ಹೂಡೇಂ ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದಲ್ಲಿ ಓದುವ ಬೆಳಕು ಕಾರ್ಯಕ್ರಮ…!!!

Listen to this article

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಹೂಡೇಂ ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದಲ್ಲಿ ಓದುವ ಬೆಳಕು ಕಾರ್ಯಕ್ರಮದ ಅಡಿಯಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಅಂಗವಾಗಿ ಅಭಿಯಾನ ಕಾರ್ಯಕ್ರಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ತಾಯಕನಹಳ್ಳಿ ಮತ್ತು ಶ್ರೀ ಕಂಪಳರಂಗ ಸ್ಟಾಮಿ ಪ್ರೌಢ ಶಾಲೆ ಹೂಡೇಂ ಮಕ್ಕಳು ಭಾಗವಹಿಸಿದ್ದರು.ಈ ಕಾರ್ಯಕ್ರಮದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ನಾಮ ಫಲಕ ಕರಪತ್ರ ಹಿಡಿ ದು ಜಾತಾ ಮಾಡಲಾಯಿತು. ಹೆಣ್ಣು ಮಕ್ಕಳನ್ನು ಗ್ರಂಥಾಲಯಕ್ಕೆ ಕರೆ ತಂದು ಖಲಂದರ್ ಸರ್ ಪ್ರತಿಜ್ಞಾವಿಧಿ ಬೋಧಿಸಿದರು.ಹಾಗೂ ಗಣರಾಜ್ಯೋತ್ಸವದ ಬಗ್ಗೆ ಮತ್ತು ಸಂವಿಧಾನದ ಬಗ್ಗೆ ಮಕ್ಕಳಿಗೆ ಗ್ರಂಥಪಾಲಕರು ತುಡುಮ ಗುರುರಾಜ್ ಮಾಹಿತಿ ತಿಳಿಸಿದರು. ಡಿ. ಪಾಲಯ್ಯ ಮುಖ್ಯ ಗುರುಗಳು ಮಾತನಾಡಿ.ಮಕ್ಕಳು ಬಿಡುವಿನ ವೇಳೆಯಲ್ಲಿ ಗ್ರಂಥಾಲಯಕ್ಕೆ ಹೋಗಿ ಅದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.ಲಲಿತಮ್ಮ ಶಿಕ್ಷಕರು ಮಾತನಾಡಿ ಡಾಕ್ಟರ್. ಬಿ.ಆರ್. ಅಂಬೇಡ್ಕರ್ ಅವರು ಸಮಾನತೆ ಮತ್ತು ಸ್ತ್ರೀಯರ ಶಿಕ್ಷಣದ ಬಗ್ಗೆಯೂ ಹೋರಾಟ ಮಾಡಿದರು ಎಂದು ತಿಳಿಸಿದರು. ಈ ಕಾರ್ಯಕ್ರಮದಲ್ಲಿ ಸದಸ್ಯರಾದ ಅಜ್ಜಣ್ಣ, ರಾಮಚಂದ್ರಪ್ಪ ಕುಮಾರ ರೆಡ್ಡಿ,, ಮತ್ತು ಅಭಿವೃದ್ಧಿ ಅಧಿಕಾರಿಗಳಾದ ಶ್ರೀಮತಿ ಕೆ ಲಕ್ಷ್ಮಿಬಾಯಿ ಮೇಡಂ ಹಾಗೂ ಕಾರ್ಯದರ್ಶಿಗಳಾದ ಎಂ ಟಿ. ತಿಪ್ಪೇರುದ್ರಪ್ಪ. ಗ್ರಾಮ ಲೆಕ್ಕಾಧಿಕಾರಿಗಳಾದ ಚೈತ್ರ ಮೇಡಂ ಹಾಗೂ ಗ್ರಂಥಾಲಯ ಓದುಗರು ಮತ್ತು ದಕ್ಷಿಣ ಮೂರ್ತಿ, ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಲಘು ಉಪಹಾರ ನೀಡುವುದರ ಮೂಲಕ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು…

ವರದಿ. ವಿರೇಶ್. ಕೆ. ಎಸ್. ಕಾನಹೋಸಹಳ್ಳಿ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend