ಚಳ್ಳಕೆರೆ : ನಗರದ ಪೊಲೀಸ್ ಠಾಣೆಯ 7ಜನ ಪೊಲೀಸರಿಗೆ ಕೊರೋನಾ ಸೋಂಕು ಠಾಣೆ ಸಿಲ್ ಡೌನ್…!!!

Listen to this article

ಚಳ್ಳಕೆರೆ : ನಗರದ ಪೊಲೀಸ್ ಠಾಣೆಯ 7ಜನ ಪೊಲೀಸರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಪೊಲೀಸ್ ಠಾಣೆಯನ್ನು ಸೀಲ್ ಡೌನ್ ಮಾಡಲಾಗಿದೆ. ನಿನ್ನೆ ಪೊಲೀಸ್ ಠಾಣೆ ಸಿಬ್ಬಂದಿಗಳಿಗೆ ಕೊರೋನಾ ಟೆಸ್ಟ್ ಮಾಡಿಸಲಾಗಿತ್ತು. ಇಂದು ಪೊಲೀಸರ ರಿಪೋರ್ಟ್ ಪಾಸಿಟಿವ್ ಬಂದಿದ್ದು, ಏಳು ಜನ ಪೊಲೀಸರನ್ನು ಹೋಂ ಐಸೋಲೇಷನ್ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಪೊಲೀಸ್ ಠಾಣೆಯ ಸುತ್ತ ಬ್ಯಾರಿಕೇಡ್ ಹಾಕಿ, ಸೀಲ್ ಡೌನ್ ಮಾಡಲಾಗಿದ್ದು, ತಾತ್ಕಾಲಿಕವಾಗಿ ಚಿತ್ರದುರ್ಗ ರಸ್ತೆಯ ಡಿವೈಎಸ್ಪಿ ಕಚೇರಿಗೆ ಪೊಲೀಸ್ ಠಾಣೆಯನ್ನು ಸ್ಥಳಾಂತರಿಸಲಾಗಿದೆ. ನಗರ ಪೊಲೀಸ್ ಠಾಣೆಯ 7ಜನ ಪೊಲೀಸರಿಗೆ ಕೊರೊನಾ ಸೋಂಕು ಧೃಡ ಪಟ್ಟಿರುವುದು ನಗರದ ಸಾರ್ವಜನಿಕರಲ್ಲಿ ಆತಂಕವನ್ನುಂಟು ಮಾಡಿದೆ..

ವರದಿ.ಶಶಿಕುಮಾರ್ ಚಳ್ಳಕೆರೆ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend