ಗ್ರಂಥಾಲಯದ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಆಹ್ವಾನ…!!!

Listen to this article

ವರದಿ. ಡಿ. ಎಂ. ಈಶ್ವರಪ್ಪ ಸಿದ್ದಾಪುರ

ಗ್ರಂಥಾಲಯ ಮೇಲ್ವಿಚಾರಕರ ಹುದ್ದೆ : ಅರ್ಜಿ ಆಹ್ವಾನ
ಬಳ್ಳಾರಿ,ಫೆ12: ಜಿಲ್ಲಾ ಕೇಂದ್ರ ಗ್ರಂಥಾಲಯದ ವ್ಯಾಪ್ತಿಯಲ್ಲಿ ಬರುವ ಬಳ್ಳಾರಿ, ಸಿರುಗುಪ್ಪ, ಕೂಡ್ಲಿಗಿ ಮತ್ತು ಹಗರಿಬೊಮ್ಮನಹಳ್ಳಿ ತಾಲೂಕಿನ ಒಟ್ಟು 06 ಗ್ರಾಪಂ ಗ್ರಂಥಾಲಯಗಳಲ್ಲಿ ಖಾಲಿಯಿರುವ ಮೇಲ್ವಿಚಾರಕರ ಹುದ್ದೆಗೆ ಗೌರವ ಸಂಭಾವನೆ ಆಧಾರದ ಮೇರೆಗೆ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ ಎಂದು ಜಿಲ್ಲಾ ಕೇಂದ್ರ ಗ್ರಂಥಾಲಯದ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಗರಿಬೊಮ್ಮನಹಳ್ಳಿ ತಾಲೂಕಿನ ಬಾಚಿಗೊಂಡನಹಳ್ಳಿ ಗ್ರಾಪಂ ವ್ಯಾಪ್ತಿಯ ಗ್ರಂಥಾಲಯಕ್ಕೆ ಅಂಗವಿಕಲ/ವಿಕಲಚೇತನ ಹೊಂದಿರುವ ಸಾಮಾನ್ಯ ಅಭ್ಯರ್ಥಿ ಮೀಸಲಾತಿ, ಕೂಡ್ಲಿಗಿ ತಾಲೂಕಿನ ಬಡೇಲಡಕು ಗ್ರಾಪಂ ವ್ಯಾಪ್ತಿಯ ಗ್ರಂಥಾಲಯಕ್ಕೆ ಪ್ರ.ವರ್ಗ-1 (ಇತರೆ), ಸಿರುಗುಪ್ಪ ತಾಲೂಕಿನ ಹಳೇಕೋಟೆ ಗ್ರಾಪಂ ವ್ಯಾಪ್ತಿಯ ಗ್ರಂಥಾಲಕ್ಕೆ ಸಾಮಾನ್ಯ ಅಭ್ಯರ್ಥಿ (ಮಾಜಿ ಸೈನಿಕ), ಕೂಡ್ಲಿಗಿತಾಲೂಕಿನ ಹಾರಕಭಾವಿ ಗ್ರಂಥಾಲಯಕ್ಕೆ ಪರಿಶಿಷ್ಟ ಜಾತಿಯ (ಗ್ರಾಮೀಣ ಅಭ್ಯರ್ಥಿ) ಅಭ್ಯರ್ಥಿಗಳು, ಕೂಡ್ಲಿಗಿ ತಾಲೂಕಿನ ಹುರುಳಿಹಾಳ್ ಗ್ರಾಪಂ ವ್ಯಾಪ್ತಿಯ ಗ್ರಂಥಾಲಯಕ್ಕೆ ಸಾಮಾನ್ಯ ಅಭ್ಯರ್ಥಿ (ಇತರೆ) ಹಾಗೂ ಬಳ್ಳಾರಿ ತಾಲೂಕಿನ ಯರಗುಡಿ ಗ್ರಾಪಂ ವ್ಯಾಪ್ತಿಯ ಗ್ರಂಥಾಲಯಕ್ಕೆ 3ಬಿ (ಇತರೆ) ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತಿದ್ದು, ಮೀಸಲಿರಿಸಿದ ಆಯಾ ವರ್ಗದ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಎಸ್ಸೆಸ್ಸೆಲ್ಸಿ ಉತ್ತೀರ್ಣನಾಗಿರಬೇಕು. ಅಭ್ಯರ್ಥಿಯು ಸ್ಥಳೀಯ ಗ್ರಾಪಂಗೆ ಸೇರಿರಬೇಕು. ನಿಗದಿ ಪಡಿಸಿದ ಮೀಸಲಾತಿಗೆ ಒಳಪಡುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬೇಕು. ವಯಸ್ಕರ ಶಿಕ್ಷಣದಡಿ ನಡೆಯುತ್ತಿರುವ ಮುಂದುವರಿಕೆ ಕಲಿಕಾ ಕೇಂದ್ರಗಳ ಪ್ರೇರಕ/ಉಪಪ್ರೇರಕರು ಸಹ ಅರ್ಜಿ ಸಲ್ಲಿಸಬಹುದಾಗಿದೆ. ಮೇಲ್ವಿಚಾರಕರಾಗಿ ನೇಮಕಗೊಂಡ ನಂತರ ಪ್ರೇರಕ/ಉಪಪ್ರೇರಕ ಹುದ್ದೆಗೆ ರಾಜೀನಾಮೆ ನೀಡತಕ್ಕದ್ದು ಹಾಗೂ ಬಿಡುಗಡೆ ಪತ್ರವನ್ನು ಸಂಬಂಧಿಸಿದ ಇಲಾಖೆಯಿಂದ ಪಡೆದು ಆಯಾ ಕಚೇರಿಗೆ ಸಲ್ಲಿಸಬೇಕು. ಪ್ರೇರಕ/ಉಪಪ್ರೇರಕರಿಗೆ ಮೀಸಲಾತಿ ಅನ್ವಯಿಸುತ್ತದೆ. ಅಭ್ಯರ್ಥಿಯು 18 ವರ್ಷವನ್ನು ಪೂರೈಸಿರಬೇಕು. ಸಾಮಾನ್ಯ ಅಭ್ಯರ್ಥಿ-33 ವರ್ಷ, 2ಎ, 2ಬಿ,3ಎ,3ಬಿ-36 ವರ್ಷ, ಪ.ಜಾತಿ/ ಪ. ಪಂಗಡ/ ಪ್ರ.ವರ್ಗ-1 ಕ್ಕೆ 38 ವರ್ಷದೊಳಗಿರಬೇಕು. ಗ್ರಂಥಾಲಯ ವಿಜ್ಞಾನದಲ್ಲಿ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುತ್ತದೆ. ಭರ್ತಿ ಮಾಡಿದ ಅರ್ಜಿಗಳನ್ನು ಸೂಕ್ತ ದಾಖಲಾತಿಗಳಾದ ಎಸ್ಸೆಸ್ಸೆಲ್ಸಿ ಅಂಕಪಟ್ಟಿ, ಜಾತಿ ಪ್ರಮಾಣ ಪತ್ರ, ಸ್ಥಳೀಯ ನಿವಾಸಿ ದೃಡೀಕರಣ ಪತ್ರ, ಅಂಗವಿಕಲತೆ ಇದ್ದಲ್ಲಿ ದೃಢೀಕರಣ ಪತ್ರ ಹಾಗೂ ಇತರೆ ದಾಖಲಾತಿಗಳನ್ನು ಆಯಾ ತಾಲೂಕಿನ ಪಂಚಾಯತಿ ಅಭಿವೃದ್ದಿ ಅಧಿಕಾರಿಗಳಿಗೆ/ ಪಂಚಾಯತಿ ಕಾರ್ಯದರ್ಶಿಗಳಿಗೆ ಮಾ.15 ರೊಳಗಾಗಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ಜಿಲ್ಲಾ ಕೇಂದ್ರ ಗ್ರಂಥಾಲಯ ಕಚೇರಿಯ ದೂ.ಸಂ: 08392-276887 ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend