ಕೊಪ್ಪಳ ‌ಒಟ್ಟು 22 ಕೇಂದ್ರಗಳು, 15,947 ವಿದ್ಯಾರ್ಥಿಗಳು ಹಾಜರು…!!!

Listen to this article

ಕೊಪ್ಪಳ :ಪದವಿಪೂರ್ವ ದ್ವಿತೀಯ ವರ್ಷದ ವಿದ್ಯಾರ್ಥಿಗಳ ವಾರ್ಷಿಕ ಪರೀಕ್ಷೆ-1 ಮಾ. 1ರಿಂದ ಪ್ರಾರಂಭವಾಗಲಿದ್ದು, ಜಿಲ್ಲೆಯಲ್ಲಿ 22 ಕೇಂದ್ರಗಳನ್ನು ಆರಂಭಿಸಲಾಗಿದೆ. ಒಟ್ಟು 15,947 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿದ್ದಾರೆ.

ಹೊಸದಾಗಿ ಬಾಲಕರು 5,891, ಬಾಲಕಿಯರು 7,892 ಪರೀಕ್ಷೆ ಬರೆಯಲಿದ್ದಾರೆ.

ಕಲಾ ವಿಭಾಗದಲ್ಲಿ 6,274, ವಿಜ್ಞಾನ ವಿಭಾಗದಲ್ಲಿ 5,181 ಮತ್ತು ವಾಣಿಜ್ಯ ವಿಭಾಗದಲ್ಲಿ 2,328 ವಿದ್ಯಾರ್ಥಿಗಳು ಪರೀಕ್ಷೆ ಬರೆಯುವರು. ಖಾಸಗಿಯಾಗಿ 793 ಮತ್ತು ಪುನರಾವರ್ತಿತವಾಗಿ 1,371 ಅಭ್ಯರ್ಥಿಗಳು ಪರೀಕ್ಷೆ ಎದುರಿಸುವರು.

ನಿಷೇಧಾಜ್ಞೆ: ಜಿಲ್ಲೆಯಾದ್ಯಂತ ಮಾ. 1ರಿಂದ 22ರ ತನಕ ಪರೀಕ್ಷೆ ಜರುಗಲಿದ್ದು, ಶಾಂತಿಯುತವಾಗಿ ನಡೆಸಲು ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ 144ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ನಲಿನ್ ಅತುಲ್ ಆದೇಶ ಹೊರಡಿಸಿದ್ದಾರೆ.

ನಿಗದಿತ ದಿನಗಳಂದು ಬೆಳಿಗ್ಗೆ 10.30ರಿಂದ ಮಧ್ಯಾಹ್ನ 1.30ರ ತನಕ ಪರೀಕ್ಷೆ ನಡೆಯಲಿದೆ. ಕೊಪ್ಪಳ 6, ಗಂಗಾವತಿ 7, ಕುಷ್ಟಗಿ 4, ಯಲಬುರ್ಗಾ 2, ಕುಕನೂರ 1, ಕಾರಟಗಿ 1, ಕನಕಗಿರಿ ತಾಲ್ಲೂಕಿನ 1 ಕೇಂದ್ರದಲ್ಲಿ ಪರೀಕ್ಷಾ ಕೇಂದ್ರಗಳನ್ನು ಮಾಡಲಾಗಿದೆ.

‘ಪರೀಕ್ಷಾ ಕೇಂದ್ರಗಳ ಸುತ್ತಲು ಮೊಬೈಲ್, ಪೇಜರ್, ಝರಾಕ್ಸ್, ಟೈಪಿಂಗ್ ಬಳಕೆ ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರದಲ್ಲಿ ಪ್ರವೇಶ ಪತ್ರ ಪಡೆದ ಹಾಗೂ ನಿಯೋಜಿತ ಶಿಕ್ಷಕರನ್ನು, ಜಾಗೃತ ದಳದವರನ್ನು ಹೊರತುಪಡಿಸಿ ಇನ್ನುಳಿದವರಿಗೆ ಪರವಾನಿಗೆ ಇಲ್ಲದೇ ಪ್ರವೇಶ ಮಾಡುವಂತಿಲ್ಲ. ಈ ಆದೇಶವು ಮದುವೆ, ಶವ ಸಂಸ್ಕಾರಗಳು ಹಾಗೂ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳಿಗೆ ಅನ್ವಯವಾಗುವುದಿಲ್ಲ’ ಜಿಲ್ಲಾಧಿಕಾರಿ ತಿಳಿಸಿದ್ದಾರೆ…

ವರದಿ. ಮಂಜುನಾಥ್ ಉಪ್ಪಾರ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend