ಕಾಯಕ ಶರಣರ ಜಯಂತಿ: ಜಿಲ್ಲಾಡಳಿತದಿಂದ ಪುಷ್ಪನಮನ ಸಲ್ಲಿಕೆ..!!!

Listen to this article

ಕಾಯಕ ಶರಣರ ಜಯಂತಿ: ಜಿಲ್ಲಾಡಳಿತದಿಂದ ಪುಷ್ಪನಮನ ಸಲ್ಲಿಕೆ

ಕೊಪ್ಪಳ : ಕಾಯಕ ಶರಣರ ಜಯಂತಿ ಅಂಗವಾಗಿ ಕೊಪ್ಪಳ ಜಿಲ್ಲಾಡಳಿತದಿಂದ ಫೆಬ್ರವರಿ 18 ರಂದು ಕಾಯಕ ಶರಣರಿಗೆ ಪುಷ್ಪನಮನ ಸಲ್ಲಿಸಲಾಯಿತು.
ಕೊಪ್ಪಳ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಕಾಯಕ ಶರಣರಾದ ಮಾದಾರ ಚನ್ನಯ್ಯ, ಮಾದಾರ ಧೂಳಯ್ಯ, ಡೋಹರ ಕಕ್ಕಯ್ಯ, ಸಮಗಾರ ಹರಳಯ್ಯ ಹಾಗೂ ಉರಿಲಿಂಗಪೆದ್ದಿ ಯವರ ಜಯಂತಿಯನ್ನು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರದಂದು ಆಚರಿಸಲಾಯಿತು.
ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಹಾಂತೇಶ ಎಸ್ ಪಾಟೀಲ್ ಹಾಗೂ ಉಪವಿಭಾಗಾಧಿಕಾರಿಗಳಾದ ಬಸವಣ್ಣೆಪ್ಪ ಕಲಶೆಟ್ಟಿ ಅವರು ಕಾಯಕ ಶರಣರ ಭಾವಚಿತ್ರಕ್ಕೆ ಪುಷ್ಪಾರ್ಣೆ ಮಾಡಿ ಗೌರವ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ದಲಿತ ಸಂಘಟನೆಗಳ ಒಕ್ಕೂಟದ ಹೈ-ಕ ವಿಭಾಗದ ಅಧ್ಯಕ್ಷರಾದ ಚನ್ನಬಸಪ್ಪ ಎಚ್ ಹೊಳೆಯಪ್ಪನವರ, ಪಿಂಚಣಿ ಮತ್ತು ಸಣ್ಣ ಉಳಿತಾಯ ಇಲಾಖೆಯ ಅಧಿಕಾರಿಗಳಾದ ಮಲ್ಲಯ್ಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕೊಟ್ರೇಶ್ ಮರಬನಳ್ಳಿ, ಸಿಬ್ಬಂದಿ ಮತ್ತಣ್ಣ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು..

ವರದಿ. ಸಂಗೀತ ಪಾಟೀಲ್. ಕೊಪ್ಪಳ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend