ರಾಷ್ಟ್ರೀಯ ಡೆಂಗೆ ದಿನಾಚರಣೆ ಜಿಲ್ಲಾಮಟ್ಟದ ಡೆಂಗೆ ಜನ ಜಾಗೃತಿ ಜಾಥಾ…!!!

Listen to this article

ರಾಷ್ಟ್ರೀಯ ಡೆಂಗೆ ದಿನಾಚರಣೆ
ಜಿಲ್ಲಾಮಟ್ಟದ ಡೆಂಗೆ ಜನ ಜಾಗೃತಿ ಜಾಥಾ
ಕೊಪ್ಪಳ : ರಾಷ್ಟ್ರೀಯ ಡೆಂಗೆ ದಿನಾಚರಣೆ ಅಂಗವಾಗಿ ಕೊಪ್ಪಳ ಜಿಲ್ಲೆಯಲ್ಲಿ ಡೆಂಗೆ ಜ್ವರದ ಹರಡುವಿಕೆ, ನಿಯಂತ್ರಣ ಹಾಗೂ ರೋಗಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಜನಸಮುದಾಯವನ್ನು ಜಾಗೃತಿಗೊಳಿಸಲು ಮೇ 16ರಂದು ಜಿಲ್ಲಾ ಮಟ್ಟದ ಡೆಂಗೆ ಜನ ಜಾಗೃತಿ ಜಾಥಾ ಕಾರ್ಯಕ್ರಮ ನಡೆಯಿತು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಕೊಪ್ಪಳ ನಗರದ ಹಳೆ ಜಿಲ್ಲಾ ಆಸ್ಪತ್ರೆ ಆವರಣದಿಂದ ಆರಂಭಗೊಂಡ ಜಾಥಾವು ನಗರದ‌ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ಇದೆ ವೇಳೆ ಆರೋಗ್ಯ ಶಿಕ್ಷಣವಾಹಿನಿ ವಾಹನದಲ್ಲಿ ಡೆಂಗೆ ಜಾಗೃತಿ ಸಂದೇಶ ಹಾಗೂ ಜಾನಪದ ಗೀತೆಗಳನ್ನು ಬಿತ್ತರಿಸಲಾಯಿತು. ಹಾಗೂ ಡೆಂಗೆ ಜಾಗೃತಿ ಗೀತೆಗಳನ್ನು ಹಾಡುವ, ಡೆಂಗೆ ಜಾಗೃತಿ ಕರಪತ್ರಗಳನ್ನು ಹಂಚುವ ಹಾಗೂ ಬಿತ್ತಿಪತ್ರಗಳನ್ನು ಪ್ರದರ್ಶಿಸಿ ಜನ ಜಾಗೃತಿ ಮೂಡಿಸಲಾಯಿತು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ.ಅಲಕನಂದಾ ಮಳಗಿ ಅವರು ಡೆಂಗೆ ಜಾಗೃತಿಯ ಜಾಥಕ್ಕೆ ಚಾಲನೆ ನೀಡಿ ಬಳಿಕ ಮಾತನಾಡಿ, ಪ್ರತಿವರ್ಷ ಮೇ 16 ಅನ್ನು ರಾಷ್ಟ್ರೀಯ ಡೆಂಗೆ ಜಾಗೃತಿ ದಿನಾಚರಣೆಯನ್ನಾಗಿ ಆಚರಿಸಿ ಡೆಂಗೆ ರೋಗ ಪ್ರಸರಣ ಅವಧಿಯ ಮುನ್ನವೇ ಜನಸಮುದಾಯವನ್ನು ಜಾಗೃತಿಗೊಳಿಸಲು ವ್ಯಾಪಕ ಅಭಿಯಾನ, ಜಾಥಗಳು, ರ‍್ಯಾಲಿ, ಅಂತರ್ ಇಲಾಖಾ ಸಭೆ ಸಮಾರಂಭಗಳನ್ನು ಜಿಲ್ಲೆಯಾಧ್ಯಂತ ನಡೆಸಲಾಗುತ್ತಿದೆ. ಜಿಲ್ಲೆಯಲ್ಲಿ ಡೆಂಗ್ಯೂ ನಿಯಂತ್ರಣ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಡೆಂಗೆ ನಿಯಂತ್ರಣಕ್ಕೆ ಆರೋಗ್ಯ ಇಲಾಖೆಯಿಂದ ಎಲ್ಲಾ ಸೂಕ್ತ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಡೆಂಗೆ ಜ್ವರಕ್ಕೆ ಯಾವುದೇ ನಿರ್ಧಿಷ್ಟ ಚಿಕಿತ್ಸೆ ಇಲ್ಲದಿದ್ದರೂ ಜನರೂ ಭಯಪಡುವ ಅವಶ್ಯಕತೆ ಇಲ್ಲ, ಲಕ್ಷಣಗಳನ್ನಾಧರಿಸಿ ಚಿಕಿತ್ಸೆ ನೀಡಲಾಗುವುದು. ಸರ್ಕಾರಿ ಆಸ್ಪತ್ರೆಗಳಲ್ಲಿ ಸೂಕ್ತ ಚಿಕಿತ್ಸೆ ಮತ್ತು ಉಚಿತ ಪ್ರಯೋಗಾಲಯ ಪರೀಕ್ಷೆಗಳನ್ನು ಮಾಡಲಾಗುತ್ತಿದ್ದು, ಜನರು ಅನಗತ್ಯ ಭಯಕ್ಕೆ ಒಳಗಾಗದೆ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಬೇಕು ಎಂದರು.
ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳಾದ ಡಾ ವೆಂಕಟೇಶ್ ಕೆ ಅವರು ಮಾತನಾಡಿ, ಡೆಂಗೆ ಜ್ವರವು ಈಡಿಸ್ ಜಾತಿಯ ಸೊಳ್ಳೆಗಳ ಕಚ್ಚುವಿಕೆಯಿಂದ ಹರಡುತ್ತದೆ ಹಾಗೂ ಇದು ಹಗಲು ಹೊತ್ತಿನಲ್ಲಿಯೇ ಕಚ್ಚುತ್ತವೆ. ಈಡಿಸ್ ಸೊಳ್ಳೆಗಳು ನೀರು ಶೇಖರಣೆ ಸಲಕರಣೆಗಳಲ್ಲಿ, ಶುದ್ಧ ನೀರಿನಲ್ಲಿಯೇ ಸಂತಾನಾಭಿವೃದ್ಧಿ ಮಾಡುತ್ತವೆ. ಆದ್ದರಿಂದ ನೀರು ಶೇಖರಣೆ ಸಲಕರಣೆಗಳನ್ನು ಸದಾಕಾಲ ಮುಚ್ಚಿಡಬೇಕು ಹಾಗೂ ಮನೆಯ ಒಳಗೆ ಮತ್ತು ಹೊರಗೆ ನೀರು ನಿಲ್ಲದಂತೆ ಎಚ್ಚರವಹಿಸಿ ಸೊಳ್ಳೆ ಉತ್ಪತ್ತಿ ತಡೆಗಟ್ಟಬೇಕು. ಈ ವರ್ಷದ ಧ್ಯೇಯವಾಕ್ಯ ”ಎಲ್ಲರ ಸಹಭಾಗಿತ್ವದೊಂದಿಗೆ ಡೆಂಗಿಯನ್ನು ಸೋಲಿಸೋಣ” ಎಂಬುದಾಗಿದ್ದು, ಮನೆಗಳ ಸುತ್ತಲು ಸ್ವಚ್ಛತೆ ಕಾಪಾಡಬೇಕು ಹಾಗೂ ಈಡೀಸ್ ಲಾರ್ವಾ ಸಮೀಕ್ಷೆಗಾಗಿ ನಿಮ್ಮ ಮನೆಗೆ ಬೇಟಿ ನೀಡುವ ಆರೋಗ್ಯ ಸಿಬ್ಬಂದಿ, ಆಶಾ ಕಾರ್ಯಕರ್ತರಿಗೆ ಸಹಕಾರ ನೀಡಿ ಅವರ ಸಲಹೆಗಳನ್ನು ಪಾಲಿಸುವಂತೆ ತಿಳಿಸಿದರು.
ತಾಲೂಕ ಆರೋಗ್ಯಾಧಿಕಾರಿಗಳಾದ ರಾಮಾಂಜನೇಯ ಅವರು ಮಾತನಾಡಿ, ಪ್ರಸ್ತುತ ಮಳೆಗಾಲ ಪ್ರಾರಂಭವಾಗಿದ್ದು, ನೀರಿನ ಶೇಖರಣಾ ಸಲಕರಣೆಗಳಲ್ಲಿ ನೀರು ಶೇಖರಣೆಯಾಗಿ ಸೊಳ್ಳೆ ಉತ್ಪತ್ತಿಯಾಗಿ ಸೊಳ್ಳೆಗಳ ಸಾಂದ್ರತೆ ಹೆಚ್ಚಾಗುತ್ತದೆ.

ಅದರಲ್ಲೂ ಡೆಂಗೆ ಹರಡುವ ಈಡಿಸ್ ಸೊಳ್ಳೆಗಳು ಮನೆಯ ಒಳಗಡೆ ಕಚ್ಚುವುದರಿಂದ ಡೆಂಗೆ ಹರಡುವ ಸಾದ್ಯತೇ ಇರುತ್ತದೆ. ಕಾರಣ ಯಾವುದೇ ಜ್ವರವಿರಲಿ ಶೀಘ್ರವೇ ಹತ್ತಿರದ ಸರ್ಕಾರಿ ಆರೋಗ್ಯ ಕೇಂದ್ರದಲ್ಲಿ ರಕ್ತ ಪರೀಕ್ಷೆ ಮಾಡಿಸಿ ಉಚಿತ ಚಿಕಿತ್ಸೆ ಪಡೆಯಲು ಹಾಗೂ ಮಲಗುವಾಗ ಸೊಳ್ಳೆಪರದೆಗಳನ್ನು ಬಳಸಲು ಹಾಗೂ ವಾರಕ್ಕೊಮ್ಮೆ ನೀರು ಶೇಖರಣೆ ಸಲಕರಣೆಗಳನ್ನು ಖಾಲಿಮಾಡಿ ಸ್ವಚ್ಛಗೊಳಿಸಿ ನೀರು ತುಂಬಿ ಮುಚ್ಚಿಡಲು ಹಾಗೂ ಸೊಳ್ಳೆ ಕಡಿತದಿಂದ ದೂರವಿರಲು ಸಾಧ್ಯವಾದ ಎಲ್ಲಾ ಸ್ವಯಂ ರಕ್ಷಣ ವಿಧಾನಗಳನ್ನು ಅನುಸರಿಸಬೇಕು. ಡೆಂಗೆ ಜ್ವರ ನಿಯಂತ್ರಣಕ್ಕೆ ಜನಸಮುದಾಯದ ಸಹಕಾರ, ಸೊಳ್ಳೆ ಉತ್ಪತ್ತಿ ತಾಣಗಳ ನಿರ್ಮೂಲನೆ ಹಾಗೂ ಜನಜಾಗೃತಿಯೊಂದೆ ಪರಿಹಾರ ಮಾರ್ಗ ಎಂದರು.
ಈ ಸಂದರ್ಭದಲ್ಲಿ ಕೊಪ್ಪಳ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಕಚೇರಿಯ ರಮೇಶ್ ಕೆ., ಜಿಲ್ಲಾ ವಿ.ಬಿ.ಡಿ ಸಲಹೆಗಾರರು ಹಾಗೂ ಸಿಬ್ಬಂದಿ ಮತ್ತು ತಾಲೂಕ ಆರೋಗ್ಯಾಧಿಕಾರಿಗಳ ಕಚೇರಿಯ ಕ್ಷೇತ್ರ ಆರೋಗ್ಯ ಶಿಕ್ಣಣಾಧಿಕಾರಿಗಳಾದ ಗಂಗಮ್ಮ, ಜಿಲ್ಲಾ ಕಾರ್ಯಕ್ರಮ ಅನುಸ್ಟಾನಾಧಿಕಾರಿಗಳು ಹಾಗೂ ಸಿಬ್ಬಂದಿ ಮತ್ತು ಆರೋಗ್ಯ ಇಲಾಖೆಯ ಎಲ್ಲಾ ಸಿಬ್ಬಂದಿಗಳು ಸಕ್ರಿಯವಾಗಿ ಭಾಗವಹಿಸಿದ್ದರು. ಜಿಲ್ಲಾ ಉಪ ಆರೋಗ್ಯ ಶಿಕ್ಣಣಾಧಿಕಾರಿಗಳಾದ ಶಿವಾನಂದ ಪೂಜಾರ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು…

 

ವರದಿ. ಚನ್ನಬಸವರಾಜ್, ಕಳ್ಳಿಮರದ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend