ಹಾವು ಕಡಿದು ಬಿ ಎ ಅಂತಿಮ ವರ್ಷದ ವಿದ್ಯಾರ್ಥಿ ಸಾವು ; ವಿಜಯನಗರ ಜಿಲ್ಲೆ:- ಹಗರಿಬೊಮ್ಮನಹಳ್ಳಿ ತಾಲೂಕಿನ ನಾಣ್ಯಪುರ ಗ್ರಾಮದ ಜೆ ಹರೀಶ್ 21 ವರ್ಷ ಬಿಎ ಅಂತಿಮ ವರ್ಷದ ವಿದ್ಯಾರ್ಥಿಯಾಗಿದ್ದ ಈತನಿಗೆ ಹಾವು ಕಡಿದು ಸಾವನ್ನಪ್ಪಿರುವ ಘಟನೆ ಜರುಗಿದೆ. ಭಾನುವಾರ ತಮ್ಮ ಕುಟುಂಬದ ಜೊತೆ ಕೂಡ್ಲಿಗಿ ತಾಲೂಕು ಸಿಡೇಗಲ್ಲು ಶ್ರೀ ಬಸವೇಶ್ವರ ದೇವಸ್ಥಾನದ ದರ್ಶನ ಪಡೆಯಲು ತಂದೆ ರುದ್ರಪ್ಪ ತಾಯಿ ಗಿರಿಜಮ್ಮ ಜೊತೆ ಆಗಮಿಸಿದ್ದ ಜೆ ಹರೀಶನಿಗೆ ದೇವಸ್ಥಾನದ ಆವರಣದಲ್ಲಿ ರಾತ್ರಿ ಮಲಗಿದ ವೇಳೆ ಕುತ್ತಿಗೆ ಭಾಗಕ್ಕೆ ಹಾವು ಕಚ್ಚಿದೆ ಎನ್ನಲಾಗಿದೆ, ಕೂಡಲೇ ಈತನನ್ನು ಕೂಡ್ಲಿಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚೇತರಿಕೆ ಕಾಣದೆ ಇರುವುದರಿಂದ ಈತನನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಿದರು ಅಲ್ಲಿಯೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಎಂದು ತಿಳಿದಿದೆ. ದೇವರ ದರ್ಶನಕ್ಕೆ ಹೋದ ಸಂದರ್ಭದಲ್ಲಿ ನಡೆದ ಈ ಘಟನೆಯು ಮೃತ ಹರೀಶನ ಕುಟುಂಬಕ್ಕೆ ತುಂಬಲಾರದ ನಷ್ಟವಾಗಿದ್ದು ಮಗನನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟುವಂತಿತ್ತು. ಗುಡೆಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…
ವರದಿ. ಬಸಪ್ಪ ಬಣವಿಕಲ್ಲು
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030