ಗುರುವಾರದಿಂದ ಸೇವಾಸಿಂಧು ಮೂಲಕ ಅರ್ಜಿ ಸಲ್ಲಿಸುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ…!!!

Listen to this article

ಕೊರೋನಾ ಎರಡನೇ ಅಲೆ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಲಾಕ್‌ಡೌನ್ ಜಾರಿ ಮಾಡಿದ್ದು, ಲಾಕ್‌ಡೌನ್‌ನಿಂದ ಸಮಸ್ಯೆ ಅನುಭವಿಸುತ್ತಿರುವ ಚಾಲಕರಿಗೆ ಸರ್ಕಾರ ನೀಡುವ ಸಹಾಯಧನಕ್ಕೆ ಗುರುವಾರದಿಂದ ಸೇವಾಸಿಂಧು ಮೂಲಕ ಅರ್ಜಿ ಸಲ್ಲಿಸುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ.

ಲಾಕ್‌ಡೌನ್ ಸಮಸ್ಯೆಗೆ ಒಳಗಾಗಿರುವ ವಿವಿಧ ವರ್ಗದ ಜನರಿಗೆ ಸಹಾಯಧನ ನೀಡಲಾಗುತ್ತಿದೆ. ಅದರಲ್ಲಿ ಆಟೋ, ಟ್ಯಾಕ್ಸಿ ಮತ್ತು ಮ್ಯಾಕ್ಸಿಕ್ಯಾಬ್ ಚಾಲಕರು ಸೇರಿದ್ದಾರೆ. ಅದರಂತೆ ಚಾಲಕರಿಗೆ ತಲಾ 3 ಸಾವಿರ ರೂ. ಸಹಾಯಧನ ನೀಡಲಾಗುತ್ತದೆ. ಈ ಸಹಾಯಧನ ಪಡೆಯುವ ಸಂಬಂಧ ಸೇವಾಸಿಂಧು ವೆಬ್ಪೋರ್ಟಲ್ ಮೂಲಕವೇ ಅರ್ಜಿ ಸಲ್ಲಿಸುವಂತೆ ಸಾರಿಗೆ ಇಲಾಖೆ ತಿಳಿಸಿತ್ತು. ಅದರಂತೆ ಗುರುವಾರ (ಮೇ.27) ಬೆಳಗ್ಗೆ 11 ಗಂಟೆಯೊಂದ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭಿಸಲಾಗುತ್ತಿದೆ
ಅರ್ಹ ಚಾಲಕರು ಅರ್ಜಿ ಸಲ್ಲಿಸಿ ಸರ್ಕಾರದ ಪರಿಹಾರ ಪಡೆಯುವಂತೆ ಸೂಚಿಸಲಾಗಿದೆ.

1,250 ಕೋಟಿ ರೂ ಪ್ಯಾಕೇಜ್ ಬೆನ್ನಲ್ಲೇ ಮತ್ತೊಂದು ಆರ್ಥಿಕ ಪರಿಹಾರಕ್ಕೆ ಸಿಎಂ ಚಿಂತನೆ!

ನೇರ ಖಾತೆಗೆ ಹಣ ವರ್ಗಾವಣೆ:
ಸೇವಾಸಿಂಧುನಲ್ಲಿ ಅರ್ಜಿ ಸಲ್ಲಿಸುವ ಚಾಲಕರ ಅರ್ಜಿ ಪರಿಶೀಲಿಸಿದ ನಂತರ ಅವರ ಖಾತೆಗೆ ನೇರವಾಗಿ ಸಹಾಯಧನ ವರ್ಗಾಯಿಸಲು ಸಾರಿಗೆ ಇಲಾಖೆ ನಿರ್ಧರಿಸಿದೆ. ಅಲ್ಲದೆ, ಸೇವಾ ಸಿಂಧು ಪೋರ್ಟಲ್ ಹೊರತುಪಡಿಸಿ ಬೇರೆ ಯಾವುದೇ ರೂಪದಲ್ಲೂ ಅರ್ಜಿ ಸಲ್ಲಿಸುವಂತಿಲ್ಲ ಎಂದು ಇಲಾಖೆ ಚಾಲಕರಿಗೆ ತಿಳಿಸಿದೆ. ಜತೆಗೆ ಸಹಾಯಧನ ಕೊಡಿಸುತ್ತೇವೆ ಎಂದು ವಂಚಿಸುವವರ ವಿರುದ್ಧವೂ ಎಚ್ಚರವಹಿಸುವಂತೆ ಮನವಿ ಮಾಡಿದೆ.

ಅರ್ಜಿ ಜತೆ ಸಲ್ಲಿಸಬೇಕಿರುವ ದಾಖಲೆಗಳು
2021ರ ಏಪ್ರಿಲ್ 24ರವರೆಗೆ ಚಾಲ್ತಿಯಲ್ಲಿರುವ ಚಾಲನಾ ಪರವಾನಗಿ (ಡಿಎಲ್)
ಒಂದು ವಾಹನಕ್ಕೆ ಒಬ್ಬ ಚಾಲಕರು ಮಾತ್ರ ಅರ್ಜಿ ಸಲ್ಲಿಸಬೇಕು
ಅರ್ಜಿ ಜತೆ ಆಧಾರ್ ಕಾರ್ಡ್, ವಾಹನ ನೋಂದಣಿ ಸಂಖ್ಯೆ, ಚಾಲನಾ ಪರವಾನಗಿ ಸಲ್ಲಿಸಬೇಕು
ಆಧಾರ್ ಸಂಖ್ಯೆ, ಪ್ಯಾನ್ ಸಂಖ್ಯೆ ಲಿಂಕ್ ಆಗಿರುವ ಬ್ಯಾಂಕ್ ಖಾತೆ ವಿವರ…

ವರದಿ. ಶಶಿಕುಮಾರ್ ಚಳ್ಳಕೆರೆ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend