ಮತದಾರರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಚಳ್ಳಕೆರೆ ಪಟ್ಟಣದಲ್ಲಿ ಹಮ್ಮಿಕೊಳ್ಳಲಾಯಿತು…!!!

Listen to this article

ಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಚಿತ್ರದುರ್ಗ ಮತ್ತು ತಾಲ್ಲೂಕು ಆಡಳಿತ ಹಾಗೂ ತಾಲೂಕು ಸ್ವೀಪ್ ಸಮಿತಿ ಚಳ್ಳಕೆರೆ ರವರ ವತಿಯಿಂದ ಚಿತ್ರದುರ್ಗ ಲೋಕಸಭಾ ಚುನಾವಣೆಯ ಪ್ರಯುಕ್ತ ಮತದಾರರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಚಳ್ಳಕೆರೆ ಪಟ್ಟಣದಲ್ಲಿ ಹಮ್ಮಿಕೊಳ್ಳಲಾಯಿತು. ಸದರಿ ಕಾರ್ಯಕ್ರಮಕ್ಕೆ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಅಧ್ಯಕ್ಷ ರು ತಾಲ್ಲೂಕು ಸ್ವೀಪ್ ಸಮಿತಿ ಶ್ರೀ ಲಕ್ಷ್ಮಣ ಬಿ ಎಸ್ ಚಾಲನೆ ನೀಡಿದರು.

ಭಾರತ ಚುನಾವಣಾ ಆಯೋಗವು ಈಗಾಗಲೇ ಲೋಕಸಭೆಗೆ ಸಾರ್ವರ್ತ್ರಿಕ ಚುನಾವಣೆಯ ದಿನಾಂಕವನ್ನು ಘೋಷಣೆ ಮಾಡಿದ್ದು ಅದರಂತೆ ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಸಾರ್ವತ್ರಿಕ ಚುನಾವಣೆಯ ದಿನಾಂಕ 26.4.2024 ರಂದು ನಡೆಯಲಿದ್ದು ಸದರಿ ದಿನದಂದು ಈಗಾಗಲೇ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಂಡಿರುವ ಎಲ್ಲಾ ಅರ್ಹ ಮತದಾರರು ಕಡ್ಡಾಯವಾಗಿ ತಮ್ಮ ವ್ಯಾಪ್ತಿಯ ಮತದಾನ ಕೇಂದ್ರಗಳಿಗೆ ತೆರಳಿ ಮತದಾನ ಮಾಡಬೇಕೆಂದು ಮನವಿ ಮಾಡಿದರು ಮುಂದುವರೆದು ಯಾವುದಾದರೂ ಚುನಾವಣಾ ಅಕ್ರಮಗಳು ಕಂಡು ಬಂದಲ್ಲಿ ಭಾರತ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ಸಿವಿಜಿಲ್ ಆಪ್ ಮೂಲಕ ಚುನಾವಣಾ ಆಯೋಗಕ್ಕೆ ದೂರನ್ನು ದಾಖಲಿಸಬಹುದಾಗಿದೆ ಎಂದು ತಿಳಿಸಿದರು ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಾಡುವುದರ ಮೂಲಕ ಪ್ರಜಾಪ್ರಭುತ್ವದ ಹಬ್ಬದಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ತಿಳಿಸಿದರು.

ಈ ಸಮಯದಲ್ಲಿ ತಹಶೀಲ್ದಾರರಾದ ಶ್ರೀ ರೆಹನ್ ಪಾಷರವರು ನಗರಸಭೆ ಆಯುಕ್ತರಾದ ಶ್ರೀ ಜೀವನ್ ಕಟ್ಟಿಮನಿ ತಾಲೂಕು ಆರೋಗ್ಯ ಅಧಿಕಾರಿಗಳಾದ ಶ್ರೀ ಕಾಶಿ ರವರು ತಾಲೂಕು ಪಂಚಾಯತಿಯ ಸಹಾಯಕ ನಿರ್ದೇಶಕರಾದ ಶ್ರೀ ಸಂತೋಷ, ಶ್ರೀ ಸಂಪತ್ ಕುಮಾರ್, ನಗರಸಭೆ ಸಿಬ್ಬಂದಿ ವರ್ಗದವರು ತಾಲೂಕು ಪಂಚಾಯಿತಿಯ ಸಿಬ್ಬಂದಿ ವರ್ಗದವರು ಆರೋಗ್ಯ ಇಲಾಖೆ ಸಿಬ್ಬಂದಿ ವರ್ಗದವರು ಹಾಗೂಆಶಾ ಕಾರ್ಯಕರ್ತೆಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು…
ಮತದಾರರಲ್ಲಿ ಜಾಗೃತಿ ಮೂಡಿಸುವ ಜಾತ ಕಾರ್ಯಕ್ರಮವು ಚಳ್ಳಕೆರೆ ನಗರದ ಶ್ರೀ ವಾಲ್ಮೀಕಿ ವೃತ್ತದಿಂದ ಪ್ರಾರಂಭವಾಗಿ ನೆಹರು ವೃತ್ತದ ವರೆಗೆ ಸಾಗಿ ನೆಹರು ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸುವುದರ ಮೂಲಕ ಮತದಾರರಲ್ಲಿ ಜಾಗೃತಿ ಮೂಡಿಸಲಾಯಿತು…

ವರದಿ. ಶಶಿಕುಮಾರ್ ಚಳ್ಳಕೆರೆ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend