5ನೇ ತರಗತಿ ಮಕ್ಕಳಿಗೆ ಸಿಹಿ ಸುದ್ದಿ, ಆದರ್ಶ ವಿದ್ಯಾಲಯ: 6ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ.!!

Listen to this article

ವರದಿ.ಮಂಜುನಾಥ್, ಎಚ್

ಚಿತ್ರದುರ್ಗ: ಮೊಳಕಾಲ್ಮೂರು ಪಟ್ಟಣದ 2020-21ನೇ ಸಾಲಿನಲ್ಲಿ ಆದರ್ಶ ವಿದ್ಯಾಲಗಳಲ್ಲಿ 6ನೇ ತರಗತಿಗೆ ದಾಖಲಾಗಲು ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಗೆ ಫೆಬ್ರುವರಿ 20 ಕೊನೆಯ ದಿನವಾಗಿದೆ. ಸಮಗ್ರ ಶಿಕ್ಷಣ ಕರ್ನಾಟಕ ಮತ್ತು ಕರ್ನಾಟಕ ಶಾಲಾ ಗುಣಮಟ್ಟ ಮೌಲ್ಯಂಕನ ಮತ್ತು ಅಂಗೀಕರಣ ಪರಿಷತ್ತಿನ ವತಿಯಿಂದ ಆದರ್ಶ ವಿದ್ಯಾಲಯಗಳಲ್ಲಿ 6ನೇ ತರಗತಿಗೆ ದಾಖಲಾಗುವ ಪ್ರವೇಶ ಪರೀಕ್ಷೆಯನ್ನು 2021ರ ಏಪ್ರಿಲ್ 25ರ ಭಾನುವಾರ ಬೆಳಿಗ್ಗೆ 10.30 ರಿಂದ 1.00 ರವರೆಗೆ ನಡೆಸಲಾಗುವುದು. ಪರೀಕ್ಷೆ ಅರ್ಜಿಯನ್ನು ಫೆಬ್ರವರಿ 01 ರಿಂದ 20ರವರೆಗೆ www.schooleduvation.kar.nic.in ಮತ್ತು .www.Vidyavahini.karnataka.gov.in  ವೆಬ್‍ಸೈಟ್‍ನಲ್ಲಿ ಅರ್ಜಿ ಸಲ್ಲಿಸಬಹುದು ಪರೀಕ್ಷೆಯು ಚಳ್ಳಕೆರೆ ಮತ್ತು ಮೊಳಕಾಲ್ಮೂರು ತಾಲ್ಲೂಕುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸರ್ಕಾರಿ ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ 5ನೇ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಈ ತಾಲ್ಲೂಕುಗಳ ಖಾಯಂ ನಿವಾಸಿಗಳ ಮಕ್ಕಳು ಬೇರೆ ತಾಲ್ಲೂಕು ಅಥವಾ ಜಿಲ್ಲೆ ಅಥವಾ ರಾಜ್ಯಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದವರು ಸಹ 6ನೇ ತರಗತಿಯಿಂದ ಮೂಲ ತಾಲ್ಲೂಕಿನಲ್ಲಿ ವ್ಯಾಸಂಗ ಮಾಡಲು ಇಚ್ಛಿಸಿದಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು(ಆಡಳಿತ), ಉಪನಿರ್ದೇಶಕರು(ಅಭಿವೃದ್ಧಿ) ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕ್ಷೇತ್ರ ಸಮನ್ವಯಾಧಿಕಾರಿಗಳ ಕಚೇರಿ ಹಾಗೂ ಚಳ್ಳಕೆರೆ ಮತ್ತು ಮೊಳಕಾಲ್ಮೂರು ಆದರ್ಶ ವಿದ್ಯಾಲಯಗಳಲ್ಲಿ ಪೋಷಕರು ಈ ಸೌಲಭ್ಯವನ್ನು ಬಳಸಿಕೊಂಡು ಉಚಿತವಾಗಿ ಅರ್ಜಿಗಳನ್ನು ಸಲ್ಲಿಸಬಹುದು ಎಂದು ಡಯಟ್ ಪ್ರಾಂಶುಪಾಲರಾದ ಎಸ್.ಕೆ.ಬಿ.ಪ್ರಸಾದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend