭೂತ ಸೌಕರ್ಯಗಳಿಗೆ ಆದ್ಯತೆ ನೀಡಲಾಗಿದೆ. ಇದೇ ಸಂದರ್ಭದಲ್ಲಿ ಪಿಯು ವಿದ್ಯಾರ್ಥಿನಿ ಮಾತನಾಡಿ ನಮ್ಮ ಕಾಲೇಜಿನಲ್ಲಿ ಸಾಕಷ್ಟು ಸೌಲಭ್ಯಗಳಿವೆ ಆದರೆ ಉಪನ್ಯಾಸಕರ ಕೊರತೆ ಇದ್ದು ಹೆಚ್ಚಿನ ಉಪನ್ಯಾಸಕರನ್ನು ನೇಮಕ ಮಾಡುವಂತೆ ಶಾಸಕರಿಗೆ ಮನವಿ ಮಾಡಿದರು ಇದಕ್ಕೆ ಉತ್ತರಿಸಿದ ಶಾಸಕರು ಅದಕ್ಕೆ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಉಪನ್ಯಾಸಕರನ್ನು ನಿಯೋಜನೆ ಮಾಡಿಸಲು ಪ್ರಯತ್ನ ನಡೆಸಲಾಗುವುದು, ಅಲ್ಲದೆ ಮುಂಬರುವ ದಿನಗಳಲ್ಲಿ ಬಾಲಕಿಯರಿಗೆ ಪ್ರತ್ಯೇಕ ಕಾಲೇಜು ಸ್ಥಾಪನೆ ಮಾಡಲು ಪ್ರಯತ್ನ ನಡೆಸಲಾಗುವುದು ಎಂದು ಹೇಳಿದರು ನಂತರ,

ಪಟ್ಟಣದಲ್ಲಿ ಸಿಸಿ ರಸ್ತೆ, ಶಾಲಾ ಕೊಠಡಿ, ಶೌಚಾಲಯ, ಸರ್ಕಾರಿ ಆಸ್ಪತ್ರೆಯಲ್ಲಿ ಆಕ್ಸಿಜನ್ ಜನರೇಟರ್ ಪ್ಲಾಂಟ್ ಉದ್ಘಾಟನೆ ನೆರವೇರಿಸಿದರು. ಪಟ್ಟಣ ಪಂಚಾಯಿತಿ ಉಪಾಧ್ಯಕ್ಷೆ ಶ್ರೀಮತಿ ಶ್ರೀ.ರೇಣುಕಾ, ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಸಲೀಂ, ತಾಲೂಕು ಟಿ .ಹೆಚ್.ಓ ಪ್ರದೀಪ್ ಕುಮಾರ್, ಸಾರ್ವಜನಿಕ ಆಸ್ಪತ್ರೆಯ ವೈದ್ಯ ಡಾ. ವಿನಯ್ ಕುಮಾರ್, ಕಾಲೇಜು ಉಪಾಧ್ಯಕ್ಷ ಪಿ. ಪಂಪಣ್ಣ, ಪ್ರಾಚಾರ್ಯರಾದ ಕೊತ್ಲಮ್ಮ, ಮುಖಂಡರುಗಳಾದ ಸೂರ್ಯ ಪಾಪಣ್ಣ, ಭೀಮೇಶ್ ಇನ್ನು ಮುಂತಾದವರು ಉಪಸ್ಥಿತರಿದ್ದರು..

ವರದಿ. ಬಸಪ್ಪ ಬಣವಿಕಲ್ಲು

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend